ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ನ 12ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಬದ್ಧವೈರಿಗಳ ಕಾದಾಟದಲ್ಲಿ ಸಂಪೂರ್ಣವಾಗಿ ಮೇಲುಗೈ ಸಾಧಿಸಿದ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತು. ಈ ಪಂದ್ಯ ಮುಗಿದ ಬಳಿಕ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶೇಷ ಘಟನೆಯೊಂದು ನಡೆದಿದೆ. ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಅವರು ಪಾಕಿಸ್ತಾನದ ನಾಯಕ ಬಾಬರ್ ಅಝಂ ಅವರಿಗೆ ತಮ್ಮ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದರು.
ಕ್ರಿಕೆಟ್ ಲೋಕದ ಶ್ರೇಷ್ಠ ಬ್ಯಾಟರ್ ಹಾಗೂ ಐಸಿಸಿ ಏಕದಿನ ರ್ಯಾಂಕಿಂಗ್ನಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಬಾಬರ್ ಅವರು ಕೊಹ್ಲಿ ಬಳಿ ಓಡಿ ಬಂದು ಜೆರ್ಸಿಗೆ ಸಹಿ ಹಾಕಿ ಎಂದು ಕೇಳಿರುವುದನ್ನು ಕಂಡು ಕೊಹ್ಲಿ ಅಭಿಮಾನಿಗಳು ಖುಷಿ ಪಟ್ಟಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬಾಬರ್ ಅವರು ಜೆರ್ಸಿಯನ್ನು ಹಿಡಿದುಕೊಂಡಿದ್ದು ಇದರ ಮೇಲೆ ವಿರಾಟ್ ಸಹಿ ಮಾಡುತ್ತಿರುವುದನ್ನು ಕಾಣಬಹುದು. ವಿಶೇಷ ಎಂದರೆ ಕೊಹ್ಲಿ ಬಾಬರ್‌ಗೆ ಎರಡು ಜೆರ್ಸಿಗಳನ್ನು ನೀಡಿದ್ದಾರೆ.
ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದಲ್ಲಿ ವಿರಾಟ್ ಕೊಹ್ಲಿಯಿಂದ ನಡೆಯಿತು ದೊಡ್ಡ ತಪ್ಪು
FANBOY MOMENT FOR BABAR AZAM….!!
Babar asks for a signed from Virat Kohli and Virat gives it.pic.twitter.com/Caq3GoQoaV
— Mufaddal Vohra (@mufaddal_vohra) October 14, 2023
ವಿರಾಟ್ ಕೊಹ್ಲಿ ಪಾಕಿಸ್ತಾನ ಆಟಗಾರರಿಗೆ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಏಷ್ಯಾಕಪ್ 2022 ರ ಪಂದ್ಯದ ನಂತರ ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್‌ಗೆ ಕೊಹ್ಲಿ ಇದೇ ರೀತಿ ಮಾಡಿದ್ದರು. ಪಾಕಿಸ್ತಾನದ ವಿರುದ್ಧ ಭಾರತ ಐದು ವಿಕೆಟ್‌ಗಳ ಜಯ ಸಾಧಿಸಿದ ನಂತರ ಕೊಹ್ಲಿ ಸಹಿ ಮಾಡಿದ ಜೆರ್ಸಿಯನ್ನು ರೌಫ್‌ಗೆ ಉಡುಗೊರೆಯಾಗಿ ನೀಡಿದ್ದರು.
ವಿಶ್ವಕಪ್ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ 7 ವಿಕೆಟ್ಗಳಿಂದ ಗೆದ್ದು ಬೀಗಿತು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕ್ರಿಕೆಟ್ ತಂಡ 42.5 ಓವರ್ಗಳಲ್ಲಿ 191 ರನ್ಗಳಿಗೆ ಆಲೌಟ್ ಆಯಿತು. ಬಾಬರ್ ಅಝಂ ಅರ್ಧಶತಕ ಗಳಿಸಿದರು. ಟಾರ್ಗೆಟ್ ಬೆನ್ನಟ್ಟಿದ ಭಾರತ ತಂಡ ರೋಹಿತ್ ಶರ್ಮಾ ಅವರ ಸ್ಫೋಟಕ 86 ರನ್ ಹಾಗೂ ಶ್ರೇಯಸ್ ಅಯ್ಯರ್ ಅವರ ಅರ್ಧಶತಕ ನೆರವಿನಿಂದ 30.3 ಓವರ್ನಲ್ಲಿ ಗೆಲುವು ಕಂಡಿತು.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ