6.4 ಓವರ್​ಗಳಲ್ಲಿ ವಿಶ್ವಕಪ್​ನಿಂದ ಹೊರಬಿದ್ದ ಪಾಕಿಸ್ತಾನ್..!

| Updated By: ಝಾಹಿರ್ ಯೂಸುಫ್

Updated on: Nov 11, 2023 | 7:01 PM

Pakistan vs England: ಬೆನ್ ಸ್ಟೋಕ್ಸ್​, ಜೋ ರೂಟ್ ಹಾಗೂ ಜಾನಿ ಬೈರ್​ಸ್ಟೋವ್ ಬಾರಿಸಿದ ಅರ್ಧಶತಕಗಳೊಂದಿಗೆ ಇಂಗ್ಲೆಂಡ್ ತಂಡವು ನಿಗದಿತ 50 ಓವರ್​ಗಳಲ್ಲಿ 337 ರನ್​ ಕಲೆಹಾಕಿತು. ಈ ಬೃಹತ್ ಗುರಿಯನ್ನು ಕೇವಲ 6.2 ಓವರ್​ಗಳಲ್ಲಿ ಚೇಸ್ ಮಾಡಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶವಿತ್ತು.

6.4 ಓವರ್​ಗಳಲ್ಲಿ ವಿಶ್ವಕಪ್​ನಿಂದ ಹೊರಬಿದ್ದ ಪಾಕಿಸ್ತಾನ್..!
Pakistan
Follow us on

ಏಕದಿನ ವಿಶ್ವಕಪ್ 2023 ರಿಂದ ಪಾಕಿಸ್ತಾನ್ ತಂಡ ಅಧಿಕೃತವಾಗಿ ಹೊರಬಿದ್ದಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯುತ್ತಿರುವ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್​ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್​ (84), ಜೋ ರೂಟ್ (60) ಹಾಗೂ ಜಾನಿ ಬೈರ್​ಸ್ಟೋವ್ (59) ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದರು.

ಈ ಅರ್ಧಶತಕಗಳೊಂದಿಗೆ ಇಂಗ್ಲೆಂಡ್ ತಂಡವು ನಿಗದಿತ 50 ಓವರ್​ಗಳಲ್ಲಿ 337 ರನ್​ ಕಲೆಹಾಕಿತು. ಈ ಬೃಹತ್ ಗುರಿಯನ್ನು ಕೇವಲ 6.4 ಓವರ್​ಗಳಲ್ಲಿ ಚೇಸ್ ಮಾಡಿದರೆ ಮಾತ್ರ ಪಾಕಿಸ್ತಾನ್ ತಂಡಕ್ಕೆ ಸೆಮಿಫೈನಲ್​ಗೇರಲು ಅವಕಾಶವಿತ್ತು.

ಅಂದರೆ ಇಲ್ಲಿ ನ್ಯೂಝಿಲೆಂಡ್ ತಂಡದ ನೆಟ್​ ರನ್​ ರೇಟ್​ ಅನ್ನು ಹಿಂದಿಕ್ಕಿದರೆ ಮಾತ್ರ ಪಾಕ್ ತಂಡಕ್ಕೆ ಸೆಮಿಫೈನಲ್​ಗೇರಬಹುದಿತ್ತು. ಹೀಗೆ ನೆಟ್​ ರನ್​ ರೇಟ್ ಹಿಂದಿಕ್ಕಲು ಪಾಕ್ ತಂಡವು ಇಂಗ್ಲೆಂಡ್ ನೀಡಿದ 338 ರನ್​ಗಳ ಗುರಿಯನ್ನು ಕೇವಲ 6.4 ಓವರ್​ಗಳಲ್ಲಿ ಚೇಸ್ ಮಾಡಬೇಕಿತ್ತು.

ಆದರೆ 6.4 ಓವರ್​ಗಳಲ್ಲಿ ಪಾಕಿಸ್ತಾನ್ ತಂಡ ಕಲೆಹಾಕಿದ್ದು ಕೇವಲ 30 ರನ್​ಗಳು ಮಾತ್ರ. ಇನ್ನು ಈ ಪಂದ್ಯದಲ್ಲಿ ಪಾಕ್ ತಂಡ ಗೆದ್ದರೂ ನೌಕೌಟ್ ಹಂತಕ್ಕೇರುವುದಿಲ್ಲ. ಇದರೊಂದಿಗೆ ಏಕದಿನ ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡವು ಅಧಿಕೃತವಾಗಿ ಹೊರಬಿದ್ದಂತಾಗಿದೆ.

ಹಾಗೆಯೇ ಏಕದಿನ ವಿಶ್ವಕಪ್​ನ ಸೆಮಿಫೈನಲ್ಸ್​ ಪಂದ್ಯಗಳಲ್ಲಿ ಭಾರತ, ನ್ಯೂಝಿಲೆಂಡ್, ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿದೆ.

ಇಂಗ್ಲೆಂಡ್ (ಪ್ಲೇಯಿಂಗ್ XI): ಜಾನಿ ಬೈರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಗುಸ್ ಅಟ್ಕಿನ್ಸನ್, ಆದಿಲ್ ರಶೀದ್.

ಇದನ್ನೂ ಓದಿ: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತದ ದಾಖಲೆ ಮುರಿದ ಅಫ್ಘಾನಿಸ್ತಾನ್

ಪಾಕಿಸ್ತಾನ್ (ಪ್ಲೇಯಿಂಗ್ XI): ಅಬ್ದುಲ್ಲಾ ಶಫೀಕ್, ಫಖರ್ ಝಮಾನ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್.

 

Published On - 6:59 pm, Sat, 11 November 23