Pakistan vs New Zealand, T20 World Cup 2021: ನ್ಯೂಜಿಲೆಂಡ್ ವಿರುದ್ದ ಜಯ ಸಾಧಿಸಿದ ಪಾಕಿಸ್ತಾನ್

| Updated By: ಝಾಹಿರ್ ಯೂಸುಫ್

Updated on: Oct 26, 2021 | 11:10 PM

Pakistan vs New Zealand : ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ತಂಡ ಒಟ್ಟು 25 ಮುಖಾಮುಖಿಯಾಗಿದೆ. ಇದರಲ್ಲಿ ಪಾಕಿಸ್ತಾನ್ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್‌ 10 ಪಂದ್ಯಗಳನ್ನು ಗೆದ್ದುಕೊಂಡಿದೆ.

Pakistan vs New Zealand, T20 World Cup 2021: ನ್ಯೂಜಿಲೆಂಡ್ ವಿರುದ್ದ ಜಯ ಸಾಧಿಸಿದ ಪಾಕಿಸ್ತಾನ್
Pakistan vs New Zealand live score
Follow us on

ಶಾರ್ಜಾದಲ್ಲಿ ನಡೆದ ಟಿ20 ವಿಶ್ವಕಪ್​ನ (ICC T20 World Cup 2021) 19ನೇ ಪಂದ್ಯದಲ್ಲಿ ಬಾಬರ್ ಆಜಂ (Babar Azam) ನಾಯಕತ್ವದ ಪಾಕಿಸ್ತಾನ್ ತಂಡ ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ನ್ಯೂಜಿಲೆಂಡ್ (Pakistan vs New Zealand)  ವಿರುದ್ದ 5 ವಿಕೆಟ್​ಗಳ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ನಿಗದಿತ 20 ಓವರ್​ನಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್​ ಕಲೆಹಾಕಿತು. ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಪಾಕ್ ತಂಡ ಒಂದು ಹಂತದಲ್ಲಿ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಅದರಂತೆ 5 ವಿಕೆಟ್​ ಕಳೆದುಕೊಂಡಿದ್ದ ಪಾಕ್ ತಂಡಕ್ಕೆ ಅಂತಿಮ 6 ಓವರ್​ಗಳಲ್ಲಿ 53 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಜೊತೆಗೂಡಿದ ಅನುಭವಿ ಶೊಯೇಬ್ ಮಲಿಕ್ (26) ಹಾಗೂ ಆಸಿಫ್ ಅಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ 12 ಎಸೆತಗಳಲ್ಲಿ 3 ಸಿಕ್ಸರ್​ನೊಂದಿಗೆ 27 ರನ್ ಬಾರಿಸುವ ಮೂಲಕ ಆಸಿಫ್ ಅಲಿ ತಂಡವನ್ನು 18.4 ಓವರ್​ನಲ್ಲಿ 135 ರನ್​ಗಳ ಗುರಿ ಮುಟ್ಟಿಸಿದರು.

ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ ತಂಡ ಒಟ್ಟು 25 ಮುಖಾಮುಖಿಯಾಗಿದೆ. ಇದರಲ್ಲಿ ಪಾಕಿಸ್ತಾನ್ 15 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್‌ 10 ಪಂದ್ಯಗಳನ್ನು ಗೆದ್ದುಕೊಂಡಿದೆ.

ನ್ಯೂಜಿಲೆಂಡ್ (ಪ್ಲೇಯಿಂಗ್ 11): ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್(ನಾಯಕ), ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಟಿಮ್ ಸೀಫರ್ಟ್(ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್

ಪಾಕಿಸ್ತಾನ (ಪ್ಲೇಯಿಂಗ್ 11): ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಆಜಂ(ನಾಯಕ), ಫಖರ್ ಝಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ

 

Published On - 7:04 pm, Tue, 26 October 21