AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PAK vs SA, ICC ODI World Cup: ಪಾಕಿಸ್ತಾನಕ್ಕೆ ಇನ್ನೂ ಇದೆ ಸೆಮಿ ಫೈನಲ್ ಪ್ರವೇಶಿಸುವ ಅವಕಾಶ: ಹೇಗೆ ನೋಡಿ

Pakistan's Qualification Scenario ICC ODI World Cup 2023 Semifinals: ಶುಕ್ರವಾರ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ, ಪಾಕಿಸ್ತಾನ ಏಕದಿನ ವಿಶ್ವಕಪ್ 2023ರಲ್ಲಿ ಸೆಮಿ ಫೈನಲ್ ಹಂತ ತಲುಪುವ ಸಾಧ್ಯತೆಗಳು ಈಗ ಬಹುತೇಕ ಕಮರಿ ಹೋಗಿದೆ. ಆದರೆ ಲೆಕ್ಕಚಾರದ ಪ್ರಕಾರ, ಪಾಕ್ ಇನ್ನೂ ಜೀವಂತವಾಗಿದೆ.

PAK vs SA, ICC ODI World Cup: ಪಾಕಿಸ್ತಾನಕ್ಕೆ ಇನ್ನೂ ಇದೆ ಸೆಮಿ ಫೈನಲ್ ಪ್ರವೇಶಿಸುವ ಅವಕಾಶ: ಹೇಗೆ ನೋಡಿ
Pakistan Cricket Team
Vinay Bhat
|

Updated on: Oct 28, 2023 | 7:41 AM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023 ರ ತನ್ನ ಆರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನ (Pakistan vs South Africa) ಒಂದು ವಿಕೆಟ್‌ನಿಂದ ಹೃದಯ ವಿದ್ರಾವಕ ಸೋಲು ಕಂಡಿತು. ಕೊನೆಯ ಅಂತದ ವರೆಗೂ ತುದಿಗಾಲಿನಲ್ಲಿ ನಿಲ್ಲಿಸಿದ್ದ ಪಂದ್ಯದಲ್ಲಿ, ಪಾಕಿಸ್ತಾನ 270 ರನ್‌ಗಳನ್ನು ಕಾಪಾಡಿಕೊಳ್ಳುವಲ್ಲಿ ವಿಫಲವಾಗಿ ಹರಿಣಗಳ ವಿರುದ್ಧ ಸೋಲುಂಡರು. ಇದು 2023 ರ ಏಕದಿನ ವಿಶ್ವಕಪ್‌ನಲ್ಲಿ ಇದುವರೆಗೆ ಆಡಿದ ಆರು ಪಂದ್ಯಗಳಲ್ಲಿ ಪಾಕಿಸ್ತಾನದ ನಾಲ್ಕನೇ ಸೋಲು. ಒಟ್ಟು ನಾಲ್ಕು ಅಂಕಗಳೊಂದಿಗೆ ಬಾಬರ್ ಪಡೆ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಪ್ರೋಟೀಸ್ ವಿರುದ್ಧ ಸೋತ ನಂತರ, ಪಾಕಿಸ್ತಾನ ಏಕದಿನ ವಿಶ್ವಕಪ್ 2023ರಲ್ಲಿ ಸೆಮಿ ಫೈನಲ್ ಹಂತ ತಲುಪುವ ಸಾಧ್ಯತೆಗಳು ಈಗ ಬಹುತೇಕ ಕಮರಿ ಹೋಗಿದೆ. ಆದರೆ ಲೆಕ್ಕಚಾರದ ಪ್ರಕಾರ, ಪಾಕ್ ಇನ್ನೂ ಜೀವಂತವಾಗಿದೆ. ತಮ್ಮ ಮುಂದಿನ ಮೂರು ಉಳಿದಿರುವ ಲೀಗ್ ಹಂತದ ಪಂದ್ಯಗಳನ್ನು ಗೆದ್ದರೆ ಮತ್ತು ಇತರ ಪಂದ್ಯಗಳ ಒಂದೆರಡು ಫಲಿತಾಂಶಗಳು ಪಾಕ್ ಪರವಾಗಿ ಆದರೆ, ಸೆಮಿ ಫೈನಲ್​ಗೇರಬಹುದು.

IND vs ENG: ಇಂಗ್ಲೆಂಡ್ ವಿರುದ್ಧ ಕ್ರಿಕೆಟ್ ದೇವರ ದಾಖಲೆ ಮುರಿಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ..!

ಇದನ್ನೂ ಓದಿ
Image
ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟ ಕಳೆದುಕೊಂಡ ಭಾರತ..!
Image
ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಕಿವೀಸ್..!
Image
ಪಾಕಿಸ್ತಾನಕ್ಕೆ ಸತತ 4ನೇ ಸೋಲು; ಸೆಮೀಸ್​ ಹಾದಿ ಇನ್ನಷ್ಟು ಕಠಿಣ
Image
ವಿಶ್ವಕಪ್​ನಲ್ಲಿ ನಾಳೆ ಡಬಲ್ ಹೆಡರ್ ದಿನ; ಪಂದ್ಯಗಳ ಪೂರ್ಣ ವಿವರ ಇಲ್ಲಿದೆ

ಬಾಂಗ್ಲಾದೇಶ (ಅಕ್ಟೋಬರ್ 31), ನ್ಯೂಝಿಲೆಂಡ್ (ನವೆಂಬರ್ 4), ಮತ್ತು ಇಂಗ್ಲೆಂಡ್ (ನವೆಂಬರ್ 11) ವಿರುದ್ಧ ನಿಗದಿಯಾಗಿರುವ ಮುಂದಿನ ಮೂರು ಪಂದ್ಯಗಳಲ್ಲಿ ಪಾಕ್ ಗೆಲ್ಲಲೇ ಬೇಕು. ಆಗ 10 ಅಂಕಗಳು ಪಾಕ್ ಖಾತೆಗೆ ಸೇರುತ್ತದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ಈಗಾಗಲೇ 10 ಅಂಕಗಳನ್ನು ಹೊಂದಿದೆ. ಹೀಗಾಗಿ ಈ ಎರಡು ತಂಡಗಳನ್ನು ಮುಟ್ಟಲು ಪಾಕ್​ಗೆ ಸಾಧ್ಯವಿಲ್ಲ. ಪಾಕ್ ಮೂರು ಅಥವಾ ನಾಲ್ಕನೇ ಸ್ಥಾನದ ಮೇಲೆ ಕಣ್ಣಿಡಬೇಕು. ಅದು ಸಾಧ್ಯವಾಗಬೇಕಾದರೆ ಈ ಕೆಳಗಿನ ರೀತಿ ನಡೆಯಬೇಕು.

  • ನ್ಯೂಝಿಲೆಂಡ್ ಆಸ್ಟ್ರೇಲಿಯಾವನ್ನು ಸೋಲಿಸಬೇಕು
  • ಬಾಂಗ್ಲಾದೇಶ ನೆದರ್ಲೆಂಡ್ಸ್ ಅನ್ನು ಸೋಲಿಸಬೇಕು
  • ಭಾರತವು ಇಂಗ್ಲೆಂಡ್ ಅನ್ನು ಸೋಲಿಸಬೇಕು
  • ಶ್ರೀಲಂಕಾ ಅಫ್ಘಾನಿಸ್ತಾನವನ್ನು ಸೋಲಿಸಬೇಕು
  • ಪಾಕಿಸ್ತಾನವು ಬಾಂಗ್ಲಾದೇಶವನ್ನು ಸೋಲಿಸಬೇಕು
  • ನ್ಯೂಝಿಲೆಂಡ್ ದಕ್ಷಿಣ ಆಫ್ರಿಕಾವನ್ನು ಸೋಲಿಸಬೇಕು
  • ಭಾರತ ಶ್ರೀಲಂಕಾವನ್ನು ಸೋಲಿಸಬೇಕು
  • ಅಫ್ಘಾನಿಸ್ತಾನ ನೆದರ್ಲೆಂಡ್ಸ್ ಅನ್ನು ಸೋಲಿಸಬೇಕು
  • ಪಾಕಿಸ್ತಾನವು ನ್ಯೂಝಿಲೆಂಡ್ ಅನ್ನು ಸೋಲಿಸಬೇಕು
  • ಇಂಗ್ಲೆಂಡ್ ಆಸ್ಟ್ರೇಲಿಯಾವನ್ನು ಸೋಲಿಸಬೇಕು
  • ಭಾರತವು ದಕ್ಷಿಣ ಆಫ್ರಿಕಾವನ್ನು ಸೋಲಿಸಬೇಕು
  • ಶ್ರೀಲಂಕಾ ಬಾಂಗ್ಲಾದೇಶವನ್ನು ಸೋಲಿಸಬೇಕು
  • ಆಸ್ಟ್ರೇಲಿಯಾ ಅಫ್ಘಾನಿಸ್ತಾನವನ್ನು ಸೋಲಿಸಬೇಕು
  • ಇಂಗ್ಲೆಂಡ್ ನೆದರ್ಲೆಂಡ್ಸ್ ಅನ್ನು ಸೋಲಿಸಬೇಕು
  • ನ್ಯೂಝಿಲೆಂಡ್ ಶ್ರೀಲಂಕಾವನ್ನು ಸೋಲಿಸಬೇಕು
  • ದಕ್ಷಿಣ ಆಫ್ರಿಕಾ ಅಫ್ಘಾನಿಸ್ತಾನವನ್ನು ಸೋಲಿಸಬೇಕು
  • ಬಾಂಗ್ಲಾದೇಶ ಆಸ್ಟ್ರೇಲಿಯಾವನ್ನು ಸೋಲಿಸಬೇಕು
  • ಪಾಕಿಸ್ತಾನ ಇಂಗ್ಲೆಂಡ್ ಅನ್ನು ಸೋಲಿಸಬೇಕು
  • ಭಾರತವು ನೆದರ್ಲೆಂಡ್ಸ್ ಅನ್ನು ಸೋಲಿಸಬೇಕು

ಈ ಫಲಿತಾಂಶಗಳು ಸಾಕಾರಗೊಂಡರೆ, ಭಾರತ 18 ಅಂಕಗಳೊಂದಿಗೆ, ನ್ಯೂಜಿಲೆಂಡ್ 14, ದಕ್ಷಿಣ ಆಫ್ರಿಕಾ 12 ಮತ್ತು ಪಾಕಿಸ್ತಾನ 10 ಅಂಕಗಳೊಂದಿಗೆ ಆಸ್ಟ್ರೇಲಿಯ ಮತ್ತು ಶ್ರೀಲಂಕಾವನ್ನು ಹಿಂದಿಕ್ಕಿ ಸೆಮಿ ಫೈನಲ್​ಗೇರುವ ಅವಕಾಶ ಹೊಂದಿದೆ. ಆದಾಗ್ಯೂ, ಬಾಂಗ್ಲಾದೇಶದ ವಿರುದ್ಧ ಆಸ್ಟ್ರೇಲಿಯಾ ಗೆಲುವು ಸಾಧಿಸಲು ಯಶಸ್ವಿಯಾದರೆ, ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಲಾ 10 ಅಂಕಗಳೊಂದಿಗೆ ಸಮನಾಗಿರುತ್ತವೆ. ಆಗ ರನ್​ರೇಟ್ ಆಧಾರದ ಮೇಲೆ ನಿರ್ಧಾರ ಮಾಡಬೇಕು. ಒಟ್ಟಾರೆ ಪಾಕಿಸ್ತಾನಕ್ಕೆ ಸೆಮಿಫೈನಲ್‌ ಹಾದಿಯು ಇತರೆ ತಂಡಗಳ ಫಲಿತಾಂಶಗಳ ಮೇಲೆ ಅವಲಂಬಿತವಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!