AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸೋಲಿಗೆ ಕೋಚ್ ಕಾರಣ: ಬಂಡಾಯವೆದ್ದ ಪಾಕ್ ಆಟಗಾರರು

T20 World Cup 2026: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಒಟ್ಟು 7 ಪಂದ್ಯಗಳನ್ನಾಡಿದೆ. ಈ ಏಳು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 4 ಪಂದ್ಯಗಳಲ್ಲಿ ಮಾತ್ರ. ಅದು ಸಹ ನೆದರ್​ಲೆಂಡ್ಸ್, ಯುಎಸ್​ಎ ಹಾಗೂ ನಮೀಬಿಯ ವಿರುದ್ಧ. ಇನ್ನು ಸೂಪರ್-8 ಸುತ್ತಿನಲ್ಲಿ ಶ್ರೀಲಂಕಾ ವಿರುದ್ಧ ಗೆದ್ದರೂ ಸೆಮಿಫೈನಲ್​ಗೇರಲು ಸಾಧ್ಯವಾಗಿಲ್ಲ.

ನಮ್ಮ ಸೋಲಿಗೆ ಕೋಚ್ ಕಾರಣ: ಬಂಡಾಯವೆದ್ದ ಪಾಕ್ ಆಟಗಾರರು
Pakistan
ಝಾಹಿರ್ ಯೂಸುಫ್
|

Updated on: Mar 05, 2026 | 1:37 PM

Share

T20 World Cup 2026: ಟಿ20 ವಿಶ್ವಕಪ್​ನಲ್ಲಿನ ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್​ನಲ್ಲಿ ಅಲ್ಲೋಲ ಕಲ್ಲೋಲ ಶುರುವಾಗಿದೆ. ಈ ಅಲ್ಲೋಲ ಕಲ್ಲೋಲದ ನಡುವೆ ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಪ್ರತಿ ಆಟಗಾರರಿಗೆ 50 ಲಕ್ಷ ರೂ. (PKR) ದಂಡ ವಿಧಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ. ಇದರ ನಡುವೆ ಸೋಲಿಗೆ ನಾವಲ್ಲ ಕಾರಣ, ಕೋಚ್ ಮೈಕ್ ಹೆಸ್ಸನ್ ಎಂದು ಪಾಕ್ ಆಟಗಾರರು ಬಂಡಾವೆದ್ದಿದ್ದಾರೆ.

ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ತಂಡ ಹೊರಬಿದ್ದ ನಂತರ, ಆಟಗಾರರು ಮುಖ್ಯ ಕೋಚ್ ಮೈಕ್ ಹೆಸ್ಸನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ನಾಯಕ ಸಲ್ಮಾನ್ ಅಲಿ ಅಘಾ ನೇತೃತ್ವದ ತಂಡದ ಆಟಗಾರರು ಮೈಕ್ ಹೆಸ್ಸನ್ ಅವರ ಕಾರ್ಯವೈಖರಿಯ ಬಗ್ಗೆ ಪಿಸಿಬಿಗೆ ಅಧಿಕೃತವಾಗಿ ದೂರು ನೀಡಿದ್ದಾರೆ.

ಕೋಚ್ ಹೆಸ್ಸನ್ ಅವರು ನಾಯಕ ಅಥವಾ ಆಯ್ಕೆ ಸಮಿತಿಯನ್ನು ಸಂಪರ್ಕಿಸದೆ ತಾವೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರ ನಡವಳಿಕೆ ತುಂಬಾ ಕಠಿಣವಾಗಿತ್ತು ಎಂದು ಆಟಗಾರರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಹೀಗಾಗಿ ಟಿ20 ವಿಶ್ವಕಪ್​ನಲ್ಲಿನ ಸೋಲಿಗೆ ಆಟಗಾರರು ಅಲ್ಲ ಕಾರಣ. ಇದಕ್ಕೆ ಮುಖ್ಯ ಕಾರಣ ಕೋಚ್ ಮೈಕ್ ಹೆಸ್ಸನ್ ಎಂದು ಪಾಕ್ ಆಟಗಾರರು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೆ ಮೈಕ್ ಹೆಸ್ಸನ್ ಅವರ ಅತಿಯಾದ ಹಸ್ತಕ್ಷೇಪದಿಂದಾಗಿ ರಾಷ್ಟ್ರೀಯ ಆಯ್ಕೆಗಾರ ಅಲೀಮ್ ದಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಭಾರತದ ವಿರುದ್ಧದ ಪಂದ್ಯದಲ್ಲಿ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮತ್ತು ತಂಡದ ಆಯ್ಕೆಯಲ್ಲಿನ ತಪ್ಪುಗಳು ಸೋಲಿಗೆ ಕಾರಣವೆಂದು ಆಟಗಾರರು ದೂರಿದ್ದಾರೆ. ಇಲ್ಲಿ ತಂಡವನ್ನು ಆಯ್ಕೆ ಮಾಡಿರುವುದು ಮೈಕ್ ಹೆಸ್ಸನ್.

ಅವರ ಕೆಲ ನಿರ್ಧಾರಗಳು ಇಡೀ ತಂಡದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಪಾಕ್ ತಂಡದ ಕಳಪೆ ಪ್ರದರ್ಶನಕ್ಕೆ ಮುಖ್ಯ ಕೋಚ್ ಮೈಕ್ ಹೆಸ್ಸನ್ ಕೂಡ ಕಾರಣಕರ್ತರು ಎಂದು ಪಾಕಿಸ್ತಾನ್ ಆಟಗಾರರು ಆರೋಪಿಸಿದ್ದಾರೆ.

ಇದನ್ನೂ ಓದಿ: VIDEO: ಅದ್ಭುತ ಕ್ಯಾಚ್ ಹಿಡಿದ ಪ್ರೇಕ್ಷಕನಿಗೆ ಸಿಕ್ತು 20 ಸಾವಿರ ರೂ..!

ಸದ್ಯ ಆಟಗಾರರು ದೂರು ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಟೇಬಲ್​ ಮೇಲಿದ್ದು, ಈ ದೂರಿನ ಹೊರತಾಗಿಯೂ ಮೈಕ್ ಹೆಸ್ಸನ್ ಅವರನ್ನು ಪದಚ್ಯುತಗೊಳಿಸುವ ಸಾಧ್ಯತೆಯಿಲ್ಲ ಬದಲಾಗಿ ಅವರ ನಡವಳಿಕೆಯ ಬಗ್ಗೆ ಕಠಿಣ ಎಚ್ಚರಿಕೆ ನೀಡಲಿದ್ದಾರೆ ಎಂದು ವರದಿಯಾಗಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?