
ಮುಂಬರುವ ಟಿ20 ವಿಶ್ವಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗುವುದಿಲ್ಲವೇ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಬೇಕಿದ್ದರೆ ಫೆಬ್ರವರಿ 15 ರವರೆಗೆ ಕಾಯಲೇಬೇಕು. ಏಕೆಂದರೆ ಭಾರತದ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತೆರೆಮರೆಯಲ್ಲೇ ಯೋಜನೆ ರೂಪಿಸುತ್ತಿದೆ. ಇಂತಹದೊಂದು ಕುತಂತ್ರಕ್ಕೆ ಕೈ ಹಾಕಲು ಮುಖ್ಯ ಕಾರಣ ಐಸಿಸಿ ನೀಡಿರುವ ಎಚ್ಚರಿಕೆ.
ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್ನಿಂದ ಹೊರಗಿಟ್ಟರೆ ಪಾಕಿಸ್ತಾನ್ ಕೂಡ ವಿಶ್ವಕಪ್ ಟೂರ್ನಿ ಆಡುವುದು ಅನುಮಾನ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿತ್ತು. ಪಿಸಿಬಿಯ ಈ ಬೆದರಿಕೆ ಬೆನ್ನಲ್ಲೇ ಐಸಿಸಿ ಖಡಕ್ ಎಚ್ಚರಿಕೆಯನ್ನು ರವಾನಿಸಿತ್ತು. ಈ ಎಚ್ಚರಿಕೆಯ ಸಂದೇಶದಲ್ಲಿ ರವಾನಿಸಲಾದ ಪ್ರಮುಖ ವಿಷಯ ಎಂದರೆ…
ಅಂದರೆ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್ನಿಂದ ಹೊರಗುಳಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಬ್ಯಾನ್ ಆಗುವುದು ಖಚಿತ. ಹೀಗಾಗಿಯೇ ಇದೀಗ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕುತಂತ್ರಕ್ಕೆ ಕೈ ಹಾಕಿದೆ.
ಐಸಿಸಿ ನೀಡಿರುವ ಎಚ್ಚರಿಕೆಯ ಕಾರಣ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದೆ. ಆದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಯೋಜನೆ ರೂಪಿಸುತ್ತಿದೆ.
ಇಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಬಾಯ್ಕಾಟ್ ಮಾಡಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕಾರಣಗಳನ್ನು ಹುಡುಕುತ್ತಿದೆ. ಈ ಮೂಲಕ ಟೂರ್ನಿ ಆಯೋಜಿಸುತ್ತಿರುವ ಬಿಸಿಸಿಐಗೆ ಆರ್ಥಿಕ ನಷ್ಟವನ್ನುಂಟು ಮಾಡಲು ಪ್ಲ್ಯಾನ್ ರೂಪಿಸಲಾಗುತ್ತಿದೆ.
ಇದೇ ಕಾರಣದಿಂದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ, ಪಾಕಿಸ್ತಾನ್ ಪ್ರಧಾನಿ ಶಹಬಾಝ್ ಷರೀಫ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ಚರ್ಚೆಯ ವೇಳೆ ನಿಮ್ಮ ಬಳಿಯಿರುವ ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿ ಬಳಸಿ ಎಂಬ ಸ್ಪಷ್ಟ ಸಂದೇಶ ಪಾಕ್ ಪ್ರಧಾನಿಯಿಂದ ಸಿಕ್ಕಿದೆ.
ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡ ಆಡಬೇಕಾ? ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಬೇಕಾ ಎಂಬುದು ನಿರ್ಧಾರವಾಗಲಿದೆ.
ಇದನ್ನೂ ಓದಿ: ಸೋಲಿನ ನಡುವೆಯೂ RCB ತಂಡದ ಭರ್ಜರಿ ದಾಖಲೆ
ಅತ್ತ ಟೂರ್ನಿಯಲ್ಲಿ ಆಡದಿದ್ದರೆ ಪಾಕಿಸ್ತಾನ್ ತಂಡವನ್ನು ಬ್ಯಾನ್ ಮಾಡುವುದಾಗಿ ಐಸಿಸಿ ಎಚ್ಚರಿಕೆ ನೀಡಿರುವ ಕಾರಣ, ಫೆಬ್ರವರಿ 15 ರಂದು ನಡೆಯಲಿರುವ ಭಾರತದ ವಿರುದ್ಧದ ಪಂದ್ಯವನ್ನು ಮಾತ್ರ ಬಹಿಷ್ಕರಿಸಿ ಪಾಕಿಸ್ತಾನ್, ಐಸಿಸಿ-ಬಿಸಿಸಿಐಗೆ ಆರ್ಥಿಕ ಹೊಡೆತ ನೀಡಲು ಪ್ಲ್ಯಾನ್ ಹಾಕಿಕೊಳ್ಳಲು ಸಾಧ್ಯತೆ ಹೆಚ್ಚಿದೆ.
Published On - 10:54 am, Tue, 27 January 26