AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಯಿಂದ ಪಾಕಿಸ್ತಾನ್ ಹಿಂದೆ ಸರಿಯುವ ಸಾಧ್ಯತೆ

Champions Trophy 2025: ಪಾಕಿಸ್ತಾನ್ ಚಾಂಪಿಯನ್ಸ್ ಟ್ರೋಫಿ ಆಯೋಜಿಸಬೇಕಿದ್ದರೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ನಡೆಸಲೇಬೇಕು. ಹೈಬ್ರಿಡ್ ಮಾದರಿ ಎಂದರೆ, ಚಾಂಪಿಯನ್ಸ್​ ಟ್ರೋಫಿ ಟೂರ್ನಿಯು ಪಾಕಿಸ್ತಾನದಲ್ಲೇ ಆಯೋಜನೆಗೊಂಡರೂ, ಟೀಮ್ ಇಂಡಿಯಾದ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯಲಿದೆ.

ಚಾಂಪಿಯನ್ಸ್ ಟ್ರೋಫಿಯಿಂದ ಪಾಕಿಸ್ತಾನ್ ಹಿಂದೆ ಸರಿಯುವ ಸಾಧ್ಯತೆ
Champions Trophy 2025
ಝಾಹಿರ್ ಯೂಸುಫ್
|

Updated on: Nov 12, 2024 | 9:31 AM

Share

ಚಾಂಪಿಯನ್ಸ್ ಟ್ರೋಫಿ 2025 ರಿಂದ ಪಾಕಿಸ್ತಾನ್ ತಂಡ ಹೊರಗುಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ‌. ಭಾರತ ತಂಡವು ಟೂರ್ನಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನ್ ಹೋಗಲು ನಿರಾಕರಿಸಿರುವ ಕಾರಣ ಪಿಸಿಬಿ ಈ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ ಎಂದು ಈಗಾಗಲೇ ಬಿಸಿಸಿಐ ಸ್ಪಷ್ಟಪಡಿಸಿದೆ. ಈ ವಿಷಯವನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಪಾಕ್ ಸರ್ಕಾರದ ಮುಂದೆ ಪ್ರಸ್ತಾಪಿಸಿದೆ.

ಇದೇ ವೇಳೆ ಪಾಕ್ ಸರ್ಕಾರ ಟೂರ್ನಿಯಿಂದ ಹಿಂದೆ ಸರಿಯುವ ಬಗ್ಗೆ ಪಿಸಿಬಿ ಜೊತೆ ಚರ್ಚಿಸಿದೆ. ಹೀಗಾಗಿ ಭಾರತವು ಪಾಕಿಸ್ತಾನದಲ್ಲಿ ಆಡಲು ನಿರಾಕರಿಸಿದರೆ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯಲು ಪಾಕ್ ಸರ್ಕಾರ ಸೂಚಿಸಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೀಗಾಗಿ ಭಾರತದ ವಿಷಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿನ ನಡೆಯೇನು ಎಂಬುದನ್ನು ಕಾದು ನೋಡಲು ಪಾಕ್ ಕ್ರಿಕೆಟ್ ಮಂಡಳಿ ಮುಂದಾಗಿದೆ. ಅತ್ತ ಐಸಿಸಿ ಭಾರತದ ಪರ ನಿಲ್ಲುವ ಸಾಧ್ಯತೆ ಹೆಚ್ಚು. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ಸೂಚಿಸುವ ಸಾಧ್ಯತೆಯಿದೆ.

ಐಸಿಸಿಯ ಈ ನಿರ್ಧಾರವು ಅಧಕೃತವಾದರೆ, ಚಾಂಪಿಯನ್ಸ್ ಟ್ರೋಫಿ ಆತಿಥ್ಯದ ವಿಷಯದಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತನ್ನ ನಿರ್ಧಾರ ತಿಳಿಸುವ ಸಾಧ್ಯತೆಯಿದೆ. ಅಲ್ಲದೆ ಟೂರ್ನಿಯನ್ನು ಬಹಿಷ್ಕರಿಸಿ ಪಾಕಿಸ್ತಾನ್ ಹೊರಗುಳಿಯಬಹುದು.

ಆತಿಥ್ಯ ಬದಲಾವಣೆ:

ಒಂದು ವೇಳೆ ಪಾಕಿಸ್ತಾನ್ ತಂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದರೆ, ಬೇರೊಂದು ದೇಶಕ್ಕೆ ಆತಿಥ್ಯದ ಹಕ್ಕು ದೊರೆಯಲಿದೆ. ಇಲ್ಲಿ 2023 ರ  ಏಕದಿನ ವಿಶ್ವಕಪ್ ಅನ್ನು ಭಾರತ ಯಶಸ್ವಿಯಾಗಿ ಆಯೋಜಿಸಿರುವ ಕಾರಣ, ಈ ಆತಿಥ್ಯದ ಹಕ್ಕು ಬಿಸಿಸಿಐ ಪಾಲಾಗುವ ಸಾಧ್ಯತೆ ಹೆಚ್ಚು. ಏಕೆಂದರೆ ಭಾರತದ ಎಲ್ಲಾ ಸ್ಟೇಡಿಯಂಗಳನ್ನು ಕಳೆದ ವರ್ಷವಷ್ಟೇ ನವೀಕರಿಸಲಾಗಿದೆ. ಹೀಗಾಗಿ ದಿಢೀರ್ ಬದಲಾವಣೆಯಿಂದ ಐಸಿಸಿಯ ಮುಂದಿನ ಆಯ್ಕೆ ಭಾರತ ಆಗಿರಲಿದೆ.

ಹೈಬ್ರಿಡ್ ಮಾದರಿ:

ಪಾಕಿಸ್ತಾನ್ ಚಾಂಪಿಯನ್ಸ್ ಟ್ರೋಫಿ ಆಯೋಜಿಸಬೇಕಿದ್ದರೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ನಡೆಸಲೇಬೇಕು. ಹೈಬ್ರಿಡ್ ಮಾದರಿ ಎಂದರೆ, ಚಾಂಪಿಯನ್ಸ್​ ಟ್ರೋಫಿ ಟೂರ್ನಿಯು ಪಾಕಿಸ್ತಾನದಲ್ಲೇ ಆಯೋಜನೆಗೊಂಡರೂ, ಟೀಮ್ ಇಂಡಿಯಾದ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯಲಿದೆ. ಅದರಂತೆ ಭಾರತದ ಪಂದ್ಯಗಳಿಗೆ ಯುಎಇ ಅಥವಾ ಶ್ರೀಲಂಕಾ ಆತಿಥ್ಯವಹಿಸುವ ಸಾಧ್ಯತೆ ದಟ್ಟವಾಗಿದೆ.

ಏಕೆಂದರೆ ಕಳೆದ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ಪಾಕ್ ಕ್ರಿಕೆಟ್ ಮಂಡಳಿ ಹೊಂದಿತ್ತು. ಆದರೆ ಭಾರತ ತಂಡವು ಪಾಕ್​ಗೆ ತೆರಳಲು ಹಿಂದೇಟು ಹಾಕಿದ್ದರಿಂದ ಟೂರ್ನಿಯನ್ನು ಹೈಬ್ರೀಡ್ ಮಾದರಿಯಲ್ಲಿ ಆಯೋಜಿಸಲಾಗಿತ್ತು.

ಇದನ್ನೂ ಓದಿ: ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾ ಕ್ರಿಕೆಟಿಗನ ಪುತ್ರ

ಅದರಂತೆ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಏಷ್ಯಾಕಪ್​ನ್ನು ಆಯೋಜಿಸಲಾಗಿತ್ತು. ಇಲ್ಲಿ ಭಾರತ ತಂಡವು ಫೈನಲ್ ಸೇರಿದಂತೆ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಇದೀಗ ಚಾಂಪಿಯನ್ಸ್​ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ತೆರಳಲು ಟೀಮ್ ಇಂಡಿಯಾ ಹಿಂದೇಟು ಹಾಕಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಕೂಡ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಬೇಕಾದ ಅನಿವಾರ್ಯತೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಿದೆ.