AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್​ನಿಂದ ಐವರು ಹೊರಕ್ಕೆ..!

New Zealand vs Pakistan: ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಯ ಮೊದಲೆರಡು ಪಂದ್ಯಗಳಲ್ಲಿ ನ್ಯೂಝಿಲೆಂಡ್ ತಂಡ ಜಯ ಸಾಧಿಸಿದರೆ, ಮೂರನೇ ಮ್ಯಾಚ್​ನಲ್ಲಿ ಪಾಕ್ ಪಡೆ ಗೆಲುವು ದಾಖಲಿಸಿತ್ತು. ಇನ್ನು ನಾಲ್ಕನೇ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ನ್ಯೂಝಿಲೆಂಡ್ ಸರಣಿ ಜಯಿಸಿದೆ. ಇದೀಗ ಈ ಸರಣಿಯ ಕೊನೆಯ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿವೆ.

ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್​ನಿಂದ ಐವರು ಹೊರಕ್ಕೆ..!
Pakistan
Follow us
ಝಾಹಿರ್ ಯೂಸುಫ್
|

Updated on:Mar 26, 2025 | 12:24 PM

ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ್ ತಂಡವು ಇದೀಗ 5ನೇ ಪಂದ್ಯದಲ್ಲಿ ಕಣಕ್ಕಿಳಿದಿದೆ. ವೆಲ್ಲಿಂಗ್ಟನ್​ನ ಸ್ಕೈ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯಕ್ಕಾಗಿ ಪಾಕಿಸ್ತಾನ್ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ ಮಾಡಿಕೊಂಡಿರುವುದು ವಿಶೇಷ.

ಅದರಲ್ಲೂ ತಂಡದ ಪ್ರಮುಖ ವೇಗಿ ಶಾಹೀನ್ ಶಾ ಅಫ್ರಿದಿಯನ್ನು ಆಡುವ ಬಳಗದಿಂದ ಕೈ ಬಿಡಲಾಗಿದೆ. ಮೊದಲ 4 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಶಾಹೀನ್ ಅಫ್ರಿದಿ 10.23 ರ ಎಕಾನಮಿಯಲ್ಲಿ ರನ್ ನೀಡಿದ್ದರು. ಅಲ್ಲದೆ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಈ ಕಳಪೆ ಪ್ರದರ್ಶನದ ಕಾರಣ ಇದೀಗ ಶಾಹೀನ್ ಅಫ್ರಿದಿಯನ್ನು ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಡಲಾಗಿದೆ.

ಹಾಗೆಯೇ ಅಬ್ರಾರ್ ಅಹ್ಮದ್, ಖುಶ್ದಿಲ್ ಶಾ, ಇರ್ಫಾನ್ ಖಾನ್ ಮತ್ತು ಅಬ್ಬಾಸ್ ಅಫ್ರಿದಿ ಅವರನ್ನು ಸಹ ಆಡುವ ಬಳಗದಿಂದ ಕೈ ಬಿಡಲಾಗಿದೆ. ಖುಶ್ದಿಲ್ ಷಾ ಕಳೆದ 4 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 46 ರನ್ ಮಾತ್ರ. ಇನ್ನು ಅಬ್ಬಾಸ್ ಅಫ್ರಿದಿ ಎರಡು ಪಂದ್ಯಗಳಲ್ಲಿ 3 ವಿಕೆಟ್ ಪಡೆದಿದ್ದರು.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ಹಾಗೆಯೇ ಹೊಸ ಆಟಗಾರರಿಗೆ ಅವಕಾಶ ನೀಡಲು ಅಬ್ರಾರ್ ಅಹ್ಮದ್ ಹಾಗೂ ಇರ್ಫಾನ್ ಖಾನ್ ಅವರನ್ನು ಸಹ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಡಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಒಮರ್ ಬಿನ್ ಯೂಸುಫ್, ಉಸ್ಮಾನ್ ಖಾನ್, ಸುಫಿಯಾನ್ ಮೋಕಿಮ್ ಮತ್ತು ಜಹಾನದಾದ್ ಖಾನ್ ಕಣಕ್ಕಿಳಿದಿದ್ದಾರೆ.

ಪಾಕಿಸ್ತಾನ್ ಪ್ಲೇಯಿಂಗ್ 11: ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್) , ಹಸನ್ ನವಾಝ್ , ಸಲ್ಮಾನ್ ಅಘಾ (ನಾಯಕ) , ಒಮೈರ್ ಯೂಸುಫ್ , ಉಸ್ಮಾನ್ ಖಾನ್ , ಶಾದಾಬ್ ಖಾನ್ , ಅಬ್ದುಲ್ ಸಮದ್ , ಜಹಂದಾದ್ ಖಾನ್ , ಹಾರಿಸ್ ರೌಫ್ , ಸುಫಿಯಾನ್ ಮುಖೀಮ್ , ಮೊಹಮ್ಮದ್ ಅಲಿ.

ಇದನ್ನೂ ಓದಿ: David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಿಮ್ ಸೀಫರ್ಟ್ , ಫಿನ್ ಅಲೆನ್ , ಮಾರ್ಕ್ ಚಾಪ್ಮನ್ , ಡೇರಿಲ್ ಮಿಚೆಲ್ , ಜೇಮ್ಸ್ ನೀಶಮ್ , ಮಿಚೆಲ್ ಹೇ (ವಿಕೆಟ್ ಕೀಪರ್) , ಮೈಕೆಲ್ ಬ್ರೇಸ್‌ವೆಲ್ (ನಾಯಕ) , ಇಶ್ ಸೋಧಿ , ಜಾಕೋಬ್ ಡಫಿ , ಬೆನ್ ಸಿಯರ್ಸ್ , ವಿಲಿಯಂ ಒರೋಕ್.

Published On - 12:24 pm, Wed, 26 March 25

ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!