AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್-ಶ್ರೀಲಂಕಾ ನಡುವಣ ಪಂದ್ಯ ರದ್ದು..!

Pakistan vs Sri Lanka: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದಾರೆ. ಈ ದಾಳಿಯ ಬೆನ್ನಲ್ಲೇ ಶ್ರೀಲಂಕಾ ತಂಡದ ಕೆಲ ಆಟಗಾರರು ತವರಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ್-ಶ್ರೀಲಂಕಾ ನಡುವಣ ಪಂದ್ಯ ರದ್ದು..!
Pak Vs Sl
ಝಾಹಿರ್ ಯೂಸುಫ್
|

Updated on:Nov 13, 2025 | 11:14 AM

Share

ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಇಂದು (ನ.13) ನಡೆಯಬೇಕಿದ್ದ ಎರಡನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಶ್ರೀಲಂಕಾ ತಂಡದ 8 ಆಟಗಾರರು ತವರಿಗೆ ತೆರಳುವುದಾಗಿ ತಿಳಿಸಿದ್ದರು. ಇದೇ ಕಾರಣದಿಂದಾಗಿ ಗುರುವಾರ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಸರಣಿಗೆ ದಿನಾಂಕ ಮರುನಿಗದಿ:

ಶ್ರೀಲಂಕಾದ ಕೆಲ ಆಟಗಾರರು ತಮ್ಮ ಸುರಕ್ಷತಾ ಕಾಳಜಿಯನ್ನು ಉಲ್ಲೇಖಿಸಿ ತವರಿಗೆ ಮರಳಲು ಬಯಸಿದ್ದಾರೆ. ಇದಾಗ್ಯೂ ಈ ಸರಣಿಯನ್ನು ಮುಂದುವರೆಸುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಉಳಿದ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಿದೆ.

ಅದರಂತೆ ಇಂದು ನಡಯಬೇಕಿದ್ದ 2ನೇ ಏಕದಿನ ಪಂದ್ಯವನ್ನು ಶುಕ್ರವಾರ ಆಡಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ನವೆಂಬರ್ 15 ಕ್ಕೆ ನಿಗದಿಯಾಗಿದ್ದ ಮೂರನೇ ಮ್ಯಾಚ್ ಭಾನುವಾರ ನಡೆಯಲಿದೆ. ಈ ಮೂಲಕ ಸರಣಿಯನ್ನು ಪೂರ್ಣಗೊಳಿಸಲು ಪಿಸಿಬಿ ಪ್ಲ್ಯಾನ್ ರೂಪಿಸಿದೆ.

ಬದಲಿ ಆಟಗಾರರ ಎಂಟ್ರಿ:

ಶ್ರೀಲಂಕಾ ಏಕದಿನ ತಂಡದಲ್ಲಿದ್ದ ಕೆಲ ಆಟಗಾರರು ಪಾಕ್​ನಲ್ಲಿನ ಉಗ್ರರ ದಾಳಿಯಿಂದ ಭಯಭೀತರಾಗಿ ತವರಿಗೆ ಮರಳಲು ಮುಂದಾಗಿದ್ದಾರೆ. ಯಾವುದೇ ಆಟಗಾರನು ಅರ್ಧದಲ್ಲೇ ಸರಣಿ ತೊರೆದರೂ, ಬದಲಿ ಆಟಗಾರರನ್ನು ಕಳುಹಿಸಿ ಕೊಡುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಹೀಗಾಗಿಯೇ ಇಂದು (ನ.13) ನಡೆಯಬೇಕಿದ್ದ ಪಂದ್ಯವನ್ನು ಮರು ನಿಗದಿ ಮಾಡಲಾಗಿದೆ.

ಇದನ್ನೂ ಓದಿ: IND vs SA: ಆಯ್ಕೆ ಮಾಡಿ ನಿತೀಶ್ ಕುಮಾರ್ ರೆಡ್ಡಿಯನ್ನು ಕೈ ಬಿಟ್ಟಿದ್ದೇಕೆ?

ಏಕದಿನ ಸರಣಿ ಬಳಿಕ ತ್ರಿಕೋನ ಸರಣಿ:

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮೂರು ತಂಡಗಳ ನಡುವಣ ತ್ರಿಕೋನ ಟಿ20 ಸರಣಿಯನ್ನು ಆಯೋಜಿಸಲಿದೆ. ಈ ಸರಣಿಯಲ್ಲಿ ಪಾಕಿಸ್ತಾನ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ…

ಟ್ರೈ-ಸೀರೀಸ್ 2025 ವೇಳಾಪಟ್ಟಿ:

  • ನವೆಂಬರ್ 17: ಪಾಕಿಸ್ತಾನ್ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 18: ಶ್ರೀಲಂಕಾ vs ಝಿಂಬಾಬ್ವೆ (ರಾವಲ್ಪಿಂಡಿ)
  • ನವೆಂಬರ್ 22: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 23: ಪಾಕಿಸ್ತಾನ್ vs ಝಿಂಬಾಬ್ವೆ (ಲಾಹೋರ್)
  • ನವೆಂಬರ್ 25: ಶ್ರೀಲಂಕಾ v ಝಿಂಬಾಬ್ವೆ (ಲಾಹೋರ್)
  • ನವೆಂಬರ್ 27: ಪಾಕಿಸ್ತಾನ್ vs ಶ್ರೀಲಂಕಾ (ಲಾಹೋರ್)
  • ನವೆಂಬರ್ 29: ಫೈನಲ್ (ಲಾಹೋರ್)

Published On - 10:24 am, Thu, 13 November 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ