Asia Cup 2023: ಏಷ್ಯಾಕಪ್ ಮೊದಲ ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ಪ್ರಸಾರ? ಇಲ್ಲಿದೆ ಪೂರ್ಣ ವಿವರ

Asia Cup 2023 Live Streaming: 2023 ರ ಏಷ್ಯಾಕಪ್ ಇನ್ನೇನು ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯ ನೇಪಾಳ ಮತ್ತು ಪಾಕಿಸ್ತಾನ ನಡುವೆ ನಡೆಯಲಿದ್ದು, ಪಂದ್ಯ ಇಂದು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. 2018 ರ ನಂತರ ಅಂದರೆ ಬರೋಬ್ಬರಿ 5 ವರ್ಷಗಳ ನಂತರ ಏಕದಿನ ಮಾದರಿಯ ಏಷ್ಯಾಕಪ್ ಅನ್ನು ಆಯೋಜಿಸಲಾಗುತ್ತಿದೆ.

Asia Cup 2023: ಏಷ್ಯಾಕಪ್ ಮೊದಲ ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್​ನಲ್ಲಿ ಪ್ರಸಾರ? ಇಲ್ಲಿದೆ ಪೂರ್ಣ ವಿವರ
ಪಾಕಿಸ್ತಾನ ಮತ್ತು ನೇಪಾಳ
Follow us
ಪೃಥ್ವಿಶಂಕರ
|

Updated on:Aug 30, 2023 | 9:58 AM

2023 ರ ಏಷ್ಯಾಕಪ್ (Asia Cup 2023) ಇನ್ನೇನು ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದೆ. ಈ ಟೂರ್ನಿಯ ಮೊದಲ ಪಂದ್ಯ ನೇಪಾಳ ಮತ್ತು ಪಾಕಿಸ್ತಾನ (Nepal vs Pakistan) ನಡುವೆ ನಡೆಯಲಿದ್ದು, ಪಂದ್ಯ ಇಂದು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. 2018 ರ ನಂತರ ಅಂದರೆ ಬರೋಬ್ಬರಿ 5 ವರ್ಷಗಳ ನಂತರ ಏಕದಿನ ಮಾದರಿಯ ಏಷ್ಯಾಕಪ್ ಅನ್ನು ಆಯೋಜಿಸಲಾಗುತ್ತಿದೆ. ಈ ಪಂದ್ಯಾವಳಿಯಲ್ಲಿ 6 ತಂಡಗಳು ಭಾಗವಹಿಸುತ್ತಿದ್ದು, ಇದರಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಸೇರಿವೆ. ಇನ್ನು ಮೊದಲ ಪಂದ್ಯಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯಲ್ಲಿದ್ದು, ಈ ಸಮಾರಂಭದಲ್ಲಿ ಖ್ಯಾತೆ ತಾರೆಯರು ಪ್ರದರ್ಶನ ನೀಡಲಿದ್ದಾರೆ. ಆ ಬಳಿಕ ಮೊದಲ ಪಂದ್ಯಕ್ಕೆ ಮುಲ್ತಾನ್ ಕ್ರೀಡಾಂಗಣ (Multan International Cricket Stadium) ಸಾಕ್ಷಿಯಾಗಲಿದೆ.

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ

ಏಷ್ಯಾಕಪ್ ಮೊದಲ ಪಂದ್ಯ ಯಾವಾಗ ನಡೆಯಲಿದೆ?

ಏಷ್ಯಾಕಪ್ ಮೊದಲ ಪಂದ್ಯ ಆಗಸ್ಟ್ 30 ರ ಬುಧವಾರದಂದು ನಡೆಯಲ್ಲಿದೆ.

ಏಷ್ಯಾಕಪ್ ಮೊದಲ ಪಂದ್ಯ ಯಾವ ತಂಡಗಳ ನಡುವೆ ನಡೆಯಲಿದೆ?

ಏಷ್ಯಾಕಪ್ ಮೊದಲ ಪಂದ್ಯ ಆತಿಥೇಯ ಪಾಕಿಸ್ತಾನ ಹಾಗೂ ನೇಪಾಳ ನಡುವೆ ನಡೆಯಲ್ಲಿದೆ.

ಏಷ್ಯಾಕಪ್ ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಏಷ್ಯಾಕಪ್ ಮೊದಲ ಪಂದ್ಯದ ಟಾಸ್ ಮಧ್ಯಾಹ್ನ 2:30 ಕ್ಕೆ ನಡೆಯಲ್ಲಿದೆ. ಹಾಗೆಯೇ ಪಂದ್ಯ 3 ಗಂಟೆಗೆ ಆರಂಭವಾಗಲಿದೆ.

ಏಷ್ಯಾಕಪ್ ಮೊದಲ ಪಂದ್ಯ ಯಾವ ಮೈದಾನದಲ್ಲಿ ನಡೆಯಲ್ಲಿದೆ?

ಏಷ್ಯಾಕಪ್ ಮೊದಲ ಪಂದ್ಯ ಮುಲ್ತಾನ್‌ನ ಮುಲ್ತಾನ್‌ ಕ್ರಿಕೆಟ್ ಮೈದಾನದಲ್ಲಿ ನಡೆಯಲ್ಲಿದೆ.

ಏಷ್ಯಾಕಪ್​ನ ಮೊದಲ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಏಷ್ಯಾಕಪ್‌ನ ನೇರ ಪ್ರಸಾರದ ಹಕ್ಕುಗಳನ್ನು ಸ್ಟಾರ್ ಸ್ಪೋರ್ಟ್ಸ್‌ ಖರೀದಿಸಿದೆ. ಹೀಗಾಗಿ ನೀವು ಸ್ಟಾರ್ ಸ್ಪೋರ್ಟ್ಸ್‌ ನೆಟ್​ವರ್ಕ್​ನ ವಿವಿಧ ಭಾಷೆಗಳಲ್ಲಿ ಉದ್ಘಾಟನಾ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಹಾಗೆಯೇ OTT ಪ್ಲಾಟ್‌ಫಾರ್ಮ್ ಹಾಟ್‌ಸ್ಟಾರ್‌ನಲ್ಲಿ ನೀವು ಪಂದ್ಯಗಳನ್ನು ಉಚಿತವಾಗಿ ಆನಂದಿಸಬಹುದಾಗಿದೆ.

ಏಷ್ಯಾಕಪ್​ಗೆ ಉಭಯ ತಂಡಗಳು

ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಕುಶಾಲ್ ಭುರ್ಟೆಲ್, ಲಲಿತ್ ರಾಜಬಂಶಿ, ಭೀಮ್ ಸರ್ಕಿ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್, ಆರಿಫ್ ಶೇಖ್, ಪ್ರತಿಸ್ ಜಿಸಿ, ಕಿಶೋರ್ ಮಹತೋ, ಅರ್ಜುನ್, ಸಂದೀಪ್ ಜೋರಾ, ಸೌದ್ ಮತ್ತು ಶ್ಯಾಮ್ ಧಾಕಲ್.

ಪಾಕಿಸ್ತಾನ ಕ್ರಿಕೆಟ್ ತಂಡ: ಬಾಬರ್ ಆಝಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ತಯ್ಯಬ್ ತಾಹಿರ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಹ್ಯಾರಿಸ್ , ಮೊಹಮ್ಮದ್ ನವಾಜ್ , ಉಸಾಮಾ ಮಿರ್, ಫಹೀಮ್ ಅಶ್ರಫ್, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ ಮತ್ತು ಶಾಹೀನ್ ಅಫ್ರಿದಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:57 am, Wed, 30 August 23

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು