AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್

Pakistan World Cup 2023 Jersey: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. 10 ದೇಶಗಳ ನಡುವಣ ಈ ಕ್ರಿಕೆಟ್ ಮಹಾಸಮರದ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸುವುದು ಅಕ್ಟೋಬರ್ 8 ರಂದು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ಏಕದಿನ ವಿಶ್ವಕಪ್ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್
Pakistan
TV9 Web
| Updated By: ಝಾಹಿರ್ ಯೂಸುಫ್|

Updated on:Aug 28, 2023 | 3:52 PM

Share

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ಗಾಗಿ ಪಾಕಿಸ್ತಾನ್ (Pakistan) ತಂಡವು ಹೊಸ​ ಜೆರ್ಸಿಯನ್ನು ಅನಾವರಣಗೊಳಿಸಿದೆ. ಲಾಹೋರ್​ನಲ್ಲಿ ನಡೆದ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ (PCB) ಕಾರ್ಯಕ್ರಮದಲ್ಲಿ ಪಾಕ್ ತಂಡದ ವರ್ಲ್ಡ್ ಕಪ್ ಜೆರ್ಸಿಯನ್ನು ಪ್ರದರ್ಶಿಸಲಾಗಿದೆ. ಈ ಹಿಂದಿನಂತೆ ಈ ಬಾರಿ ಕೂಡ ಬಾಬರ್ ಪಡೆ ಕಡು ಹಸಿರು ಬಣ್ಣದ ಜೆರ್ಸಿಯಲ್ಲೇ ಕಣಕ್ಕಿಳಿಯಲಿದೆ. ಆದರೆ 1999 ರ ಏಕದಿನ ವಿಶ್ವಕಪ್​ ಜೆರ್ಸಿಯಲ್ಲಿ ಕಾಣಿಸಿಕೊಂಡಂತೆ ನೂತನ ಕಿಟ್​ ಮುಂಭಾಗದಲ್ಲಿ ನಕ್ಷತ್ರದ ವಿನ್ಯಾಸವನ್ನು ಬಳಸಲಾಗಿದೆ. ಅಲ್ಲದೆ ಹೊಸ ಜೆರ್ಸಿಗೆ ‘ಸ್ಟಾರ್ ನೇಷನ್ ಜೆರ್ಸಿ’ ಎಂದು ಹೆಸರಿಡಲಾಗಿದೆ.

ಏಷ್ಯಾಕಪ್​ಗೂ ಮುನ್ನ ಜೆರ್ಸಿ ಅನಾವರಣ:

ಆಗಸ್ಟ್ 30 ರಿಂದ ಏಷ್ಯಾಕಪ್​ ಶುರುವಾಗಲಿದ್ದು, ಅದಕ್ಕೂ ಮುನ್ನ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಏಕದಿನ ವಿಶ್ವಕಪ್​ ಜೆರ್ಸಿಯನ್ನು ಅನಾವರಣಗೊಳಿಸಿರುವುದು ಅಚ್ಚರಿ. ಅದರಲ್ಲೂ ಇದೇ ಮಾದರಿಯ ಜೆರ್ಸಿಯಲ್ಲಿ ಪಾಕ್ ತಂಡ ಏಷ್ಯಾಕಪ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಇದಕ್ಕಾಗಿಯೇ ಹೊಸ ಜೆರ್ಸಿ ವಿನ್ಯಾಸವನ್ನು ಪಿಸಿಬಿ ಪ್ರದರ್ಶಿಸಿದೆ.

ಏಕದಿನ ವಿಶ್ವಕಪ್ ಯಾವಾಗ ಶುರು?

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. 10 ದೇಶಗಳ ನಡುವಣ ಈ ಕ್ರಿಕೆಟ್ ಮಹಾಸಮರದ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸುವುದು ಅಕ್ಟೋಬರ್ 8 ರಂದು. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

ಹಾಗೆಯೇ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ. ಅಲ್ಲದೆ ಫೈನಲ್ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದ್ದು, ನವೆಂಬರ್ 19 ರಂದು ಈ ಟೂರ್ನಿಗೆ ತೆರೆ ಬೀಳಲಿದೆ. ಏಕದಿನ ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಏಷ್ಯಾಕಪ್​ಗೆ ಕೌಂಟ್ ಡೌನ್:

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್​ಗಾಗಿ ಕೌಂಟ್ ಡೌನ್​ ಶುರುವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಆಡಲಿದೆ.

ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

ಈ ಬಾರಿಯ ಏಷ್ಯಾಕಪ್ ಹೈಬ್ರೀಡ್ ಮಾದರಿಯಲ್ಲಿ ನಡೆಯಲಿದ್ದು, ಅಂದರೆ 4 ಪಂದ್ಯಗಳು ಪಾಕಿಸ್ತಾನದಲ್ಲಿ ಇನ್ನುಳಿದ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ. ಇಲ್ಲಿ ಭಾರತದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.  ಹಾಗೆಯೇ ಫೈನಲ್ ಪಂದ್ಯವು ಸೆಪ್ಟೆಂಬರ್ 17 ರಂದು ಶ್ರೀಲಂಕಾದಲ್ಲೇ ನಡೆಯಲಿದೆ.

Published On - 3:49 pm, Mon, 28 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ