AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಸರದಾರರು: ಸೋತು ಸೋತು ಸುಣ್ಣವಾದ ಪಾಕಿಸ್ತಾನ್

New Zealand vs Pakistan, 2nd T20I: ಪಾಕಿಸ್ತಾನ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿದ್ದ ನ್ಯೂಝಿಲೆಂಡ್ ತಂಡವು ಇದೀಗ ದ್ವಿತೀಯ ಪಂದ್ಯದಲ್ಲೂ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 135 ರನ್​ ಕಲೆಹಾಕಿದರೆ, ಈ ಗುರಿಯನ್ನು ಕಿವೀಸ್ ಪಡೆ ಕೇವಲ 13.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಸೋಲಿನ ಸರದಾರರು: ಸೋತು ಸೋತು ಸುಣ್ಣವಾದ ಪಾಕಿಸ್ತಾನ್
Pakistan Team
ಝಾಹಿರ್ ಯೂಸುಫ್
|

Updated on:Mar 18, 2025 | 12:30 PM

Share

ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಪರಾಜಯಗೊಂಡಿದೆ. ಡ್ಯುನೆಡಿನ್​ನ ಯೂನಿವರ್ಸಿಟಿ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಬೌಲಿಂಗ್ ಆಯ್ದುಕೊಂಡಿದ್ದರು. ಮಳೆಯ ಕಾರಣ 15 ಓವರ್​ಗಳಿಗೆ ಸೀಮಿತವಾಗಿದ್ದ ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 9 ವಿಕೆಟ್ ಕಳೆದುಕೊಂಡು 135 ರನ್​ ಕಲೆಹಾಕಿತು.

15 ಓವರ್​ಗಳಲ್ಲಿ 136 ರನ್​ಗಳ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡಕ್ಕೆ ಟಿಮ್ ಸೀಫರ್ಟ್ ಹಾಗೂ ಫಿನ್ ಅಲೆನ್ ಸ್ಪೋಟಕ ಆರಂಭ ಒದಗಿಸಿದ್ದರು. 22 ಎಸೆತಗಳನ್ನು ಎದುರಿಸಿದ ಸೀಫರ್ಟ್ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 45 ರನ್ ಚಚ್ಚಿದರು. ಇನ್ನು ಫಿನ್ ಅಲೆನ್ 16 ಎಸೆತಗಳಲ್ಲಿ 5 ಸಿಕ್ಸ್​ನೊಂದಿಗೆ 38 ರನ್ ಬಾರಿಸಿದರು. ಈ ಮೂಲಕ ನ್ಯೂಝಿಲೆಂಡ್ ತಂಡವು 13.1 ಓವರ್​ಗಳಲ್ಲಿ 137 ರನ್ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಸತತ ಸೋಲುಗಳಿಂದ ಕಂಗೆಟ್ಟ ಪಾಕಿಸ್ತಾನ್:

ಇದು ಪಾಕಿಸ್ತಾನ್ ತಂಡದ 12ನೇ ಸೋಲು ಎಂಬುದು ವಿಶೇಷ. ಅಂದರೆ ಕಳೆದ 16 ಟಿ20 ಪಂದ್ಯಗಳಲ್ಲಿ ಪಾಕ್ ಪಡೆ ಹನ್ನೆರಡು ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಗೆದ್ದಿರುವುದು ದುರ್ಬಲ ತಂಡಗಳ ವಿರುದ್ಧ ಮಾತ್ರ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಅಂದರೆ ಕಳೆದ 16 ಪಂದ್ಯಗಳಲ್ಲಿ ಪಾಕಿಸ್ತಾನ್ ತಂಡ ಝಿಂಬಾಬ್ವೆ, ಐರ್ಲೆಂಡ್ ಮತ್ತು ಕೆನಡಾ ವಿರುದ್ಧ ಮಾತ್ರ ಗೆಲುವು ದಾಖಲಿಸಿದೆ. ಇನ್ನುಳಿದಂತೆ ಆಸ್ಟ್ರೇಲಿಯಾ, ನ್ಯೂಝಿಲೆಂಡ್. ಭಾರತ ಸೇರಿದಂತೆ ಪ್ರಮುಖ ಟೀಮ್​ಗಳ ವಿರುದ್ಧ ಮುಗ್ಗರಿಸಿದೆ.

ಇದೀಗ ನ್ಯೂಝಿಲೆಂಡ್ ವಿರುದ್ಧ ಕೂಡ ಸೋಲುವ ಮೂಲಕ ಪಾಕ್ ಪಡೆ ಸರಣಿ ಸೋಲಿನ ಸನಿಹಕ್ಕೆ ಬಂದು ನಿಂತಿದೆ. ಏಕೆಂದರೆ ಐದು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ 9 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ದ್ವಿತೀಯ ಟಿ20 ಪಂದ್ಯದಲ್ಲಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

ಇನ್ನುಳಿದ ಮೂರು ಪಂದ್ಯಗಳಲ್ಲಿ ಕಿವೀಸ್ ಪಡೆ ಒಂದು ಜಯ ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಅತ್ತ ಪಾಕಿಸ್ತಾನ್ ತಂಡ ಸರಣಿ ಆಸೆಯನ್ನು ಜೀವಂತವಿರಿಸಬೇಕಿದ್ದರೆ ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕು. ಆದರೆ ಇತ್ತ ಝಿಂಬಾಬ್ವೆ, ಐರ್ಲೆಂಡ್ ಮತ್ತು ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಪಾಕಿಸ್ತಾನ್ ಮುಂದಿನ ಪಂದ್ಯದಲ್ಲಿ ಕಿವೀಸ್​ ಪಡೆಗೆ ಸವಾಲೊಡ್ಡಲಿದೆಯಾ ಎಂಬುದೇ ಪ್ರಶ್ನೆ.

Published On - 12:30 pm, Tue, 18 March 25

ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ