AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL 2025: ಭಾರತದ ದಾಳಿಯ ಭಯ; ಪಾಕ್ ಸೂಪರ್ ಲೀಗ್ ಬೇರೆ ದೇಶಕ್ಕೆ ಸ್ಥಳಾಂತರ

Pakistan PSL Relocated: ಭಾರತದ ಪ್ರತೀಕಾರದ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ವಿದೇಶಿ ಆಟಗಾರರ ಭಯದಿಂದ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಪಂದ್ಯಗಳನ್ನು ದುಬೈ ಅಥವಾ ದೋಹಾಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ರಾವಲ್ಪಿಂಡಿ ಕ್ರೀಡಾಂಗಣದ ಮೇಲೆ ಡ್ರೋನ್ ದಾಳಿಯ ನಂತರ ಭಯ ಹೆಚ್ಚಾಗಿದೆ. ಪಿಎಸ್‌ಎಲ್‌ನ ಭವಿಷ್ಯ ಅನಿಶ್ಚಿತವಾಗಿದೆ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಭಾರಿ ಆರ್ಥಿಕ ನಷ್ಟವಾಗುವ ಸಾಧ್ಯತೆಯಿದೆ.

PSL 2025: ಭಾರತದ ದಾಳಿಯ ಭಯ; ಪಾಕ್ ಸೂಪರ್ ಲೀಗ್ ಬೇರೆ ದೇಶಕ್ಕೆ ಸ್ಥಳಾಂತರ
Psl
ಪೃಥ್ವಿಶಂಕರ
|

Updated on: May 08, 2025 | 7:28 PM

Share

ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam terrorist attack) ನಂತರ ಭಾರತವು ಪ್ರತೀಕಾರದ ಕ್ರಮ ಕೈಗೊಂಡಿರುವುದರಿಂದ ಪಾಕಿಸ್ತಾನದಲ್ಲಿ ಭಯದ ವಾತಾವರಣವಿದೆ. ಭಯ ಎಷ್ಟರ ಮಟ್ಟಿಗೆ ಹೆಚ್ಚಿದೆ ಎಂದರೆ ಈಗ ಪಾಕಿಸ್ತಾನ ಸೂಪರ್ ಲೀಗ್ (PSL) ಪಂದ್ಯಾವಳಿಯನ್ನು ದೇಶದ ಹೊರಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಪಿಎಸ್‌ಎಲ್‌ನ ಉಳಿದ ಪಂದ್ಯಗಳನ್ನು ದುಬೈ ಅಥವಾ ದೋಹಾಗೆ ಸ್ಥಳಾಂತರಿಸಬಹುದು ಎಂಬ ವರದಿಗಳಿವೆ. ಗುರುವಾರ ಮಧ್ಯಾಹ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧಿಕಾರಿಗಳು ಈ ವಿಷಯದ ಬಗ್ಗೆ ಚರ್ಚಿಸಿದ್ದರು. ಅಲ್ಲದೆ ಭಾರತದ ದಾಳಿಗೆ ಬೆದರಿರುವ ವಿದೇಶಿ ಆಟಗಾರರು ಈಗಾಗಲೇ ಪಾಕಿಸ್ತಾನವನ್ನು ತೊರೆಯಲು ಮುಂದಾಗಿದ್ದಾರೆ. ಹೀಗಾಗಿ ಅವಮಾನವನ್ನು ತಪ್ಪಿಸಲು ಪಾಕ್ ಕ್ರಿಕೆಟ್ ಮಂಡಳಿ ಲೀಗ್ ಅನ್ನು ಸ್ಥಳಾಂತರಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದ ಮೇಲೆ ಭಾರೀ ಒತ್ತಡ

ಮೇಲೆ ಹೇಳಿದಂತೆ ಪಿಎಸ್ಎಲ್‌ನ ಉಳಿದ ಪಂದ್ಯಗಳನ್ನು ವಿದೇಶದಲ್ಲಿ ಆಯೋಜಿಸಲು ಪಾಕ್ ಕ್ರಿಕೆಟ್ ಮಂಡಳಿ ಯೋಜಿಸುತ್ತಿದೆ. ಏಕೆಂದರೆ ಈ ಲೀಗ್​ನಲ್ಲಿ ಬಹಳಷ್ಟು ವಿದೇಶಿ ಆಟಗಾರರು ಆಡುತ್ತಿದ್ದಾರೆ. ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್‌ನ ಅನೇಕ ಆಟಗಾರರು ಪಾಕಿಸ್ತಾನ ಸೂಪರ್ ಲೀಗ್‌ನ ಭಾಗವಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತದ ದಾಳಿಗೆ ಬೆದರಿರುವ ಇಂಗ್ಲೆಂಡ್ ಆಟಗಾರರು ಭಯಭೀತರಾಗಿದ್ದು, ಈಗಾಗಲೇ ಇಸಿಬಿಯಿಂದ ಸಹಾಯವನ್ನು ಕೋರಿದ್ದಾರೆ ಎಂಬ ವರದಿಗಳಿವೆ. ಆದರೆ ಪಾಕಿಸ್ತಾನ ಸೂಪರ್ ಲೀಗ್ ಪಂದ್ಯಗಳನ್ನು ದೋಹಾ ಅಥವಾ ದುಬೈಗೆ ಸ್ಥಳಾಂತರಿಸಿದರೆ, ಪಿಸಿಬಿಗೆ ಭಾರಿ ಆರ್ಥಿಕ ನಷ್ಟವಾಗುತ್ತದೆ.

IPL 2025: ಆಪರೇಷನ್ ಸಿಂಧೂರ; ಐಪಿಎಲ್ ಪಂದ್ಯ ಧರ್ಮಶಾಲಾದಿಂದ ಸ್ಥಳಾಂತರ

ರಾವಲ್ಪಿಂಡಿ ಕ್ರೀಡಾಂಗಣದ ಮೇಲೆ ಡ್ರೋನ್ ದಾಳಿ

ಮಂಗಳವಾರ ತಡರಾತ್ರಿ ಪಿಒಕೆ ಮತ್ತು ಪಾಕಿಸ್ತಾನದಲ್ಲಿ ನಡೆದ ವಾಯುದಾಳಿಯ ನಂತರ, ಗುರುವಾರ ಬೆಳಿಗ್ಗೆ ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ಭಾರತ ಡ್ರೋನ್ ದಾಳಿ ನಡೆಸಿದೆ. ಈ ದಾಳಿಗಳ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣವಿದೆ. ಗುರುವಾರ ರಾತ್ರಿ ಪಿಎಸ್‌ಎಲ್ ಪಂದ್ಯ ನಡೆಯಬೇಕಿದ್ದ ರಾವಲ್ಪಿಂಡಿ ಕ್ರೀಡಾಂಗಣದಲ್ಲಿಯೂ ಡ್ರೋನ್ ದಾಳಿ ನಡೆದಿದೆ. ಹೀಗಾಗಿ ಈ ದಾಳಿಯ ನಂತರ ಪಂದ್ಯವನ್ನು ಮುಂದೂಡಲಾಗಿದೆ. ಇಷ್ಟೇ ಅಲ್ಲ, ಪಾಕಿಸ್ತಾನ ಸೂಪರ್ ಲೀಗ್‌ನ ಪ್ರತಿಯೊಂದು ಪಂದ್ಯವನ್ನು ಸದ್ಯಕ್ಕೆ ಕರಾಚಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆಯಾದರೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈ ಸುದ್ದಿಯನ್ನು ಇನ್ನೂ ದೃಢಪಡಿಸಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ