Champions Trophy 2025: ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಕೈಜಾರುವ ಭೀತಿಯಲ್ಲಿ ಪಾಕ್ ಮಂಡಳಿ

Champions Trophy 2025: ಏಷ್ಯಾಕಪ್ ಬಳಿಕ ಇದೀಗ ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯವೂ ಪಾಕಿಸ್ತಾನದ ಕೈಯಿಂದ ಜಾರುವ ಲಕ್ಷಣಗಳು ದಟ್ಟವಾಗಿವೆ. ಅದರಂತೆ ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಮುಂದಿನ ವರ್ಷ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಕೂಡ ಈ ಹಿಂದೆ ಏಷ್ಯಾಕಪ್ ನಡೆದಂತೆ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ ಕಾರ್ಯಕಾರಿ ಮಂಡಳಿಯ ಮೂಲವೊಂದು ತಿಳಿಸಿದೆ.

Champions Trophy 2025: ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಕೈಜಾರುವ ಭೀತಿಯಲ್ಲಿ ಪಾಕ್ ಮಂಡಳಿ
ಚಾಂಪಿಯನ್ಸ್ ಟ್ರೋಫಿ
Follow us
ಪೃಥ್ವಿಶಂಕರ
|

Updated on: Mar 15, 2024 | 10:09 PM

ಏಷ್ಯಾಕಪ್ (Asia Cup 2023) ಬಳಿಕ ಇದೀಗ ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಆತಿಥ್ಯವೂ ಪಾಕಿಸ್ತಾನದ (Pakistan) ಕೈಯಿಂದ ಜಾರುವ ಲಕ್ಷಣಗಳು ದಟ್ಟವಾಗಿವೆ. ಅದರಂತೆ ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಮುಂದಿನ ವರ್ಷ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ಕೂಡ ಈ ಹಿಂದೆ ಏಷ್ಯಾಕಪ್ ನಡೆದಂತೆ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಗಳಿವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ (ICC) ಕಾರ್ಯಕಾರಿ ಮಂಡಳಿಯ ಮೂಲವೊಂದು ತಿಳಿಸಿದೆ. ಏಕೆಂದರೆ ಭಾರತ ಸರ್ಕಾರ ಚಾಂಪಿಯನ್ಸ್ ಟ್ರೋಫಿ ಆಡಲು ಟೀಂ ಇಂಡಿಯಾಗೆ ಪಾಕಿಸ್ತಾನಕ್ಕೆ ಹೋಗಲು ಅನುಮತಿ ನೀಡದಿದ್ದರೆ, ಆಗ ಹೈಬ್ರಿಡ್ ಮಾದರಿಯನ್ನೇ ಅನುಸರಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ

ಚಾಂಪಿಯನ್ಸ್ ಟ್ರೋಫಿಯನ್ನು 2025 ರ ಫೆಬ್ರವರಿ-ಮಾರ್ಚ್​ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಸದ್ಯ ದುಬೈನಲ್ಲಿ ನಡೆಯುತ್ತಿರುವ ಐಸಿಸಿ ಸಭೆಯಲ್ಲಿ ಚಾಂಪಿಯನ್ಸ್ ಟ್ರೋಫಿಯ ಬಗ್ಗೆ ಚರ್ಚೆ ನಡೆಸುವುದು ಅಜೆಂಡಾದಲ್ಲಿಲ್ಲ. ಆದರೆ ಹೊಸದಾಗಿ ಆಯ್ಕೆಯಾದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರೊಂದಿಗೆ ಈ ಬಗ್ಗೆ ಮಾತನಾಡುವ ಮೂಲಕ ಭರವಸೆ ಪಡೆಯಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ICC: 60 ಸೆಕೆಂಡ್ ಗಡುವು; ಬೌಲರ್​ಗಳಿಗೆ ಸಂಕಷ್ಟ ತಂದ ಐಸಿಸಿ ಹೊಸ ನಿಯಮ..!

ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ

ಅದಾಗ್ಯೂ ಚಾಂಪಿಯನ್ಸ್ ಟ್ರೋಫಿಯನ್ನು ಆಡಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗದಿದ್ದರೆ, ಪಂದ್ಯಾವಳಿಯನ್ನು ಹೈಬ್ರಿಡ್ ಮಾದರಿಯಲ್ಲಿ ಯುಎಇಯಲ್ಲಿ ಆಯೋಜಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಐಸಿಸಿ ಮಂಡಳಿಯ ಸದಸ್ಯರೊಬ್ಬರು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿರಿಯ ಆಡಳಿತಾಧಿಕಾರಿಯೊಬ್ಬರು, ‘ಮಂಡಳಿ ಸಭೆಗಳಲ್ಲಿ, ಪ್ರತಿಯೊಬ್ಬ ಸದಸ್ಯರು ಮತದಾನ ನಡೆಯುವ ಬಗ್ಗೆ ತಮ್ಮ ವಿಷಯವನ್ನು ಪ್ರಸ್ತಾಪಿಸಬಹುದು. ಆದರೆ ಸದಸ್ಯ ರಾಷ್ಟ್ರದ ಸರ್ಕಾರವು ಅಲ್ಲಿ ಆಡಲು ಸಾಧ್ಯವಿಲ್ಲ ಎಂದು ಹೇಳಿದರೆ ಐಸಿಸಿ ಪರ್ಯಾಯಗಳನ್ನು ಹುಡುಕಬೇಕಾಗಿದೆ ಎಂದಿದ್ದಾರೆ.

ಯುಎಇಯಲ್ಲಿ ಭಾರತದ ಪಂದ್ಯಗಳು?

ಒಂದು ವೇಳೆ ಐಸಿಸಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ಆಯೋಜಿಸಲು ಮುಂದಾದರೆ ಯುಎಇಯಲ್ಲಿ ಕ್ರಿಕೆಟ್ ಆಡಲು ಫೆಬ್ರವರಿ ಮತ್ತು ಮಾರ್ಚ್ ಸೂಕ್ತ ತಿಂಗಳುಗಳು. ಅಲ್ಲದೆ ಇಲ್ಲಿ ಮೂರು ಅಂತರಾಷ್ಟ್ರೀಯ ಸ್ಟೇಡಿಯಂಗಳೂ ಇವೆ. ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ಬಯಸದಿದ್ದರೆ ಭಾರತವು ‘ಹೈಬ್ರಿಡ್ ಮಾದರಿ’ ಅಡಿಯಲ್ಲಿ ಯುಎಇಯಲ್ಲಿ ತನ್ನ ಪಂದ್ಯಗಳನ್ನು ಆಡಬಹುದು. ಎಂಟು ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸುವ ನಿರೀಕ್ಷೆಯಿದ್ದು, ಭಾರತದ ಗುಂಪು ಪಂದ್ಯಗಳನ್ನು ದುಬೈ, ಅಬುಧಾಬಿ ಮತ್ತು ಶಾರ್ಜಾದಲ್ಲಿ ನಡೆಸುವ ಸಾಧ್ಯತೆಗಳಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್