
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಪಾಕ್ ತಂಡಕ್ಕೆ ಮೇಜರ್ ಸರ್ಜರಿ ಮಾಡಿದೆ. ಈ ಕಠಿಣ ಕ್ರಮದ ಭಾಗವಾಗಿ ತಂಡದ ಏಳು ಪ್ರಮುಖ ಆಟಗಾರರನ್ನು ಕೈಬಿಡಲಾಗಿದ್ದು, ಮುಖ್ಯ ತರಬೇತುದಾರ ಸೇರಿದಂತೆ ಇಡೀ ಕೋಚಿಂಗ್ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.
ಹೆಡಿಂಗ್ಲೆಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಇನ್ನಿಂಗ್ಸ್ ಮತ್ತು 103 ರನ್‌ಗಳ ಭಾರಿ ಸೋಲು ಹಾಗೂ ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ 194 ರನ್‌ಗಳ ಹೀನಾಯ ಸೋಲಿನ ಬೆನ್ನಲ್ಲೇ ಪಿಸಿಬಿ ಈ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಮೂರನೇ ಪಂದ್ಯಕ್ಕೂ ಮುನ್ನ ಪಾಕ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ.
ಆಗಸ್ಟ್ 31, 2026 ರಂದು ಹೊರಡಿಸಲಾದ ಅಧಿಕೃತ ಆದೇಶದ ಪ್ರಕಾರ, ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ತಕ್ಷಣವೇ ಪ್ರವಾಸದಿಂದ ಮುಕ್ತಗೊಳಿಸಿ ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಲಾಗಿದೆ. ಅದರಂತೆ ಪಾಕ್ ತಂಡದಿಂದ ಹೊರಬಿದ್ದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…
ವಜಾಗೊಂಡ ಕೋಚಿಂಗ್ ಸಿಬ್ಬಂದಿ: ಮುಖ್ಯ ಕೋಚ್ ಸರ್ಫರಾಝ್ ಅಹ್ಮದ್ ಮತ್ತು ಬೌಲಿಂಗ್ ಕೋಚ್ ಉಮರ್ ಗುಲ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ.
ಸೆಪ್ಟೆಂಬರ್ 9 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಹೊಸ ಆಡಳಿತ ಮಂಡಳಿ ಮತ್ತು ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಹೊಸ ಕೋಚ್: ಸದ್ಯ ವೈಟ್-ಬಾಲ್ ಕೋಚ್ ಆಗಿರುವ ಮೈಕ್ ಹೆಸನ್ ಅವರಿಗೆ ಟೆಸ್ಟ್ ತಂಡದ ಮುಖ್ಯ ಕೋಚ್ ಜವಾಬ್ದಾರಿಯನ್ನೂ ನೀಡಲಾಗಿದೆ. ಆಸ್ಟ್ರೇಲಿಯಾದ ಮಾಜಿ ವೇಗಿ ಆಶ್ಲೇ ನಾಫ್ಕೆ ನೂತನ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಇನ್ನು ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆಯ್ಕೆಯಾದ ಹೊಸ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…
ಇದನ್ನೂ ಓದಿ: ಟೀಮ್ ಇಂಡಿಯಾದ ಮುಂದಿನ ಸರಣಿ ಯಾವಾಗ? ಯಾರ ವಿರುದ್ಧ?
ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಈಗಾಗಲೇ 0-2 ಅಂತರದಿಂದ ಸೋತಿರುವ ಪಾಕಿಸ್ತಾನ್ ತಂಡಕ್ಕೆ, ಈ ಆಕಸ್ಮಿಕ ಬದಲಾವಣೆಗಳು ಕೊನೆಯ ಪಂದ್ಯದಲ್ಲಿ ಮಾನ ಉಳಿಸಿಕೊಳ್ಳಲು ಸಹಾಯ ಮಾಡುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.
Published On - 7:31 am, Tue, 1 September 26