PAK vs AUS: ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಘೋಷಿಸಿದ ಪಾಕಿಸ್ತಾನ್-ಆಸ್ಟ್ರೇಲಿಯಾ

Pakistan Vs Australia 1st Test: ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ 3ನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಕಣಕ್ಕಿಳಿದರೆ, ಮಧ್ಯಮ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟ್ ಬೀಸಲಿದ್ದಾರೆ.

PAK vs AUS: ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಘೋಷಿಸಿದ ಪಾಕಿಸ್ತಾನ್-ಆಸ್ಟ್ರೇಲಿಯಾ
Australia vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 13, 2023 | 5:12 PM

ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ್ (Pakistan vs Australia) ನಡುವಣ 3 ಪಂದ್ಯಗಳ ಟೆಸ್ಟ್ ಸರಣಿಯು ಗುರುವಾರದಿಂದ (ಡಿ.14) ಶುರುವಾಗಲಿದೆ. ಪರ್ತ್​​ನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ. ಅಂದರೆ ಪಂದ್ಯದ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಆಡುವ ಬಳಗವನ್ನು ಹೆಸರಿಸಿರುವುದು ವಿಶೇಷ.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ ಹಾಗೂ ಉಸ್ಮಾನ್ ಖ್ವಾಜಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಹಾಗೆಯೇ 3ನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಕಣಕ್ಕಿಳಿದರೆ, ಮಧ್ಯಮ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಮಿಚೆಲ್ ಮಾರ್ಷ್, ಪ್ಯಾಟ್ ಕಮಿನ್ಸ್​ ಕಣಕ್ಕಿಳಿಯಲಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್​ ಆಗಿ ಅಲೆಕ್ಸ್ ಕ್ಯಾರಿ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ವೇಗಿಗಳಾಗಿ ಮಿಚೆಲ್ ಸ್ಟಾರ್ಕ್​, ಜೋಶ್ ಹ್ಯಾಝಲ್​ವುಡ್ ಇದ್ದರೆ, ಸ್ಪಿನ್ನರ್ ಆಗಿ ನಾಥನ್ ಲಿಯಾನ್ ಸ್ಥಾನ ಪಡೆದಿದ್ದಾರೆ.

ಮತ್ತೊಂದೆಡೆ ಈ ಪಂದ್ಯದೊಂದಿಗೆ ಪಾಕಿಸ್ತಾನ್ ಪರ ನಾಯಕನಾಗಿ ಶಾನ್ ಮಸೂದ್ ಹೊಸ ಇನಿಂಗ್ಸ್​ ಆರಂಭಿಸಲಿದ್ದಾರೆ. ತಂಡದಲ್ಲಿ ಆರಂಭಿಕರಾಗಿ ಇಮಾಮ್ ಉಲ್ ಹಕ್ ಹಾಗೂ ಅಬ್ದುಲ್ಲಾ ಶಫೀಕ್​ಗೆ ಸ್ಥಾನ ನೀಡಲಾಗಿದೆ. 3ನೇ ಕ್ರಮಾಂಕದಲ್ಲಿ ಶಾನ್ ಮಸೂದ್ ಕಣಕ್ಕಿಳಿಯಲಿದ್ದು, 4ನೇ ಸ್ಥಾನದಲ್ಲಿ ಮಾಜಿ ನಾಯಕ ಬಾಬರ್ ಆಝಂ ಬ್ಯಾಟ್ ಬೀಸಲಿದ್ದಾರೆ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸರ್ಫರಾಝ್ ಅಹ್ಮದ್, ಸೌದ್ ಶಕೀಲ್ ಹಾಗೂ ಸಲ್ಮಾನ್ ಅಲಿ ಆಘಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್​ಗಳಾಗಿ ಶಹೀನ್ ಶಾ ಅಫ್ರಿದಿ, ಫಹೀಯ್ ಅಶ್ರಫ್, ಅಮೀರ್ ಜಮಾಲ್ ಹಾಗೂ ಖುರ್ರಂ ಶಹಜಾದ್ ಕಣಕ್ಕಿಳಿಯಲಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಆಸ್ಟ್ರೇಲಿಯಾ ಪ್ಲೇಯಿಂಗ್ 11 : ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ನಾಥನ್ ಲಿಯಾನ್, ಜೋಶ್ ಹ್ಯಾಝಲ್​ವುಡ್.

ಇದನ್ನೂ ಓದಿ: ಧೋನಿ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್

ಪಾಕಿಸ್ತಾನ್ ಪ್ಲೇಯಿಂಗ್ 11 : ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಶಾನ್ ಮಸೂದ್ (ನಾಯಕ), ಬಾಬರ್ ಆಝಂ, ಸೌದ್ ಶಕೀಲ್, ಸರ್ಫರಾಜ್ ಅಹ್ಮದ್ (ವಿಕೆಟ್ ಕೀಪರ್), ಸಲ್ಮಾನ್ ಅಲಿ ಆಘಾ, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಅಮೀರ್ ಜಮಾಲ್ ಮತ್ತು ಖುರ್ರಂ ಶಹಜಾದ್.

ಪಾಕಿಸ್ತಾನ್-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 14 ರಿಂದ 18- ಮೊದಲ ಟೆಸ್ಟ್ ಪಂದ್ಯ (ಪರ್ತ್​ ಸ್ಟೇಡಿಯಂ)
  2. ಡಿಸೆಂಬರ್ 26 ರಿಂದ 30- ಎರಡನೇ ಟೆಸ್ಟ್ ಪಂದ್ಯ (ಮೆಲ್ಬೋರ್ನ್​ ಕ್ರಿಕೆಟ್​ ಸ್ಟೇಡಿಯಂ)
  3. ಜನವರಿ 3 ರಿಂದ 7- ಮೂರನೇ ಟೆಸ್ಟ್ ಪಂದ್ಯ (ಸಿಡ್ನಿ ಕ್ರಿಕೆಟ್​ ಗ್ರೌಂಡ್)