ಏಷ್ಯಾಕಪ್​ನಲ್ಲಿಂದು ಪಾಕಿಸ್ತಾನ-ಶ್ರೀಲಂಕಾ ಮುಖಾಮುಖಿ: ಗೆದ್ದ ತಂಡ ಫೈನಲ್​ಗೆ ಲಗ್ಗೆ

Pakistan vs Sri Lanka, Asia Cup Super 4: ಏಷ್ಯಾಕಪ್​ನಲ್ಲಿ ಇಂದು ಮಹತ್ವದ ಪಂದ್ಯ ನಡೆಯಲಿದೆ. ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ಮತ್ತು ದಸುನ್ ಶನಕಾ ನೇತೃತ್ವದ ಶ್ರೀಲಂಕಾ ತಂಡಗಳ ನಡುವೆ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದೆ. ಈ ಪಂದ್ಯ ಸೆಮಿ ಫೈನಲ್​ನಂತೆ ರೂಪುಗೊಂಡಿದ್ದು, ಗೆದ್ದ ತಂಡ ಬಹುತೇಕ ಫೈನಲ್​ಗೆ ಎಂಟ್ರಿ ಕೊಟ್ಟಂತೆ.

ಏಷ್ಯಾಕಪ್​ನಲ್ಲಿಂದು ಪಾಕಿಸ್ತಾನ-ಶ್ರೀಲಂಕಾ ಮುಖಾಮುಖಿ: ಗೆದ್ದ ತಂಡ ಫೈನಲ್​ಗೆ ಲಗ್ಗೆ
SL vs PAK
Follow us
Vinay Bhat
|

Updated on: Sep 14, 2023 | 6:47 AM

ಏಷ್ಯಾಕಪ್ 2023 ಟೂರ್ನಿ (Asia Cup 2023) ರೋಚಕ ಘಟ್ಟಕ್ಕೆ ತಲುಪಿದೆ. ಇಂದು ಕೊಲಂಕಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ಮತ್ತು ದಸುನ್ ಶನಕಾ ನೇತೃತ್ವದ ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದ್ದು, ಗೆದ್ದ ಟೀಮ್ ಬಹುತೇಕ ಫೈನಲ್​ಗೆ ಲಗ್ಗೆ ಇಟ್ಟಂತೆ. ಹೀಗಾಗಿ ಕೊಲಂಬೊದಲ್ಲಿ ಇಂದು ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ.

ಪಾಕಿಸ್ತಾನ ತಂಡ

ಪಾಕಿಸ್ತಾನ ತಂಡ ಭಾರತ ವಿರುದ್ಧ ನೀಡಿದ ಪ್ರದರ್ಶನ ನಾಯಕನಾಗಿ ತಲೆನೋವಾಗಿದೆ. ಬ್ಯಾಟಿಂಗ್ ಕೇವಲ 128 ರನ್​ಗಳಿಗೆ ಆಲೌಟ್ ಆಗಿ ಸಂಪೂರ್ಣ ವೈಫಲ್ಯ ಅನುಭವಿಸಿತ್ತು. ಉತ್ತಮ ಆರಂಭ ಪಡೆದುಕೊಳ್ಳುವ ಜೊತೆಗೆ ಮೊಹಮ್ಮದ್ ರಿಜ್ವಾನ್ ಪದೇ ಪದೇ ವೈಫಲ್ಯ ಅನುಭವಿಸಿತ್ತಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗುತ್ತಿದೆ. ಇದರ ನಡುವೆ ವೇಗಿ ನಸೀಂ ಶಾ ಇಂಜುರಿಯಿಂದಾಗಿ ಏಷ್ಯಾಕಪ್​ನಿಂದ ಹೊರಬಿದ್ದಿದ್ದಾರೆ. ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್ ಕೂಡ ಆಡುವುದು ಅನುಮಾನ ಎನ್ನಲಾಗುತ್ತಿದೆ.

ಶ್ರೀಲಂಕಾ ತಂಡ

ಸಿಂಹಳೀಯರು ಭಾರತ ವಿರುದ್ಧ ಸೋತಿದ್ದರೂ ಬಲಿಷ್ಠವಾಗಿದೆ. ತಂಡ ಉತ್ತಮ ಆರಂಭ ಪಡೆದುಕೊಳ್ಳುವ ಜೊತೆಗೆ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಉತ್ತಮ ಆಟ ಪ್ರದರ್ಶಿಸಿದರೆ ಉತ್ತಮ ಮೊತ್ತ ಕಲೆಹಾಕುವುದು ಖಚಿತ. ಧನಂಜಯ ಡಿ ಸಿಲ್ವ ಪ್ರತಿ ಪಂದ್ಯದಲ್ಲಿ ತಮ್ಮ ಕೈಲಾದಷ್ಟು ಪ್ರಯತ್ನ ಪಡುತ್ತಿದ್ದಾರೆ. ದುನಿತ್ ವೆಲ್ಲಲಾಗೆ ಕೂಡ ಬ್ಯಾಟಿಂಗ್​ನಲ್ಲಿ ಮೋಡಿ ಮಾಡಿದ್ದಾರೆ. ಲಂಕಾದ ಪ್ರಮುಖ ಅಸ್ತ್ರ ಬೌಲಿಂಗ್. ವೆಲ್ಲಲಾಗೆ ಭಾರತ ವಿರುದ್ಧ 5 ವಿಕೆಟ್ ಕಿತ್ತು ಮಿಂಚಿದ್ದರು. ಅಸಲಂಕ, ಮತೀಶ ಪತಿರಣ, ತೀಕ್ಷಣ ಕೂಡ ಮಾರಕ ಬೌಲಿಂಗ್ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
ಭಾರತದ ವಿರುದ್ಧ ಸೋಲು: ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್​ನಲ್ಲಿ 5 ಬದಲಾವಣೆ
Image
9 ಸಿಕ್ಸ್​, 15 ಫೋರ್: ಸ್ಪೋಟಕ ಶತಕ ಸಿಡಿಸಿ ದಾಖಲೆ ಬರೆದ ಬೆನ್ ಸ್ಟೋಕ್ಸ್
Image
ಅಚ್ಚರಿ ಎನಿಸಿದರೂ ಸತ್ಯ..ಭಾರತ-ಪಾಕಿಸ್ತಾನ್ ಫೈನಲ್​ನಲ್ಲಿ ಮುಖಾಮುಖಿಯಾಗಿಲ್ಲ
Image
ಗೆದ್ದ ಟೀಮ್ ಇಂಡಿಯಾ: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

World Cup 2023: ವಿಶ್ವಕಪ್​ಗೆ ಅಫ್ಘಾನಿಸ್ತಾನ್ ತಂಡ ಪ್ರಕಟ: ನವೀನ್ ಉಲ್ ಹಕ್ ಆಯ್ಕೆ

ಪ್ರೇಮದಾಸ ಸ್ಟೇಡಿಯಂ ಪಿಚ್:

ಪಾಕ್-ಲಂಕಾ ಪಂದ್ಯ ನಡೆಯಲಿರುವ ಆರ್. ಪ್ರೇಮದಾಸ ಸ್ಟೇಡಿಯಂನ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಇದು ಅನೇಕ ಬಾರಿ ಸಾಭೀತಾಗಿದೆ. ಪಂದ್ಯ ಸಾಗಿದಂತೆ ಟ್ರ್ಯಾಕ್ ನಿಧಾನವಾಗುತ್ತದೆ, ಆಗ ಬ್ಯಾಟರ್‌ಗಳಿಗೆ ರನ್ ಗಳಿಸಲು ಕಷ್ಟವಾಗುತ್ತದೆ. ಮತ್ತೊಂದೆಡೆ, ವೇಗದ ಬೌಲರ್‌ಗಳು ಕೂಡ ಈ ಮೈದಾನದಲ್ಲಿ ಯಶಸ್ಸು ಸಾಧಿಸುತ್ತಾರೆ. ಪಂದ್ಯದ ಮಧ್ಯದಲ್ಲಿ ಬ್ಯಾಟರ್‌ಗಳಿಗೆ ಈ ಪಿಚ್ ಹೆಚ್ಚು ಸಹಾಯ ಮಾಡಲಿದೆ. ಈ ಮೈದಾನದಲ್ಲಿ ಶ್ರೀಲಂಕಾ ಉತ್ತಮ ದಾಖಲೆಯನ್ನು ಹೊಂದಿದೆ.

ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಖರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಂ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

ಶ್ರೀಲಂಕಾ ತಂಡ: ದಸುನ್ ಶನಕಾ (ನಾಯಕ), ಪಾತುಮ್ ನಿಸ್ಸಾನಕ, ದಿಮುತ್ ಕರುಣಾರತ್ನ, ಕುಸಲ್ ಜನಿತ್ ಪೆರೇರಾ, ಕುಸಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮತೀಶ ಪತಿರಣ, ಬಿ ಕಸುನ್ ರಜಿತ, ಬಿ. ಫೆರ್ನಾಂಡೋ, ಪ್ರಮೋದ್ ಮದುಶನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು