Asia Cup 2022: ಏಷ್ಯಾಕಪ್​ಗೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್: ಪ್ರಮುಖ ಬೌಲರ್ ಔಟ್..!

Asia Cup 2022: ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅಂದರೆ ಎ ಗ್ರೂಪ್​ನಿಂದ 2 ತಂಡ, ಬಿ ಗ್ರೂಪ್​ನಿಂದ 2 ತಂಡಗಳು ಮುಂದಿನ ಹಂತಕ್ಕೇರಲಿದೆ.

Asia Cup 2022: ಏಷ್ಯಾಕಪ್​ಗೆ ಬಲಿಷ್ಠ ತಂಡ ಪ್ರಕಟಿಸಿದ ಪಾಕಿಸ್ತಾನ್: ಪ್ರಮುಖ ಬೌಲರ್ ಔಟ್..!
Pakistan Squad
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 03, 2022 | 1:31 PM

ಆಗಸ್ಟ್ 27 ರಿಂದ ಯುಎಇನಲ್ಲಿ ಶುರುವಾಗಲಿರುವ ಏಷ್ಯಾಕಪ್ (Asia Cup 2022)​ ಟಿ20 ಟೂರ್ನಿಗಾಗಿ ಪಾಕಿಸ್ತಾನ್ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಬಳಗವನ್ನು ಬಾಬರ್ ಆಜಂ ಮುನ್ನಡೆಸಲಿದ್ದಾರೆ. ಇನ್ನು ಕಳೆದ ವರ್ಷ ಟಿ20 ವಿಶ್ವಕಪ್ ಆಡಿದ ಬಹುತೇಕ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಆಸ್ಟ್ರೇಲಿಯಾ ವಿರುದ್ದದ ಸೆಮಿಫೈನಲ್​ನಲ್ಲಿ ಮ್ಯಾಥ್ಯೂ ವೇಡ್ ಕ್ಯಾಚ್ ಕೈಚೆಲ್ಲಿದ ವೇಗಿ ಹಸನ್ ಅಲಿಗೆ ಈ ಬಾರಿ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ. ಅವರ ಬದಲಿಗೆ ಯುವ ವೇಗಿ ನಸೀಮ್ ಶಾ ಅವಕಾಶ ಪಡೆದಿದ್ದಾರೆ. ಹಾಗೆಯೇ ಹಿರಿಯ ಆಟಗಾರರಾದ ಮೊಹಮ್ಮದ್ ಹಫೀಜ್ ಹಾಗೂ ಶೊಯೇಬ್ ಮಲಿಕ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ.

ಇನ್ನು ಏಷ್ಯಾಕಪ್‌ಗೆ ತಂಡವನ್ನು ಆಯ್ಕೆ ಮಾಡುವುದರ ಜೊತೆಗೆ, ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗಾಗಿ ಪಾಕಿಸ್ತಾನ  16 ಸದಸ್ಯರ ತಂಡವನ್ನು ಸಹ ಪ್ರಕಟಿಸಿದೆ. ನೆದರ್ಲೆಂಡ್ಸ್ ಮತ್ತು ಪಾಕಿಸ್ತಾನ ನಡುವಿನ ಏಕದಿನ ಸರಣಿಯು ಆಗಸ್ಟ್ 16-21 ರ ನಡುವೆ ನಡೆಯಲಿದೆ. ಏಕದಿನ ತಂಡದಲ್ಲೂ ಯುವ ವೇಗದ ಬೌಲರ್ ನಸೀಮ್ ಶಾಗೆ ಸ್ಥಾನ ನೀಡಲಾಗಿದೆ. ಹಾಗೆಯೇ ಗಾಯದಿಂದ ಚೇತರಿಸಿಕೊಂಡಿರುವ ಶಾಹೀನ್ ಶಾ ಆಫ್ರಿದಿ ಕೂಡ ಉಭಯ ತಂಡಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಏಷ್ಯಾಕಪ್​ನಲ್ಲಿ ಪಾಕಿಸ್ತಾನ್ ತಂಡವು ತನ್ನ ಮೊದಲ ಪಂದ್ಯವನ್ನು ಭಾರತದ ವಿರುದ್ದ ಆಡಲಿದ್ದು, ಈ ಪಂದ್ಯವು ಆಗಸ್ಟ್ 28 ರಂದು ನಡೆಯಲಿದೆ. ಇದೀಗ ಬಲಿಷ್ಠ ಪಡೆಯನ್ನೇ ಆಯ್ಕೆ ಮಾಡುವ ಮೂಲಕ ಪಾಕ್ ತಂಡವು ಭರ್ಜರಿ ಸಿದ್ಧತೆಗೆ ಮುಂದಾಗಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಷ್ಯಾಕಪ್​ಗೆ ಪಾಕಿಸ್ತಾನ್ ತಂಡ ಹೀಗಿದೆ:

ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಮತ್ತು ಉಸ್ಮಾನ್ ಖಾದಿರ್.

ನೆದರ್ಲೆಂಡ್ಸ್​​ ವಿರುದ್ದದ ಏಕದಿನ ಸರಣಿಗೆ ಪಾಕ್ ತಂಡ:

ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಮಾಮ್-ಉಲ್-ಹಕ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಶಾಹೀನ್ ಶಾ ಆಫ್ರಿದಿ, ಶಾನವಾಜ್ ದಹಾನಿ ಮತ್ತು ಝಾಹಿದ್ ಮೆಹಮೂದ್

ಏಷ್ಯಾ ಕಪ್ ತಂಡಗಳ ಗ್ರೂಪ್​:

  • ಗ್ರೂಪ್ ಎ ತಂಡಗಳು- ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
  • ಗ್ರೂಪ್ ಬಿ ತಂಡಗಳು- ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ

ಸಂಪೂರ್ಣ ವೇಳಾಪಟ್ಟಿ ಹೀಗಿದೆ:

  • ಆಗಸ್ಟ್ 27 – ಶ್ರೀಲಂಕಾ vs ಅಫ್ಘಾನಿಸ್ತಾನ- ದುಬೈ
  • ಆಗಸ್ಟ್ 28 – ಭಾರತ vs ಪಾಕಿಸ್ತಾನ- ದುಬೈ
  • ಆಗಸ್ಟ್ 30 – ಬಾಂಗ್ಲಾದೇಶ vs ಅಫ್ಘಾನಿಸ್ತಾನ- ಶಾರ್ಜಾ
  • ಆಗಸ್ಟ್ 31 – ಭಾರತ vs ಕ್ವಾಲಿಫೈಯರ್ ಟೀಮ್- ದುಬೈ
  • ಸೆಪ್ಟೆಂಬರ್ 1 – ಶ್ರೀಲಂಕಾ vs ಬಾಂಗ್ಲಾದೇಶ- ದುಬೈ
  • ಸೆಪ್ಟೆಂಬರ್ 2- ಪಾಕಿಸ್ತಾನ vs ಕ್ವಾಲಿಫೈಯರ್ ಟೀಮ್- ಶಾರ್ಜಾ

ಸೂಪರ್- 4 ವೇಳಾಪಟ್ಟಿ:

  • ಸೆಪ್ಟೆಂಬರ್ 3 – B1 vs B2 – ಶಾರ್ಜಾ
  • ಸೆಪ್ಟೆಂಬರ್ 4 A1 vs A2 – ದುಬೈ
  • ಸೆಪ್ಟೆಂಬರ್ 6 A1 vs B1 – ದುಬೈ
  • ಸೆಪ್ಟೆಂಬರ್ 7 A2 vs B2 – ದುಬೈ
  • ಸೆಪ್ಟೆಂಬರ್ 8 A1 vs B2 – ದುಬೈ
  • ಸೆಪ್ಟೆಂಬರ್ 9 B1 vs- A2 ದುಬೈ
  • ಸೆಪ್ಟೆಂಬರ್ 11- ಫೈನಲ್ ಪಂದ್ಯ- ದುಬೈ

ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅಂದರೆ ಎ ಗ್ರೂಪ್​ನಿಂದ 2 ತಂಡ, ಬಿ ಗ್ರೂಪ್​ನಿಂದ 2 ತಂಡಗಳು ಮುಂದಿನ ಹಂತಕ್ಕೇರಲಿದೆ. ಇನ್ನು ಸೆಪ್ಟೆಂಬರ್ 3 ರಿಂದ ಸೂಪರ್- 4 ತಂಡಗಳ ಮುಖಾಮುಖಿ ಶುರುವಾಗಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತವೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್