AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಟ್ರೋಫಿ ಗೆಲ್ಲುವುದಕ್ಕಿಂತ ಭಾರತವನ್ನು ಸೋಲಿಸುವುದೇ ನಿಜವಾದ ಸವಾಲು; ಪಾಕ್ ಪ್ರಧಾನಿ ಷರೀಫ್

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಕೇವಲ 11 ದಿನಗಳು ಬಾಕಿ ಉಳಿದಿವೆ. ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಭಾರತದ ವಿರುದ್ಧದ ಪಂದ್ಯವನ್ನು ಗೆಲ್ಲುವುದು ದೊಡ್ಡ ಸವಾಲು ಎಂದು ಹೇಳಿದ್ದಾರೆ. ಹಿಂದಿನ ಪಂದ್ಯಗಳಲ್ಲಿ ಪಾಕಿಸ್ತಾನ ಮೇಲುಗೈ ಸಾಧಿಸಿದ್ದು, ಈ ಬಾರಿ ಯಾರು ಗೆಲ್ಲುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

Champions Trophy 2025: ಟ್ರೋಫಿ ಗೆಲ್ಲುವುದಕ್ಕಿಂತ ಭಾರತವನ್ನು ಸೋಲಿಸುವುದೇ ನಿಜವಾದ ಸವಾಲು; ಪಾಕ್ ಪ್ರಧಾನಿ ಷರೀಫ್
Shahbaz Sharif
ಪೃಥ್ವಿಶಂಕರ
|

Updated on:Feb 08, 2025 | 5:29 PM

Share

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಕೇವಲ 11 ದಿನಗಳು ಮಾತ್ರ ಬಾಕಿ ಉಳಿದಿವೆ. ಫೆಬ್ರವರಿ 19 ರಿಂದ ಪಂದ್ಯಾವಳಿ ಆರಂಭವಾದರೂ ಪ್ರೇಕ್ಷಕರು ಕಾದುಕುಳಿತಿರುವ ಪಂದ್ಯ ಫೆಬ್ರವರಿ 23 ರಂದು ನಡೆಯಲಿದೆ. ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಟೂರ್ನಿಯ ಹೈವೋಲ್ಟೇಜ್ ಕದನ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ. ಇದಕ್ಕಾಗಿ ಎರಡೂ ತಂಡಗಳು ಸಿದ್ಧತೆ ನಡೆಸುತ್ತಿದ್ದು ಆತಿಥೇಯ ಪಾಕಿಸ್ತಾನ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಎದುರು ನೋಡುತ್ತಿದ್ದರೆ, ಇತ್ತ ಟೀಂ ಇಂಡಿಯಾ ಕಳೆದ ಬಾರಿಯ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ನಡುವೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಈ ಐಸಿಸಿ ಟೂರ್ನಿಯ ಬಗ್ಗೆ ಮಾತನಾಡಿದ್ದು, ನಮಗೆ ಪಂದ್ಯಾವಳಿಯನ್ನು ಗೆಲ್ಲುವುದಕ್ಕಿಂತ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯವನ್ನು ಗೆಲ್ಲುವುದೇ ನಿಜವಾದ ಸವಾಲು ಎಂದಿದ್ದಾರೆ.

ಭಾರತವನ್ನು ಸೋಲಿಸುವುದು ನಿಜವಾದ ಸವಾಲು

ಚಾಂಪಿಯನ್ಸ್ ಟ್ರೋಫಿಗಾಗಿ ಹೊಸದಾಗಿ ನವೀಕರಿಸಲಾದ ಗಡಾಫಿ ಕ್ರೀಡಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಶಹಬಾಜ್, ‘ನಮ್ಮ ತಂಡಕ್ಕೆ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ಮಾತ್ರವಲ್ಲದೆ ಫೆಬ್ರವರಿ 23 ರಂದು ದುಬೈನಲ್ಲಿ ಭಾರತವನ್ನು ಸೋಲಿಸುವುದು ಸಹ ನಿಜವಾದ ಸವಾಲು. ತಮ್ಮ ಆಟಗಾರರು ಭಾರತದ ವಿರುದ್ಧ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಬೇಕು. ನಮ್ಮ ತಂಡವು ತುಂಬಾ ಬಲಿಷ್ಠವಾಗಿದ್ದು, ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ.

ಆದರೆ ಈಗ ಅವರ ಮುಂದಿರುವ ನಿಜವಾದ ಸವಾಲು ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವುದು ಮಾತ್ರವಲ್ಲದೆ ದುಬೈನಲ್ಲಿ ನಡೆಯಲಿರುವ ಪಂದ್ಯದಲ್ಲಿ ನಮ್ಮ ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಸೋಲಿಸುವುದು. ಪಾಕಿಸ್ತಾನ ತಂಡಕ್ಕೆ ಇಡೀ ದೇಶದ ಬೆಂಬಲವಿದೆ. ಸುಮಾರು 29 ವರ್ಷಗಳ ನಂತರ ನಾವು ಐಸಿಸಿ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದರಿಂದ ಇದು ಪಾಕಿಸ್ತಾನಕ್ಕೆ ಒಂದು ದೊಡ್ಡ ಸಂದರ್ಭವಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲೂ ನಮ್ಮ ತಂಡ ದೇಶಕ್ಕೆ ಹೆಮ್ಮೆ ತರುತ್ತದೆ ಎಂಬ ಸಂಪೂರ್ಣ ನಂಬಿಕೆ ನನಗಿದೆ ಎಂದು ಪ್ರಧಾನಿ ಷರೀಫ್ ಹೇಳಿದ್ದಾರೆ.

ಮುಖಾಮುಖಿ ದಾಖಲೆ

ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡೂ ತಂಡಗಳು ಐದು ಬಾರಿ ಮುಖಾಮುಖಿಯಾಗಿದ್ದು, ಪಾಕಿಸ್ತಾನ ಮೂರು ಬಾರಿ ಗೆದ್ದಿದ್ದರೆ, ಭಾರತ ಕೇವಲ ಎರಡು ಬಾರಿ ಮಾತ್ರ ಗೆದ್ದಿದೆ. 2017 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಎರಡು ಪಂದ್ಯಗಳನ್ನು ಆಡಿದ್ದವು. ಆ ಸಮಯದಲ್ಲಿ, ಟೀಂ ಇಂಡಿಯಾ ಗುಂಪು ಹಂತದಲ್ಲಿ ಪಾಕಿಸ್ತಾನ ವಿರುದ್ಧ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆದರೆ ತಂಡವು ಫೈನಲ್‌ನಲ್ಲಿ ಪಾಕಿಸ್ತಾನದ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.

ಉಭಯ ತಂಡಗಳು

ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ), ಬಾಬರ್ ಆಝಂ, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಆಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Sat, 8 February 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!