ತ್ರಿಕೋನ ಸರಣಿ… ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಪಾಕ್ ತಂಡದ ಮಾಸ್ಟರ್ ಪ್ಲ್ಯಾನ್

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಈ ಟೂರ್ನಿಗೂ ಮುನ್ನ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಇದೀಗ ಎರಡು ತಂಡಗಳ ಜೊತೆಗೂಡಿ ತ್ರಿಕೋನ ಸರಣಿ ಆಯೋಜಿಸಲು ಮುಂದಾಗಿದೆ.

ತ್ರಿಕೋನ ಸರಣಿ... ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಪಾಕ್ ತಂಡದ ಮಾಸ್ಟರ್ ಪ್ಲ್ಯಾನ್
Kane-Babar-Aiden
Follow us
|

Updated on: Jul 08, 2024 | 2:02 PM

ಚಾಂಪಿಯನ್ಸ್ ಟ್ರೋಫಿ 2025 ಕ್ಕೂ ಮುನ್ನ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತ್ರಿಕೋನ ಸರಣಿ ಆಯೋಜಿಸಲಿದೆ. ಈ ಸರಣಿಯಲ್ಲಿ ಪಾಕಿಸ್ತಾನ್, ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿದೆ. ಏಕದಿನ ಸ್ವರೂಪದಲ್ಲಿ ನಡೆಯಲಿರುವ ಈ ಸರಣಿಯು ಫೆಬ್ರವರಿ 8 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 14 ರಂದು ನಡೆಯಲಿದೆ.

ವಿಶೇಷ ಎಂದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗುವ ಸಾಧ್ಯತೆಯಿದೆ. ಈ ಟೂರ್ನಿಯನ್ನು ಮುಂದಿಟ್ಟುಕೊಂಡು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಈ ಸರಣಿ ಆಯೋಜಿಸುತ್ತಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಗಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.

ತ್ರಿಕೋನ ಸರಣಿಯ ವೇಳಾಪಟ್ಟಿ ಹೀಗಿದೆ:

  • ಫೆಬ್ರವರಿ 8, 2025: ಪಾಕಿಸ್ತಾನ್ vs ನ್ಯೂಝಿಲೆಂಡ್ (ಮುಲ್ತಾನ್)
  • ಫೆಬ್ರವರಿ 10, 2025: ಸೌತ್ ಆಫ್ರಿಕಾ vs ನ್ಯೂಝಿಲೆಂಡ್ (ಮುಲ್ತಾನ್)
  • ಫೆಬ್ರವರಿ 12, 2025: ಪಾಕಿಸ್ತಾನ್ vs ಸೌತ್ ಆಫ್ರಿಕಾ (ಮುಲ್ತಾನ್)
  • ಫೆಬ್ರವರಿ 14, 2025: ಫೈನಲ್ ಪಂದ್ಯ (ಮುಲ್ತಾನ್)

ಚಾಂಪಿಯನ್ಸ್ ಟ್ರೋಫಿ ಕರಡು ವೇಳಾಪಟ್ಟಿ:

ಐಸಿಸಿ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ಪಾಕಿಸ್ತಾನದಲ್ಲಿ ನಡೆಯಲಿರುವ ಈ ಟೂರ್ನಿಯ ಕರಡು ವೇಳಾಪಟ್ಟಿಯನ್ನು ಈಗಾಗಲೇ ಐಸಿಸಿಗೆ ಕಳುಹಿಸಲಾಗಿದ್ದು, ಅಂತಿಮ ಅನುಮೋದನೆಗಾಗಿ ಕಾಯಲಾಗುತ್ತಿದೆ.

ಈ ಕರಡು ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಗ್ರೂಪ್​-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ.

ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ಕರಡು ವೇಳಾಪಟ್ಟಿ:

  • ಫೆಬ್ರವರಿ 20, 2025: ಭಾರತ Vs ಬಾಂಗ್ಲಾದೇಶ್
  • ಫೆಬ್ರವರಿ 23, 2025: ಭಾರತ Vs ನ್ಯೂಝಿಲೆಂಡ್
  • ಮಾರ್ಚ್ 1, 2025: ಭಾರತ Vs ಪಾಕಿಸ್ತಾನ್.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಭಾರತ ತಂಡ ಏಕದಿನ ಸರಣಿ:

ಚಾಂಪಿಯನ್ಸ್ ಟ್ರೋಫಿಗೂ ಮುಂಚಿತವಾಗಿ ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ತವರಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ…

  • ಫೆಬ್ರವರಿ 6, 2025: ಭಾರತ Vs ಇಂಗ್ಲೆಂಡ್ (ನಾಗ್ಪುರ)
  • ಫೆಬ್ರವರಿ 9, 2025: ಭಾರತ Vs ಇಂಗ್ಲೆಂಡ್ (ಕಟಕ್)
  • ಫೆಬ್ರವರಿ 12, 2025: ಭಾರತ Vs ಇಂಗ್ಲೆಂಡ್ (ಅಹಮದಾಬಾದ್)
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ