
ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಇಂದು (ನ.13) ನಡೆಯಬೇಕಿದ್ದ ಎರಡನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ನಂತರ ಶ್ರೀಲಂಕಾ ತಂಡದ 8 ಆಟಗಾರರು ತವರಿಗೆ ತೆರಳುವುದಾಗಿ ತಿಳಿಸಿದ್ದರು. ಇದೇ ಕಾರಣದಿಂದಾಗಿ ಗುರುವಾರ ರಾವಲ್ಪಿಂಡಿಯಲ್ಲಿ ನಡೆಯಬೇಕಿದ್ದ ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಶ್ರೀಲಂಕಾದ ಕೆಲ ಆಟಗಾರರು ತಮ್ಮ ಸುರಕ್ಷತಾ ಕಾಳಜಿಯನ್ನು ಉಲ್ಲೇಖಿಸಿ ತವರಿಗೆ ಮರಳಲು ಬಯಸಿದ್ದಾರೆ. ಇದಾಗ್ಯೂ ಈ ಸರಣಿಯನ್ನು ಮುಂದುವರೆಸುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಉಳಿದ ಪಂದ್ಯಗಳ ದಿನಾಂಕವನ್ನು ಮರುನಿಗದಿ ಮಾಡಿದೆ.
ಅದರಂತೆ ಇಂದು ನಡಯಬೇಕಿದ್ದ 2ನೇ ಏಕದಿನ ಪಂದ್ಯವನ್ನು ಶುಕ್ರವಾರ ಆಡಲಾಗುತ್ತದೆ ಎಂದು ತಿಳಿಸಲಾಗಿದೆ. ಹಾಗೆಯೇ ನವೆಂಬರ್ 15 ಕ್ಕೆ ನಿಗದಿಯಾಗಿದ್ದ ಮೂರನೇ ಮ್ಯಾಚ್ ಭಾನುವಾರ ನಡೆಯಲಿದೆ. ಈ ಮೂಲಕ ಸರಣಿಯನ್ನು ಪೂರ್ಣಗೊಳಿಸಲು ಪಿಸಿಬಿ ಪ್ಲ್ಯಾನ್ ರೂಪಿಸಿದೆ.
ಶ್ರೀಲಂಕಾ ಏಕದಿನ ತಂಡದಲ್ಲಿದ್ದ ಕೆಲ ಆಟಗಾರರು ಪಾಕ್ನಲ್ಲಿನ ಉಗ್ರರ ದಾಳಿಯಿಂದ ಭಯಭೀತರಾಗಿ ತವರಿಗೆ ಮರಳಲು ಮುಂದಾಗಿದ್ದಾರೆ. ಯಾವುದೇ ಆಟಗಾರನು ಅರ್ಧದಲ್ಲೇ ಸರಣಿ ತೊರೆದರೂ, ಬದಲಿ ಆಟಗಾರರನ್ನು ಕಳುಹಿಸಿ ಕೊಡುವುದಾಗಿ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಹೀಗಾಗಿಯೇ ಇಂದು (ನ.13) ನಡೆಯಬೇಕಿದ್ದ ಪಂದ್ಯವನ್ನು ಮರು ನಿಗದಿ ಮಾಡಲಾಗಿದೆ.
ಇದನ್ನೂ ಓದಿ: IND vs SA: ಆಯ್ಕೆ ಮಾಡಿ ನಿತೀಶ್ ಕುಮಾರ್ ರೆಡ್ಡಿಯನ್ನು ಕೈ ಬಿಟ್ಟಿದ್ದೇಕೆ?
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಬಳಿಕ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮೂರು ತಂಡಗಳ ನಡುವಣ ತ್ರಿಕೋನ ಟಿ20 ಸರಣಿಯನ್ನು ಆಯೋಜಿಸಲಿದೆ. ಈ ಸರಣಿಯಲ್ಲಿ ಪಾಕಿಸ್ತಾನ್, ಶ್ರೀಲಂಕಾ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿದೆ…
Published On - 10:24 am, Thu, 13 November 25