Asia Cup 2022: ಇಂದು ಪಾಕ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್

| Updated By: ಝಾಹಿರ್ ಯೂಸುಫ್

Updated on: Sep 07, 2022 | 3:55 PM

Pakistan vs Afghanistan Asia Cup 2022: ಒಂದು ವೇಳೆ ಇವತ್ತಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಪಾಕ್ ತಂಡಕ್ಕೆ ಸೋಲುಣಿಸಿದರೆ ಪಾಯಿಂಟ್ ಟೇಬಲ್​ನಲ್ಲಿ ಮೂರನೇ ಅಥವಾ 2ನೇ ಸ್ಥಾನಕ್ಕೇರಬಹುದು.

Asia Cup 2022: ಇಂದು ಪಾಕ್ ವಿರುದ್ದ ಅಫ್ಘಾನಿಸ್ತಾನ್ ಗೆದ್ದರೆ, ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್
Team India
Follow us on

Asia Cup 2022: ಏಷ್ಯಾಕಪ್​ನ ಸೂಪರ್-4 ಹಂತದ 5ನೇ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಟೀಮ್ ಇಂಡಿಯಾ (Team India) ಪಾಲಿಗೆ ನಿರ್ಣಾಯಕ ಎಂಬುದು ವಿಶೇಷ. ಅಂದರೆ ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ ತಂಡ ಗೆದ್ದರೆ ಟೀಮ್ ಇಂಡಿಯಾ ಏಷ್ಯಾಕಪ್​ನಿಂದ ಹೊರಬೀಳಲಿದೆ. ಒಂದು ವೇಳೆ ಅಫ್ಘಾನಿಸ್ತಾನ್ ಗೆದ್ದರೆ ಭಾರತದ ಫೈನಲ್​ಗೇರುವ ಕನಸು ಜೀವಂತವಾಗಿರಲಿದೆ. ಅಂದರೆ ಸೂಪರ್-4 ಪಾಯಿಂಟ್​ ಟೇಬಲ್​ನಲ್ಲಿ 2 ಜಯ ಸಾಧಿಸಿರುವ ಶ್ರೀಲಂಕಾ ತಂಡವು ಅಗ್ರಸ್ಥಾನದಲ್ಲಿದೆ. ಹಾಗೆಯೇ ಆಡಿರುವ 1 ಪಂದ್ಯದಲ್ಲಿ ಗೆದ್ದಿರುವ ಪಾಕಿಸ್ತಾನ್ ತಂಡವು 2ನೇ ಸ್ಥಾನದಲ್ಲಿದೆ. ಇನ್ನು ಟೀಮ್ ಇಂಡಿಯಾ 3ನೇ ಸ್ಥಾನದಲ್ಲಿದ್ದರೆ, ಅಫ್ಘಾನಿಸ್ತಾನ್ ನಾಲ್ಕನೇ ಸ್ಥಾನದಲ್ಲಿದೆ.

ಒಂದು ವೇಳೆ ಇವತ್ತಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ಪಾಕ್ ತಂಡಕ್ಕೆ ಸೋಲುಣಿಸಿದರೆ ಪಾಯಿಂಟ್ ಟೇಬಲ್​ನಲ್ಲಿ ಮೂರನೇ ಅಥವಾ 2ನೇ ಸ್ಥಾನಕ್ಕೇರಬಹುದು. ಅತ್ತ ಟೀಮ್ ಇಂಡಿಯಾ ಕೊನೆಯ ಸ್ಥಾನಕ್ಕೆ ಇಳಿಯಲಿದೆ. ಇದಾಗ್ಯೂ ಭಾರತ ತಂಡವು ಅಫ್ಘಾನಿಸ್ತಾನ್ ವಿರುದ್ದ ಕೊನೆಯ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಟೀಮ್ ಇಂಡಿಯಾ ಮತ್ತೆ ಪಾಯಿಂಟ್​ ಟೇಬಲ್​ನಲ್ಲಿ ಮೇಲೇರಬಹುದು. ಅದಾಗ್ಯೂ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸುವ ಅವಕಾಶ ಪಡೆಯಬೇಕಿದ್ದರೆ ಪಾಕಿಸ್ತಾನ್ ಮುಂದಿನ ಎರಡೂ ಪಂದ್ಯಗಳಲ್ಲಿ ಸೋಲಬೇಕು.

ಅಂದರೆ ಇಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ವಿರುದ್ದ ಪಾಕ್ ಸೋತರೆ, ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಶ್ರೀಲಂಕಾ ಗೆಲ್ಲಬೇಕು. ಈಗಾಗಲೇ ಫೈನಲ್​ಗೆ ಸ್ಥಾನ ಖಚಿತಪಡಿಸಿಕೊಂಡಿರುವ ಶ್ರೀಲಂಕಾ ಗೆಲ್ಲುವುದರಿಂದ ಟೀಮ್ ಇಂಡಿಯಾದ ಪಾಯಿಂಟ್ಸ್​ನಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ.

ಇದನ್ನೂ ಓದಿ
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಬದಲಾಗಿ ಪಾಕಿಸ್ತಾನ್, ಅಫ್ಘಾನಿಸ್ತಾನ್ ಹಾಗೂ ಟೀಮ್ ಇಂಡಿಯಾ ಒಂದೊಂದು ಪಂದ್ಯ ಗೆದ್ದರೆ ಅಲ್ಲಿ ನೆಟ್​ ರನ್​ ಮುಖ್ಯವಾಗುತ್ತದೆ. ಅದರಂತೆ ಅಫ್ಘಾನಿಸ್ತಾನ್ ವಿರುದ್ದ ಭರ್ಜರಿ ಜಯ ಸಾಧಿಸಿ, ನೆಟ್ ರನ್​ ರೇಟ್ ಮೂಲಕ ಟೀಮ್ ಇಂಡಿಯಾಗೆ ಫೈನಲ್​ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಅಫ್ಘಾನಿಸ್ತಾನ್ ತಂಡವು ಗೆದ್ದರೆ, ಟೀಮ್ ಇಂಡಿಯಾದ ಫೈನಲ್​ಗೇರುವ ಆಸೆ ಜೀವಂತವಿರಲಿದೆ. ಒಂದು ವೇಳೆ ಅಫ್ಘಾನಿಸ್ತಾನ್ ಸೋತರೆ ಟೀಮ್ ಇಂಡಿಯಾ ಅಧಿಕೃತವಾಗಿ ಏಷ್ಯಾಕಪ್​ನಿಂದ ಹೊರಬೀಳಲಿದೆ. ಹಾಗಾಗಿ ಅಫ್ಘಾನ್-ಪಾಕ್ ನಡುವಣ ಇಂದಿನ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ.