ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ್ ತಂಡದ ಮುಂದಿನ ಎದುರಾಳಿ ಝಿಂಬಾಬ್ವೆ

Pakistan vs Zimbabwe 2024: ಬಾಂಗ್ಲಾದೇಶ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ್ ತಂಡವು 2-0 ಅಂತರದಿಂದ ಸೋಲನುಭವಿಸಿತ್ತು. ಇದೀಗ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲೊಪ್ಪಿಕೊಂಡಿದೆ. ಈ ಸೋಲುಗಳ ನಡುವೆಯೇ ಇದೀಗ ಪಾಕ್ ತಂಡ ಝಿಂಬಾಬ್ವೆ ವಿರುದ್ಧ ಸರಣಿ ಆಡಲು ನಿರ್ಧರಿಸಿದೆ.

ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ್ ತಂಡದ ಮುಂದಿನ ಎದುರಾಳಿ ಝಿಂಬಾಬ್ವೆ
PAK vs ZIM
Follow us
ಝಾಹಿರ್ ಯೂಸುಫ್
|

Updated on: Oct 14, 2024 | 10:09 AM

ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ್ ತಂಡವು ನವೆಂಬರ್​ನಲ್ಲಿ ಝಿಂಬಾಬ್ವೆ ವಿರುದ್ಧ 6 ಪಂದ್ಯಗಳ ಸರಣಿ ಆಡಲಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮುಕ್ತಾಯದ ಬೆನ್ನಲ್ಲೇ ಪಾಕ್ ಪಡೆ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಇದಾದ ಬಳಿಕ ಝಿಂಬಾಬ್ವೆ ವಿರುದ್ಧ ಟಿ20 ಹಾಗೂ ಏಕದಿನ ಸರಣಿಗಾಗಿ ತೆರಳಲಿದೆ.

ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಈಗಾಗಲೇ ಈ ಸರಣಿಗೆ ಅನುಮೋದನೆ ನೀಡಿದ್ದು, ಅದರಂತೆ ನವೆಂಬರ್ 24 ರಿಂದ ಪಾಕ್-ಝಿಂಬಾಬ್ವೆ ನಡುವಣ ಏಕದಿನ ಸರಣಿ ಶುರುವಾಗಲಿದ್ದು, ಈ ಸರಣಿಯಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಿದೆ. ಏಕದಿನ ಸರಣಿಯ ಮುಕ್ತಾಯದ ಬಳಿಕ ಡಿಸೆಂಬರ್ 1 ರಿಂದ ಮೂರು ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ.

ಉಭಯ ತಂಡಗಳ ಮುಖಾಮುಖಿ:

ಪಾಕಿಸ್ತಾನ್ ಮತ್ತು ಝಿಂಬಾಬ್ವೆ ಏಕದಿನ ಕ್ರಿಕೆಟ್​ನಲ್ಲಿ ಈವರೆಗೆ 62 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಪಾಕ್ ತಂಡವು 54 ಬಾರಿ ಜಯ ಸಾಧಿಸಿದರೆ, ಝಿಂಬಾಬ್ವೆ 5 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಟೈ ಆದರೆ, ಉಳಿದೆರಡು ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾಗಿದೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಉಭಯ ತಂಡಗಳು 18 ಬಾರಿ ಎದುರುಬದುರಾಗಿದೆ. ಈ ವೇಳೆ ಪಾಕಿಸ್ತಾನ್ ತಂಡವು 16 ಸಲ ಗೆಲುವಿನ ನಗೆ ಬೀರಿದೆ. ಇನ್ನು ಝಿಂಬಾಬ್ವೆ ಗೆದ್ದಿರುವುದು ಕೇವಲ 2 ಬಾರಿ ಮಾತ್ರ.

ಅದರಲ್ಲೂ 2022ರ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ವಿರುದ್ಧ ಝಿಂಬಾಬ್ವೆ 1 ರನ್​ಗಳ ರೋಚಕ ಜಯ ಸಾಧಿಸಿ ಇತಿಹಾಸ ಬರೆದಿತ್ತು. ಈ ಸೋಲಿನ ಬಳಿಕ ಪಾಕಿಸ್ತಾನ್ ತಂಡವು ಇದೇ ಮೊದಲ ಬಾರಿಗೆ ಟಿ20 ಕ್ರಿಕೆಟ್​ನಲ್ಲಿ ಝಿಂಬಾಬ್ವೆ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಈ ಬಾರಿ ಸಲ ಉಭಯ ತಂಡಗಳಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.

ಪಾಕಿಸ್ತಾನ್ – ಝಿಂಬಾಬ್ವೆ ಸರಣಿ ವೇಳಾಪಟ್ಟಿ:

ಸಂಖ್ಯೆ ದಿನಾಂಕ ತಂಡಗಳು ಪಂದ್ಯ ಮೈದಾನ ಆತಿಥ್ಯ
1 24-11-2024 ಝಿಂಬಾಬ್ವೆ vs ಪಾಕಿಸ್ತಾನ್ 1ನೇ ಏಕದಿನ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್, ಬುಲವಾಯೊ ಝಿಂಬಾಬ್ವೆ
2 26-11-2024 ಝಿಂಬಾಬ್ವೆ vs ಪಾಕಿಸ್ತಾನ್ 2ನೇ ಏಕದಿನ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್, ಬುಲವಾಯೊ ಝಿಂಬಾಬ್ವೆ
3 28-11-2024 ಝಿಂಬಾಬ್ವೆ vs ಪಾಕಿಸ್ತಾನ್ 3ನೇ ಏಕದಿನ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್, ಬುಲವಾಯೊ ಝಿಂಬಾಬ್ವೆ
4 01-12-2024 ಝಿಂಬಾಬ್ವೆ vs ಪಾಕಿಸ್ತಾನ್ 1ನೇ ಟಿ20 ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್, ಬುಲವಾಯೊ ಝಿಂಬಾಬ್ವೆ
5 03-12-2024 ಝಿಂಬಾಬ್ವೆ vs ಪಾಕಿಸ್ತಾನ್ 2ನೇ ಟಿ20 ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್, ಬುಲವಾಯೊ ಝಿಂಬಾಬ್ವೆ
6 05-12-2024 ಝಿಂಬಾಬ್ವೆ vs ಪಾಕಿಸ್ತಾನ್ 3ನೇ ಟಿ20 ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್, ಬುಲವಾಯೊ ಝಿಂಬಾಬ್ವೆ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?