ICC World Cup 2023: ವಿಶ್ವಕಪ್​ನಲ್ಲಿ ಆಡಲು ಪಾಕಿಸ್ತಾನ್ ಹಿಂದೇಟು? ಸಮಿತಿ ರಚಿಸಿದ ಪಾಕ್ ಪ್ರಧಾನಿ

ICC World Cup 2023: ಪಾಕಿಸ್ತಾನ್ ತಂಡದ ಪಂದ್ಯಗಳಿಗೆ ಹೈದರಾಬಾದ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದ ಮೈದಾನಗಳು ಆತಿಥ್ಯವಹಿಸಲಿದೆ.

ICC World Cup 2023: ವಿಶ್ವಕಪ್​ನಲ್ಲಿ ಆಡಲು ಪಾಕಿಸ್ತಾನ್ ಹಿಂದೇಟು? ಸಮಿತಿ ರಚಿಸಿದ ಪಾಕ್ ಪ್ರಧಾನಿ
Pakistan Team
Follow us
| Updated By: ಝಾಹಿರ್ ಯೂಸುಫ್

Updated on: Jul 08, 2023 | 10:54 PM

ICC World Cup 2023: ಭಾರತದಲ್ಲಿ ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡ ಭಾಗವಹಿಸುವುದಿಲ್ಲವಾ? ಈ ಪ್ರಶ್ನೆಗೆ ಇದುವರೆಗೆ ಪಾಕ್ ಕ್ರಿಕೆಟ್ ಮಂಡಳಿ ಐಸಿಸಿಗೆ ಉತ್ತರ ನೀಡಿಲ್ಲ. ಇದರ ನಡುವೆ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಭಾಗವಹಿಸುವಿಕೆಯನ್ನು ಖಚಿತ ಪಡಿಸಲು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ನೇತೃತ್ವದ ಸಮಿತಿಯನ್ನು ಪಾಕ್ ಪ್ರಧಾನಿ ಶಹಬಾಜ್ ಷರೀಫ್ ರಚಿಸಿದ್ದಾರೆ.

ಉಭಯ ದೇಶಗಳ ನಡುವಿನ ಸಂಬಂಧದಿಂದ ಹಿಡಿದು ಕ್ರೀಡೆಯನ್ನು ರಾಜಕೀಯದಿಂದ ದೂರವಿಡುವ ಮಹತ್ವದವರೆಗಿನ ಎಲ್ಲಾ ಅಂಶಗಳನ್ನು ಸಮಿತಿಯು ಚರ್ಚಿಸಲಿದೆ. ಹಾಗೆಯೇ ಈ ಸಮಿತಿಯ ಸದಸ್ಯರು ಭಾರತಕ್ಕೂ ಆಗಮಿಸಿ ಪರಿಶೀಲಿಸಲಿದೆ ಎಂದು ವರದಿಯಾಗಿದೆ. ಇದಾದ ಬಳಿಕ ಪಾಕ್ ಪ್ರಧಾನಿಗೆ ವರದಿ ಸಲ್ಲಿಸಲಿದ್ದು, ಆ ಬಳಿಕವಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಈಗಾಗಲೇ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆದರೆ ಪಾಕ್ ತಂಡದ ಭಾಗವಹಿಸುವಿಕೆಯನ್ನು ಇನ್ನೂ ಕೂಡ ದೃಢಪಡಿಸಲಾಗಿಲ್ಲ. ಅಲ್ಲದೆ ಪಾಕಿಸ್ತಾನ್ ತಂಡದ ಪಾಲ್ಗೊಳ್ಳುವಿಕೆಗೆ ಸರ್ಕಾರದ ಅನುಮತಿಯ ಅಗತ್ಯವಿದೆ ಎಂದು ಪಿಸಿಬಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ.

ಇದೀಗ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಕ್ರೀಡಾ ಸಚಿವ ಅಹ್ಸಾನ್ ಮಜಾರಿ, ಮರ್ಯಮ್ ಔರಂಗಜೇಬ್, ಅಸದ್ ಮಹಮೂದ್, ಅಮೀನ್ ಉಲ್ ಹಕ್, ಕಮರ್ ಜಮಾನ್ ಕೈರಾ ಮತ್ತು ಮಾಜಿ ರಾಜತಾಂತ್ರಿಕ ತಾರಿಕ್ ಫಾತ್ಮಿ ಒಳಗೊಂಡ ಸಮಿತಿಯನ್ನು ಪಾಕ್ ಪ್ರಧಾನಿ ಶಹಬಾಜ್ ಷರೀಫ್ ರಚಿಸಿದ್ದಾರೆ.

ಪಾಕ್​ ತಂಡಕ್ಕೆ ನಿಗದಿಯಾಗಿರುವ ಸ್ಥಳಗಳನ್ನು ಪರಿಶೀಲಿಸಲು, ಭದ್ರತಾ ವ್ಯವಸ್ಥೆಗಳ ಮಾಹಿತಿ ಪಡೆಯಲು ನಿಯೋಗವೊಂದನ್ನು ಭಾರತಕ್ಕೆ ಕಳುಹಿಸಲಾಗುತ್ತದೆ. ಇದಾದ ಬಳಿಕ ಅಂತಿಮ ವರದಿಯನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರೂ ಆಗಿರುವ ಪ್ರಧಾನಿಗೆ ಸಲ್ಲಿಸಲಿದ್ದಾರೆ. ಆ ಬಳಿಕ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಇತ್ತ ಪಾಕಿಸ್ತಾನ್ ತಂಡದ ಪಂದ್ಯಗಳಿಗೆ ಹೈದರಾಬಾದ್, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾದ ಮೈದಾನಗಳು ಆತಿಥ್ಯವಹಿಸಲಿದೆ. ಅಲ್ಲದೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಅಕ್ಟೋಬರ್ 15 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದು, ಇದಾಗ್ಯೂ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಭದ್ರತಾ ವ್ಯವಸ್ಥೆಯ ನೆಪಗಳನ್ನು ಹೇಳುತ್ತಿರುವುದು ವಿಪರ್ಯಾಸ.

ಏಷ್ಯಾಕಪ್​ಗೆ ಪ್ರತೀಕಾರ?

ಈ ಬಾರಿಯ ಏಷ್ಯಾಕಪ್ ಅನ್ನು ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಂದಿತ್ತು. ಆದರೆ ಪಾಕ್​ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ತಂಡ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಅಲ್ಲದೆ ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜಿಸುವಂತೆ ತಿಳಿಸಿತ್ತು.

ಅಂತಿಮವಾಗಿ ಬಿಸಿಸಿಐ ಡಿಮ್ಯಾಂಡ್​ಗೆ ತಲೆಬಾಗಿದ ಪಾಕ್ ಕ್ರಿಕೆಟ್ ಬೋರ್ಡ್ ಏಷ್ಯಾಕಪ್ ಅನ್ನು ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಆಯೋಜಿಸಲು ನಿರ್ಧರಿಸಿದೆ. ಅಂದರೆ ಇಲ್ಲಿ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದೆ.

ಇದನ್ನೂ ಓದಿ: Zimbabwe: ಝಿಂಬಾಬ್ವೆ ಅಬ್ಬರಕ್ಕೆ ಪಾಕಿಸ್ತಾನ್ ದಾಖಲೆ ಧೂಳೀಪಟ

ಇದೀಗ ಪಾಕಿಸ್ತಾನಕ್ಕೆ ಬರಲು ಹಿಂದೇಟು ಹಾಕಿರುವ ಭಾರತದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಪಾಕ್ ಕ್ರಿಕೆಟ್ ಬೋರ್ಡ್  ಏಕದಿನ ವಿಶ್ವಕಪ್​ನಲ್ಲಿ ತಮ್ಮ ತಂಡದ ಭಾಗವಹಿಸುವಿಕೆಯನ್ನು ಖಚಿಪಡಿಸಲು ಮೀನಮೇಷ ಎಣಿಸುತ್ತಿದೆ.

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್