IND vs PAK, ICC World Cup: ಕೊಹ್ಲಿ ಬಳಿ ಓಡಿ ಬಂದು ಸಹಿ ಮಾಡಿದ ಜೆರ್ಸಿ ಕೇಳಿದ ಬಾಬರ್ ಅಝಂ: ವಿಡಿಯೋ ನೋಡಿ

Virat Kohli gifted a signed jersey to Babar Azam: ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ಮುಗಿದ ಬಳಿಕ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಪಾಕಿಸ್ತಾನದ ನಾಯಕ ಬಾಬರ್ ಅಝಂ ಅವರಿಗೆ ತಮ್ಮ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ವೈರಲ್ ಆಗುತ್ತಿದೆ.

IND vs PAK, ICC World Cup: ಕೊಹ್ಲಿ ಬಳಿ ಓಡಿ ಬಂದು ಸಹಿ ಮಾಡಿದ ಜೆರ್ಸಿ ಕೇಳಿದ ಬಾಬರ್ ಅಝಂ: ವಿಡಿಯೋ ನೋಡಿ
Virat Kohli Jesrsey Babar Azam
Follow us
Vinay Bhat
|

Updated on: Oct 14, 2023 | 10:31 PM

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಬದ್ಧವೈರಿಗಳ ಕಾದಾಟದಲ್ಲಿ ಸಂಪೂರ್ಣವಾಗಿ ಮೇಲುಗೈ ಸಾಧಿಸಿದ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತು. ಈ ಪಂದ್ಯ ಮುಗಿದ ಬಳಿಕ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶೇಷ ಘಟನೆಯೊಂದು ನಡೆದಿದೆ. ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಅವರು ಪಾಕಿಸ್ತಾನದ ನಾಯಕ ಬಾಬರ್ ಅಝಂ ಅವರಿಗೆ ತಮ್ಮ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು.

ಕ್ರಿಕೆಟ್ ಲೋಕದ ಶ್ರೇಷ್ಠ ಬ್ಯಾಟರ್ ಹಾಗೂ ಐಸಿಸಿ ಏಕದಿನ ರ್ಯಾಂಕಿಂಗ್​ನಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಬಾಬರ್ ಅವರು ಕೊಹ್ಲಿ ಬಳಿ ಓಡಿ ಬಂದು ಜೆರ್ಸಿಗೆ ಸಹಿ ಹಾಕಿ ಎಂದು ಕೇಳಿರುವುದನ್ನು ಕಂಡು ಕೊಹ್ಲಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬಾಬರ್ ಅವರು ಜೆರ್ಸಿಯನ್ನು ಹಿಡಿದುಕೊಂಡಿದ್ದು ಇದರ ಮೇಲೆ ವಿರಾಟ್ ಸಹಿ ಮಾಡುತ್ತಿರುವುದನ್ನು ಕಾಣಬಹುದು. ವಿಶೇಷ ಎಂದರೆ ಕೊಹ್ಲಿ ಬಾಬರ್‌ಗೆ ಎರಡು ಜೆರ್ಸಿಗಳನ್ನು ನೀಡಿದ್ದಾರೆ.

ಇದನ್ನೂ ಓದಿ
Image
ಪಾಕಿಸ್ತಾನ ನೀಡಿದ ಪ್ರದರ್ಶನಕ್ಕೆ ಬೇಸರ ವ್ಯಕ್ತಪಡಿಸಿದ ರೋಹಿತ್ ಶರ್ಮಾ
Image
ಮೋದಿ ಸ್ಟೇಡಿಯಂನಲ್ಲಿ ರೋಹಿತ್ ಸಿಡಿಲು: ಭಾರತಕ್ಕೆ 7 ವಿಕೆಟ್​ಗಳ ಜಯ
Image
ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತೇ?
Image
ಬಾಯ್, ಬಾಯ್: ವಿಕೆಟ್ ಕಿತ್ತಾಗ ಹಾರ್ದಿಕ್ ಕೋಪದಲ್ಲಿ ಆಡಿದ ಮಾತು ವೈರಲ್

ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಯಿಂದ ನಡೆಯಿತು ದೊಡ್ಡ ತಪ್ಪು

ಇಲ್ಲಿದೆ ನೋಡಿ ವಿರಾಟ್ ಕೊಹ್ಲಿ ಸಹಿ ಮಾಡಿ ಬಾಬರ್ ಅಝಂಗೆ ಜೆರ್ಸಿ ನೀಡಿದ ವಿಡಿಯೋ:

ವಿರಾಟ್ ಕೊಹ್ಲಿ ಪಾಕಿಸ್ತಾನ ಆಟಗಾರರಿಗೆ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಏಷ್ಯಾಕಪ್ 2022 ರ ಪಂದ್ಯದ ನಂತರ ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್‌ಗೆ ಕೊಹ್ಲಿ ಇದೇ ರೀತಿ ಮಾಡಿದ್ದರು. ಪಾಕಿಸ್ತಾನದ ವಿರುದ್ಧ ಭಾರತ ಐದು ವಿಕೆಟ್‌ಗಳ ಜಯ ಸಾಧಿಸಿದ ನಂತರ ಕೊಹ್ಲಿ ಸಹಿ ಮಾಡಿದ ಜೆರ್ಸಿಯನ್ನು ರೌಫ್‌ಗೆ ಉಡುಗೊರೆಯಾಗಿ ನೀಡಿದ್ದರು.

ವಿಶ್ವಕಪ್​ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳಿಂದ ಗೆದ್ದು ಬೀಗಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕ್ರಿಕೆಟ್ ತಂಡ 42.5 ಓವರ್​ಗಳಲ್ಲಿ 191 ರನ್​ಗಳಿಗೆ ಆಲೌಟ್ ಆಯಿತು. ಬಾಬರ್ ಅಝಂ ಅರ್ಧಶತಕ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡ ರೋಹಿತ್ ಶರ್ಮಾ ಅವರ ಸ್ಫೋಟಕ 86 ರನ್ ಹಾಗೂ ಶ್ರೇಯಸ್ ಅಯ್ಯರ್ ಅವರ ಅರ್ಧಶತಕ ನೆರವಿನಿಂದ 30.3 ಓವರ್​ನಲ್ಲಿ ಗೆಲುವು ಕಂಡಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್
ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಟ್ಟ ಭವ್ಯಾ
ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಟ್ಟ ಭವ್ಯಾ
ಸಾಲ ಸಿಗದಿದ್ದರೆ ರೈತ ಸಂಕಷ್ಟ ಮತ್ತು ಶೋಷಣೆಗೆ ಒಳಗಾಗುತ್ತಾನೆ: ಸಿದ್ದರಾಮಯ್ಯ
ಸಾಲ ಸಿಗದಿದ್ದರೆ ರೈತ ಸಂಕಷ್ಟ ಮತ್ತು ಶೋಷಣೆಗೆ ಒಳಗಾಗುತ್ತಾನೆ: ಸಿದ್ದರಾಮಯ್ಯ