AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ಮುಂದಿರುವುದು ಎರಡೇ ಎರಡು ದಾರಿ..!

Pakistan vs Sri Lanka: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿದಿರುವ ಝಿಂಬಾಬ್ವೆ ಹಾಗೂ ಶ್ರೀಲಂಕಾ ತಂಡಗಳು ಈಗಾಗಲೇ ಹೊರಬಿದ್ದಿವೆ. ಇದೀಗ ಭಾರತ, ಪಾಕಿಸ್ತಾನ್, ವೆಸ್ಟ್ ಇಂಡೀಸ್ ಹಾಗೂ ನ್ಯೂಝಿಲೆಂಡ್ ನಡುವೆ ಸೆಮಿಫೈನಲ್ ರೇಸ್ ಏರ್ಪಟ್ಟಿದೆ. ಇಲ್ಲಿ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಗೆದ್ದರೆ ಮಾತ್ರ ಸೆಮಿಫೈನಲ್​ಗೇರಲಿದೆ. ಅತ್ತ ಪಾಕಿಸ್ತಾನ್ ತಂಡವು ಶ್ರೀಲಂಕಾ ವಿರುದ್ಧ ಅಮೋಘ ಗೆಲುವು ದಾಖಲಿಸಿದರೆ ನಾಕೌಟ್ ಹಂತಕ್ಕೆ ಪ್ರವೇಶಿಸಲಿದೆ.

ಪಾಕಿಸ್ತಾನ್ ಮುಂದಿರುವುದು ಎರಡೇ ಎರಡು ದಾರಿ..!
Pakistan
ಝಾಹಿರ್ ಯೂಸುಫ್
|

Updated on: Feb 28, 2026 | 10:23 AM

Share

T20 World Cup 2026: ಟಿ20 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕಿದ್ದರೆ ಪಾಕಿಸ್ತಾನ್ ತಂಡ ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕು. ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಅನ್ನು ಹೆಚ್ಚಿಸಿಕೊಳ್ಳಲೇಬೇಕು. ಸೂಪರ್-8 ಸುತ್ತಿನ ಗ್ರೂಪ್-2 ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವು ಅಗ್ರಸ್ಥಾನದಲ್ಲಿದ್ದರೆ, ನ್ಯೂಝಿಲೆಂಡ್ ತಂಡ ದ್ವಿತೀಯ ಸ್ಥಾನದಲ್ಲಿದೆ.

ಇದೀಗ ನ್ಯೂಝಿಲೆಂಡ್ ತಂಡವನ್ನು ನೆಟ್ ರನ್ ರೇಟ್​ನಲ್ಲಿ ಹಿಂದಿಕ್ಕಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶ ದೊರೆಯಲಿದೆ. ಆದರೆ ಹೀಗೆ ನೆಟ್ ರನ್ ರೇಟ್​ನಲ್ಲಿ ಕಿವೀಸ್ ಪಡೆಯನ್ನು ಹಿಂದಿಕ್ಕಲು ಪಾಕ್ ತಂಡದ ಮುಂದಿರುವುದು ಎರಡೇ ಎರಡು ದಾರಿ.

ಎರಡೇ ಎರಡು ದಾರಿ:

ಒಂದು ಭಾರೀ ಅಂತರದ ಗೆಲುವು. ಇನ್ನೊಂದು ಅತೀ ಕಡಿಮೆ ಓವರ್​ಗಳಲ್ಲಿ ರನ್​ ಚೇಸ್. ಆದರೆ ಇವೆರಡು ಅಂದುಕೊಂಡಷ್ಟು ಸುಲಭವಲ್ಲ.

  • ಪಾಕ್ ತಂಡ ಮೊದಲು ಬ್ಯಾಟ್ ಮಾಡಿದರೆ 64 ರಿಂದ 65 ರನ್​ಗಳ ಅಂತರದಿಂದ ಜಯ ಸಾಧಿಸಲೇಬೇಕು.
  • ಪಾಕಿಸ್ತಾನ್ ಚೇಸಿಂಗ್ ಮಾಡಿದರೆ 12.4 ರಿಂದ 13.5 ಓವರ್​ಗಳ ಒಳಗೆ ಗರಿಷ್ಠ 200 ರನ್​ಗಳ ಗುರಿಯನ್ನು ಬೆನ್ನತ್ತಬೇಕು.

ಉದಾಹರಣೆಗೆ:- ಶ್ರೀಲಂಕಾ ತಂಡವು 201 ರನ್​ಗಳ ಗುರಿ ನೀಡಿದರೆ ಪಾಕಿಸ್ತಾನ್ ತಂಡವು 14 ಓವರ್​ಗಳ ಒಳಗೆನೇ ಪಂದ್ಯವನ್ನು ಮುಗಿಸುವುದು ಅನಿವಾರ್ಯ.

ಅಂದರೆ ನ್ಯೂಝಿಲೆಂಡ್ ತಂಡದ ನೆಟ್ ರನ್ ರೇಟ್ ಹಿಂದಿಕ್ಕಲು ಪಾಕಿಸ್ತಾನ್ ತಂಡಕ್ಕೆ ಕನಿಷ್ಠ 64 ರನ್​ಗಳ ಅಂತರದ ಗೆಲುವು ಅನಿವಾರ್ಯ. ಇನ್ನು ಶ್ರೀಲಂಕಾ ನೀಡುವ ಗುರಿಯನ್ನು 14 ಓವರ್​ಗಳಲ್ಲಿ ಚೇಸ್ ಮಾಡುವುದು ಸಹ ಅತ್ಯಗತ್ಯ.

ಪಾಕಿಸ್ತಾನ್ ಗೆದ್ದರೂ ಔಟ್:

ಒಂದು ವೇಳೆ ಪಾಕಿಸ್ತಾನ್ ತಂಡವು 64 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಗೆದ್ದರೆ ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ. ಹಾಗೆಯೇ ಶ್ರೀಲಂಕಾ 201 ರನ್​ಗಳ ಗುರಿ ನೀಡಿದರೆ ಪಾಕಿಸ್ತಾನ್ 14 ಓವರ್​ಗಳನ್ನು ಆಡಿದರೂ ಕೂಡ ವಿಶ್ವಕಪ್ ಅಭಿಯಾನ ಅಂತ್ಯವಾಗಲಿದೆ.

ಅಂದರೆ ಪಾಕಿಸ್ತಾನ್ ತಂಡದ ಟಿ20 ವಿಶ್ವಕಪ್​ನ ಭವಿಷ್ಯ 64 ರನ್​ ಹಾಗೂ 13.5 ಓವರ್​ಗಳ ನಡುವೆ ನಿಂತಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆ ಸಂಪೂರ್ಣ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯಲಿದೆ. ಈ ಲೆಕ್ಕಾಚಾರದ ಮೂಲಕ ಗೆಲುವು ಸಾಧಿಸಲು ವಿಫಲವಾದರೆ ನ್ಯೂಝಿಲೆಂಡ್ ತಂಡವು ಟಿ20 ವಿಶ್ವಕಪ್​ನ ಸೆಮಿಫೈನಲ್​ಗೇರಲಿದೆ.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ಒಟ್ಟಿನಲ್ಲಿ ಆರಂಭದಿಂದಲೇ ಸೋಲು-ಗೆಲುವುಗಳ ಲೆಕ್ಕಾಚಾರದೊಂದಿಗೆ ಸೂಪರ್-8 ಸುತ್ತಿಗೆ ಎಂಟ್ರಿ ಕೊಟ್ಟಿರುವ ಪಾಕಿಸ್ತಾನ್ ಇಂದು ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಮ್ಯಾಚ್​ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ ಕನಿಷ್ಠ 64 ರನ್​ಗಳ ಜಯ ಅಥವಾ ಗರಿಷ್ಠ 13.5 ಓವರ್​ಗಳಲ್ಲಿ ಪಂದ್ಯ ಮುಗಿಸಿ ಸೆಮಿಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ