T20 World Cup 2026: ಟೀಂ ಇಂಡಿಯಾ ಪಾಕಿಸ್ತಾನ ತಂಡಕ್ಕಿಂತ ಬಲಿಷ್ಠವಾಗಿದೆ; ಕಮ್ರಾನ್ ಅಕ್ಮಲ್

T20 World Cup 2026: ಎಲ್ಲಾ ಊಹಾಪೋಹಗಳ ನಡುವೆ 2026ರ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ಭಾರತ-ಪಾಕ್ ಪಂದ್ಯ ಫೆಬ್ರವರಿ 15ರಂದು ನಡೆಯಲಿದೆ. ಈ ಸಂದರ್ಭದಲ್ಲಿ, ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್, ಭಾರತ ತಂಡ ಪಾಕಿಸ್ತಾನಕ್ಕಿಂತ ಬಲಿಷ್ಠವಾಗಿದೆ ಎಂದು ಹೇಳಿದ್ದಾರೆ. ಭಾರತವನ್ನು ಸೋಲಿಸಲು ಪಾಕಿಸ್ತಾನಕ್ಕೆ ಉತ್ತಮ ಆಟ ಮತ್ತು ಯೋಜನೆಯ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ, ಜೊತೆಗೆ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.

T20 World Cup 2026: ಟೀಂ ಇಂಡಿಯಾ ಪಾಕಿಸ್ತಾನ ತಂಡಕ್ಕಿಂತ ಬಲಿಷ್ಠವಾಗಿದೆ; ಕಮ್ರಾನ್ ಅಕ್ಮಲ್
Ind Vs Pak

Updated on: Jan 25, 2026 | 3:56 PM

ಎಲ್ಲಾ ಊಹಾಪೋಹಗಳ ನಡುವೆ 2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಪಾಕಿಸ್ತಾನ ತನ್ನ ತಂಡವನ್ನು ಪ್ರಕಟಿಸಿದೆ. ನಿನ್ನೆಯಷ್ಟೇ ಪಿಸಿಬಿ ಅಧ್ಯಕ್ಷರು ಪಾಕ್ ತಂಡ ಟಿ20 ವಿಶ್ವಕಪ್​ನಲ್ಲಿ ಭಾಗವಹಿಸುವುದು ಇನ್ನು ಖಚಿತವಾಗಿಲ್ಲ ಎಂದಿದ್ದರು. ಆದರೆ ಇಂದು ಈ ಟೂರ್ನಿಗೆ ತಂಡವನ್ನು ಪ್ರಕಟಿಸಿದ್ದಾರೆ. ಫೆಬ್ರವರಿ 9 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿಯಾಗಲಿವೆ. ಆದರೆ ಇದಕ್ಕೂ ಮುನ್ನ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಕಮ್ರಾನ್ ಅಕ್ಮಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಭಾರತ ತಂಡ ಪಾಕಿಸ್ತಾನ ತಂಡಕ್ಕಿಂತ ಉತ್ತಮವಾಗಿದೆ ಎಂದಿದ್ದಾರೆ.

ಭಾರತ ತಂಡ ಬಲಿಷ್ಠವಾಗಿದೆ; ಕಮ್ರಾನ್ ಅಕ್ಮಲ್

ಸಾಜಿಯಾ ಅಬ್ಬಾಸ್ ಅವರ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಕಮ್ರಾನ್ ಅಕ್ಮಲ್, ‘ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕಿಂತ ಬಲಿಷ್ಠ ಮತ್ತು ಅಪಾಯಕಾರಿಯಾಗಿದೆ. ಹೀಗಾಗಿ ಪಾಕಿಸ್ತಾನ ತಂಡ, ಭಾರತವನ್ನು ಸೋಲಿಸಲು ಉತ್ತಮ ಆಟ ಮಾತ್ರವಲ್ಲದೆ ಉತ್ತಮ ಯೋಜನೆಯನ್ನು ಮಾಡಬೇಕಾಗುತ್ತದೆ. ಅಲ್ಲದೆ ಪಾಕಿಸ್ತಾನ ತಂಡವು ಅಭಿಷೇಕ್ ಶರ್ಮಾಗಾಗಿ ಮಾತ್ರವಲ್ಲದೆ ಟೀಂ ಇಂಡಿಯಾದ ಪ್ರತಿಯೊಬ್ಬ ಆಟಗಾರನಿಗಾಗಿಯೂ ಯೋಜನೆ ರೂಪಿಸಬೇಕಾಗುತ್ತದೆ.

ಹೀಗಾದ್ರೆ ಮಾತ್ರ ಭಾರತವನ್ನು ಸೋಲಿಸಲು ಸಾಧ್ಯ

ಕಾಗದದ ಮೇಲೆ ಭಾರತ ತಂಡ ಪಾಕಿಸ್ತಾನಕ್ಕಿಂತ ಉತ್ತಮ ಮತ್ತು ಬಲಿಷ್ಠವಾಗಿ ಕಾಣುತ್ತದೆ. ಭಾರತ ಖಂಡಿತವಾಗಿಯೂ ಮೇಲುಗೈ ಸಾಧಿಸಿದೆ, ಆದರೆ ಪಾಕಿಸ್ತಾನವು ತನ್ನ ದಿನದಂದು ಪಂದ್ಯವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಪಾಕಿಸ್ತಾನವು ಉತ್ತಮವಾಗಿ ಯೋಜಿತ ತಂತ್ರದೊಂದಿಗೆ ಮೈದಾನಕ್ಕೆ ಇಳಿದರೆ ಮಾತ್ರ ಭಾರತದ ವಿರುದ್ಧ ಗೆಲ್ಲಲು ಸಾಧ್ಯ ಎಂದು ಕಮ್ರಾನ್ ಅಕ್ಮಲ್ ಹೇಳಿದ್ದಾರೆ.

T20 World Cup 2026: ಬಾಂಗ್ಲಾ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ ಐಸಿಸಿ

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20ಪಂದ್ಯದಲ್ಲಿ ಇಶಾನ್ ಮತ್ತು ಸೂರ್ಯ ಅವರ ಪ್ರದರ್ಶನವನ್ನು ಕಮ್ರಾನ್ ಶ್ಲಾಘಿಸಿದ್ದಾರೆ. ಟೀಂ ಇಂಡಿಯಾದ ದೃಷ್ಟಿಕೋನದಿಂದ, ನಾಯಕ ಸೂರ್ಯಕುಮಾರ್ ಯಾದವ್ ಅವರ ದೊಡ್ಡ ಸ್ಕೋರ್ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಉತ್ತಮ ಸಂಕೇತವಾಗಿದೆ. ಇದಲ್ಲದೆ, ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಎರಡು ವರ್ಷಗಳ ಅನುಪಸ್ಥಿತಿಯ ನಂತರ ಇಶಾನ್ ಕಿಶನ್ ಅವರ ಪುನರಾಗಮನವು ಸಹ ಗಮನಾರ್ಹವಾಗಿದೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Sun, 25 January 26