ಬೆಂಗಳೂರಿನಲ್ಲಿ ಪಾಕ್- ಕಿವೀಸ್ ಮುಖಾಮುಖಿ! ಗೆದ್ದವರಿಗೆ ಸೆಮಿಸ್ ಕನಸು ಜೀವಂತ; ಪಂದ್ಯ ಎಷ್ಟು ಗಂಟೆಗೆ ಆರಂಭ?

Pakistan vs New Zealand Live Streaming: ಗಾಯಾಳುಗಳ ಸಮಸ್ಯೆಯಿಂದ ಕಂಗೆಟ್ಟಿರುವ ನ್ಯೂಜಿಲೆಂಡ್ ತಂಡ ತನ್ನ ಮುಂದಿನ ಮಹತ್ವದ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ಈ ಕದನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲ್ಲಿದೆ.

ಬೆಂಗಳೂರಿನಲ್ಲಿ ಪಾಕ್- ಕಿವೀಸ್ ಮುಖಾಮುಖಿ! ಗೆದ್ದವರಿಗೆ ಸೆಮಿಸ್ ಕನಸು ಜೀವಂತ; ಪಂದ್ಯ ಎಷ್ಟು ಗಂಟೆಗೆ ಆರಂಭ?
ನ್ಯೂಜಿಲೆಂಡ್- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on:Nov 03, 2023 | 6:53 PM

ಗಾಯಾಳುಗಳ ಸಮಸ್ಯೆಯಿಂದ ಕಂಗೆಟ್ಟಿರುವ ನ್ಯೂಜಿಲೆಂಡ್ ತಂಡ ತನ್ನ ಮುಂದಿನ ಮಹತ್ವದ ವಿಶ್ವಕಪ್ (ICC World Cup 2023) ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು (Pakistan vs New Zealand) ಎದುರಿಸುತ್ತಿದೆ. ಉಭಯ ತಂಡಗಳ ಈ ಕದನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M. Chinnaswamy Stadium, Bengaluru) ನಡೆಯಲ್ಲಿದೆ. ಸೆಮಿಫೈನಲ್‌ಗೇರಬೇಕೆಂದರೆ ಉಭಯ ತಂಡಗಳಿಗೂ ಈ ಗೆಲುವು ಅವಶ್ಯಕವಾಗಿದೆ. ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದ ಬಳಿಕ ಉಭಯ ತಂಡಗಳ ಹಣೆಬರಹವೇ ಬದಲಾಗಿದ್ದು, ಸೆಮಿಫೈನಲ್‌ ರೇಸ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿವೆ. ಸತತ ನಾಲ್ಕು ಗೆಲುವಿನೊಂದಿಗೆ ಶುಭಾರಂಭ ಮಾಡಿದ ನ್ಯೂಜಿಲೆಂಡ್ ಹ್ಯಾಟ್ರಿಕ್ ಸೋಲು ಕಂಡಿದೆ. ಹೀಗಾಗಿ ಆಡಿರುವ ಏಳು ಪಂದ್ಯಗಳಿಂದ ಎಂಟು ಅಂಕಗಳನ್ನು ಹೊಂದಿದೆ. ಏಳು ಪಂದ್ಯಗಳಿಂದ ಆರು ಅಂಕಗಳನ್ನು ಹೊಂದಿರುವ ಪಾಕಿಸ್ತಾನದ ಸ್ಥಿತಿ ಇನ್ನೂ ಕೆಟ್ಟದಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಸೋತ ತಂಡಕ್ಕೆ ಸೆಮಿಸ್ ಹಾದಿ ಇನ್ನಷ್ಟು ಕಠಿಣವಾಗಲಿದೆ.

ಮುಖಾಮುಖಿ ವರದಿ

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ ನಡೆದಿರುವ 115 ಏಕದಿನ ಪಂದ್ಯಗಳಲ್ಲಿ ನ್ಯೂಜಿಲೆಂಡ್ 51 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 60 ಪಂದ್ಯಗಳನ್ನು ಗೆದ್ದಿದೆ. 3 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದರೆ, 1 ಪಂದ್ಯ ಟೈ ಆಗಿದೆ. ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವೆ ತಟಸ್ಥ ಸ್ಥಳಗಳಲ್ಲಿ ಆಡಿದ 37 ಪಂದ್ಯಗಳಲ್ಲಿ, ನ್ಯೂಜಿಲೆಂಡ್ 14 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 23 ಪಂದ್ಯಗಳನ್ನು ಗೆದ್ದಿದೆ.

ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವೆ ಇದುವರೆಗೆ 9 ಪಂದ್ಯಗಳು ನಡೆದಿದ್ದು, ಇದರಲ್ಲಿ ನ್ಯೂಜಿಲೆಂಡ್ 2 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಾಕಿಸ್ತಾನ 7 ಪಂದ್ಯಗಳನ್ನು ಗೆದ್ದಿದೆ.

ಬೆಂಗಳೂರಿನಲ್ಲಿ ನ.04 ರಂದು ಕ್ರಿಕೆಟ್​ ವಿಶ್ವಕಪ್ ಪಂದ್ಯ; ಪಾರ್ಕಿಂಗ್​ ಮಾಹಿತಿ ಇಲ್ಲಿದೆ

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ.

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯವು ನವೆಂಬರ್ 04 ರಂದು (ಶನಿವಾರ) ನಡೆಯಲಿದೆ.

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 10:30 ರಿಂದ ಆರಂಭವಾಗಲಿದೆ.

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?

ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:52 pm, Fri, 3 November 23

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್