ಚಾಂಪಿಯನ್ಸ್ ಟ್ರೋಫಿ 2025 ಕ್ಕೂ ಮುನ್ನ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತ್ರಿಕೋನ ಸರಣಿ ಆಯೋಜಿಸಲಿದೆ. ಈ ಸರಣಿಯಲ್ಲಿ ಪಾಕಿಸ್ತಾನ್, ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿದೆ. ಏಕದಿನ ಸ್ವರೂಪದಲ್ಲಿ ನಡೆಯಲಿರುವ ಈ ಸರಣಿಯು ಫೆಬ್ರವರಿ 8 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 14 ರಂದು ನಡೆಯಲಿದೆ.
ವಿಶೇಷ ಎಂದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗುವ ಸಾಧ್ಯತೆಯಿದೆ. ಈ ಟೂರ್ನಿಯನ್ನು ಮುಂದಿಟ್ಟುಕೊಂಡು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಈ ಸರಣಿ ಆಯೋಜಿಸುತ್ತಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿಗಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ಪಾಕಿಸ್ತಾನದಲ್ಲಿ ನಡೆಯಲಿರುವ ಈ ಟೂರ್ನಿಯ ಕರಡು ವೇಳಾಪಟ್ಟಿಯನ್ನು ಈಗಾಗಲೇ ಐಸಿಸಿಗೆ ಕಳುಹಿಸಲಾಗಿದ್ದು, ಅಂತಿಮ ಅನುಮೋದನೆಗಾಗಿ ಕಾಯಲಾಗುತ್ತಿದೆ.
ಈ ಕರಡು ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಗ್ರೂಪ್-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ.
ಇದನ್ನೂ ಓದಿ: Team India: ಕೊನೆಯ 10 ಓವರ್ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
ಚಾಂಪಿಯನ್ಸ್ ಟ್ರೋಫಿಗೂ ಮುಂಚಿತವಾಗಿ ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ತವರಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ…