AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ದಾಳಿಗೆ ಪಾಕಿಸ್ತಾನ್ ಸೂಪರ್ ಲೀಗ್ ತತ್ತರ; ಪಾಕ್​ನಿಂದ ಎತ್ತಂಗಡಿ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್ಎಲ್) ಪಂದ್ಯಗಳು ಯುಎಇಗೆ ಸ್ಥಳಾಂತರಗೊಂಡಿವೆ. ಭಾರತದ ಡ್ರೋನ್ ದಾಳಿಯಿಂದ ಪಾಕಿಸ್ತಾನ ತತ್ತರಿಸಿದೆ. ಇದರಿಂದ ವಿದೇಶಿ ಆಟಗಾರರು ಆತಂಕಕ್ಕೀಡಾಗಿದ್ದಾರೆ. ಉಳಿದ ಎಂಟು ಪಂದ್ಯಗಳು ಯುಎಇಯಲ್ಲಿ ನಡೆಯಲಿವೆ ಮತ್ತು ಫೈನಲ್ ಪಂದ್ಯವೂ ವಿಳಂಬಗೊಳ್ಳಲಿದೆ.

ಭಾರತದ ದಾಳಿಗೆ ಪಾಕಿಸ್ತಾನ್ ಸೂಪರ್ ಲೀಗ್ ತತ್ತರ; ಪಾಕ್​ನಿಂದ ಎತ್ತಂಗಡಿ
ಪಾಕ್ ಸೂಪರ್ ಲೀಗ್
ರಾಜೇಶ್ ದುಗ್ಗುಮನೆ
|

Updated on:May 09, 2025 | 7:37 AM

Share

ಐಪಿಎಲ್ (IPL) ಮಾದರಿಯಲ್ಲೇ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ಸೂಪರ್ ಲೀಗ್ (ಪಿಎಸ್​ಎಲ್) ಈಗ ಯುಎಇಗೆ ಸ್ಥಳಾಂತರಗೊಂಡಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. ಭಾರತದ ದಾಳಿಗೆ ಪಾಕ್ ತತ್ತರಿಸಿ ಹೋಗಿದೆ. ಅಲ್ಲದೆ, ಪಾಕಿಸ್ತಾನದಲ್ಲಿ ಇರುವ ವಿದೇಶಿ ಆಟಗಾರರು ಕಂಗಾಲಾಗಿ ಹೋಗಿದ್ದಾರೆ. ಹೀಗಾಗಿ, ಈ ಸೀಸನ್​ನಲ್ಲಿ ಉಳಿದುಕೊಂಡಿರುವ ಎಂಟು ಪಂದ್ಯಗಳು ಯುಎಇಗೆ ಸ್ಥಳಾಂತರಗೊಂಡಿವೆ.

ರಾವಲ್ಪಿಂಡಿ ಸ್ಟೇಡಿಯಂನಲ್ಲಿ ಕರಾಚಿ ಕಿಂಗ್ಸ್ ಹಾಗೂ ಪೇಶಾವರ್ ಜಲ್ಮಿ ಪಂದ್ಯ ಗುರುವಾರ (ಮೇ 8) ನಡೆಯಬೇಕಿತ್ತು. ಆದರೆ, ಸ್ಟೇಡಿಯಂ ಕಾಂಪ್ಲೆಕ್ಸ್ ಮೇಲೆ ಡ್ರೋನ್ ಉರುಳಿ ಬಿದ್ದಿದ್ದರಿಂದ ಈ ಪಂದ್ಯವನ್ನು ಮರು ನಿಗದಿ ಮಾಡಲಾಗಿದೆ. ಪಾಕ್ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮೋಹ್ಸಿನ್ ನಖ್ವಿ ಅವರು ತುರ್ತು ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಪಾಕಿಸ್ತಾನದ ಪುಂಡಾಟಿಕೆಗೆ ಭಾರತ ತಕ್ಕ ಉತ್ತರ ನೀಡುತ್ತಿದೆ. ಭಾರತದವರ ಡ್ರೋನ್ ದಾಳಿಗೆ ಪಾಕ್ ತತ್ತರಿಸಿದೆ. ಇನ್ನು, ಪಾಕಿಸ್ತಾನದ ಕರಾಚಿ ಬಂದರಿನ ಮೇಲೆ ಭಾರತದವರು ದಾಳಿ ನಡೆಸಿ, ಬಂದರನ್ನು ಧ್ವಂಸ ಮಾಡಿದ್ದಾರೆ. ಇದನ್ನು ನೋಡಿ ಅಲ್ಲಿ ಉಳಿದುಕೊಂಡಿದ್ದ ವಿದೇಶಿ ಆಟಗಾರರು ಪಂದ್ಯವನ್ನು ತೊರೆಯುವ ನಿರ್ಧಾರಕ್ಕೆ ಬಂದರು. ಈ ಕಾರಣಕ್ಕೆ ಪಂದ್ಯಗಳನ್ನು ಯುಎಇಗೆ ಸ್ಥಳಾಂತರ ಮಾಡುವ ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ
Image
ನಿವೃತ್ತಿಯ ನಂತರ ಟೀಕೆಗಳಿಗೆ ತಿರುಗೇಟು ನೀಡಿದ ರೋಹಿತ್
Image
ಪಾಕ್ ಸೂಪರ್ ಲೀಗ್ ಬೇರೆ ದೇಶಕ್ಕೆ ಸ್ಥಳಾಂತರಿಸಲು ಪಿಸಿಬಿ ನಿರ್ಧಾರ
Image
ಮುಂಬೈ- ಪಂಜಾಬ್ ಪಂದ್ಯ ಅಹಮದಾಬಾದ್‌ಗೆ ಶಿಫ್ಟ್
Image
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ

ಪಾಕಿಸ್ತಾನದವರು ಮಿಲಿಟರಿ ಬೇಸ್​ಗಳನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲು ಮುಂದಾಗಿದ್ದರು. ಇದಕ್ಕೆ ಪ್ರತುತ್ತರವಾಗಿ ಭಾರತದವರು ಡ್ರೋನ್ ದಾಳಿ ಮಾಡಿದ್ದಾರೆ. ಈ ಡ್ರೋನ್​ಗಳು ಪಾಕ್​ನ ಹಲವು ಕಡೆಗಳಲ್ಲಿ ದಾಳಿ ನಡೆಸಿದೆ. ಈ ವಿಚಾರಗಳನ್ನು ಗಮನದಲ್ಲಿ ಇರಿಸಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಭಾರತ-ಪಾಕಿಸ್ತಾನ್ ಯುದ್ಧ ಭೀತಿ: ಐಪಿಎಲ್​ಗೆ ಬೀಳುತ್ತಾ ಬ್ರೇಕ್?

ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಹೆಚ್ಚು ವ್ಯತ್ಯಾಸ ಮಾಡುವಂತಿಲ್ಲ. ಏಕೆಂದರೆ, ಇದು ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳ ಮೇಲೆ ಪರಿಣಾಮ ಬೀರುತ್ತದೆ. ಪಿಎಸ್​ಎಲ್​ ಫೈನಲ್ ಮೇ 18ರಂದು ಕೊನೆಗೊಳ್ಳಬೇಕಿತ್ತು. ಆದರೆ, ಫೈನಲ್ ವಿಳಂಬ ಆಗಲಿದೆ. ಆ ಬಳಿಕ ಬಾಂಗ್ಲಾದೇಶ ತಂಡದವರು ಪಾಕಿಸ್ತಾನಕ್ಕೆ ಸರಣಿ ಆಡಲು ಬರಲಿದೆ. ಈ ಸರಣಿ ಬಗ್ಗೆ ಇನ್ನೂ ಪಾಕ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದರೆ ಸರಣಿ ರದ್ದಾಗಲೂಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Fri, 9 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ