Pakistan Vs England T20 Final Live Streaming: ಇಂಗ್ಲೆಂಡ್- ಪಾಕ್ ನಡುವೆ ಫೈನಲ್ ಕಾಳಗ; ಪಂದ್ಯ ಆರಂಭ ಯಾವಾಗ?
Pakistan Vs England T20 Final Live Streaming: 2022 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲು ಸೆಣಸಾಡಲಿವೆ.
2022 ರ ಟಿ20 ವಿಶ್ವಕಪ್ (T20 World Cup 2022) ಫೈನಲ್‌ನಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ (Pakistan Vs England) ತಂಡಗಳು ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲು ಸೆಣಸಾಡಲಿವೆ. ಸೆಮಿಫೈನಲ್ ಪಂದ್ಯಗಳಲ್ಲಿ ಎರಡೂ ತಂಡಗಳಿಗೂ ಭರ್ಜರಿ ಜಯ ದೊರೆತಿದೆ. ನ್ಯೂಜಿಲೆಂಡ್ ತಂಡವನ್ನು ಪಾಕಿಸ್ತಾನ 9 ವಿಕೆಟ್ಗಳಿಂದ ಸೋಲಿಸಿದರೆ, ಇಂಗ್ಲೆಂಡ್ ತಂಡ 10 ವಿಕೆಟ್ಗಳಿಂದ ಟೀಂ ಇಂಡಿಯಾವನ್ನು ಮಣಿಸಿತು. ಈಗ ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಮೈದಾನವು (Melbourne Cricket Ground) ಈ ಬಾರಿ ಯಾವ ತಂಡವನ್ನು ಚಾಂಪಿಯನ್ ಪಟ್ಟ ಅಲಂಕರಿಸಬೇಕೆಂದು ನಿರ್ಧರಿಸುತ್ತದೆ. 2010ರಲ್ಲಿ ಇಂಗ್ಲೆಂಡ್ ಈ ಪ್ರಶಸ್ತಿ ಗೆದ್ದರೆ, 2009ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು.
ಇಂಗ್ಲೆಂಡ್‌ನ ಬ್ಯಾಟಿಂಗ್ ಸ್ಟಾರ್ಗಳಾದ ಜೋಸ್ ಬಟ್ಲರ್, ಅಲೆಕ್ಸ್ ಹೇಲ್ಸ್, ಬೆನ್ ಸ್ಟೋಕ್ಸ್ ಮತ್ತು ಮೊಯಿನ್ ಅಲಿ ಅವರನ್ನು ಕಟ್ಟಿಹಾಕಲು ಶಾಹೀನ್ ಶಾ ಆಫ್ರಿದಿ, ಮೊಹಮ್ಮದ್ ವಾಸಿಮ್ ಜೂನಿಯರ್ ಮತ್ತು ಹ್ಯಾರಿಸ್ ರೌಫ್ ತಂತ್ರಗಳನ್ನು ಹೆಣೆಯಬೇಕಿದೆ. 1992 ರ ಫೈನಲ್‌ನಲ್ಲಿ ಇಮ್ರಾನ್ ಖಾನ್ ಮತ್ತು ಜಾವೇದ್ ಮಿಯಾಂದಾದ್ ತೋರಿದ ಅದೇ ಡೆಪ್ತ್ ಅನ್ನು ಬ್ಯಾಟಿಂಗ್‌ನಲ್ಲಿ ಬಾಬರ್ ಮತ್ತು ರಿಜ್ವಾನ್ ತೊರಬೇಕಿದೆ. 1992ರ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯ ಈ ಎರಡು ತಂಡಗಳ ನಡುವೆ ನಡೆದಿತ್ತು. ಆಗ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಸೋತಿತ್ತು.
ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ
ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವೆ ಟಿ20 ವಿಶ್ವಕಪ್‌ನ ಅಂತಿಮ ಪಂದ್ಯ ಯಾವಾಗ ನಡೆಯಲಿದೆ?
ನವೆಂಬರ್ 13 ಭಾನುವಾರದಂದು ನಡೆಯಲಿರುವ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಫೈನಲ್ ಎಲ್ಲಿ ನಡೆಯಲಿದೆ?
ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್‌ನ ಅಂತಿಮ ಪಂದ್ಯವು ಮೆಲ್ಬೋರ್ನ್‌ನ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಫೈನಲ್ ಎಷ್ಟು ಗಂಟೆಗೆ ಆರಂಭವಾಗಲಿದೆ?
ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30 ರಿಂದ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯದ ನೇರ ಪ್ರಸಾರವನ್ನು ಭಾರತದಲ್ಲಿ ಎಲ್ಲಿ ವೀಕ್ಷಿಸಬಹುದು?
ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯದ ನೇರ ಪ್ರಸಾರವನ್ನು ಭಾರತದಲ್ಲಿನ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.
ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.