Pakistan vs West Indies T20I: ವೆಸ್ಟ್​ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಪಾಕಿಸ್ತಾನ

Pakistan vs West Indies T20I: ವೆಸ್ಟ್​ ಇಂಡೀಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ಬರೆದ ಪಾಕಿಸ್ತಾನ
pakistan vs west indies t20

Pakistan World Record: ವೆಸ್ಟ್​ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಪಾಕಿಸ್ತಾನ 63 ರನ್​ಗಳ ಅಮೋಘ ಗೆಲುವು ಸಾಧಿಸಿದೆ. ಈ ಜಯದ ಮೂಲಕ 2021ರ ಕ್ಯಾಲೆಂಡರ್ ವರ್ಷದಲ್ಲಿ 17ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದ ಸಾಧನೆ ಮಾಡಿದೆ. ಈವರೆಗೆ ಬೇರೆ ಯಾವುದೇ ತಂಡ ಈ ಸಾಧನೆ ಮಾಡಿರಲಿಲ್ಲ.

TV9kannada Web Team

| Edited By: Vinay Bhat

Dec 14, 2021 | 10:31 AM

ಪಾಕಿಸ್ತಾನ ಪ್ರವಾಸ ಬೆಳೆಸಿರುವ ವೆಸ್ಟ್ ಇಂಡೀಸ್ (Pakistan vs West Indies) ಕ್ರಿಕೆಟ್ ತಂಡ ತನ್ನ ಮೊದಲ ಪಂದ್ಯದಲ್ಲೇ ಸೋತಿದೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಪಾಕ್ 63 ರನ್​ಗಳ ಅಮೋಘ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಇದರ ಜೊತೆಗೆ ಪಾಕಿಸ್ತಾನ (Pakistan Cricket Team) ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆಯೊಂದನ್ನು ಬರೆದಿದೆ. ಈ ಗೆಲುವಿನ ಮೂಲಕ 2021ರ ಕ್ಯಾಲೆಂಡರ್ ವರ್ಷದಲ್ಲಿ 17ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸಿದ ಸಾಧನೆ ಮಾಡಿದೆ. ಈವರೆಗೆ ಬೇರೆ ಯಾವುದೇ ತಂಡ ಈ ಸಾಧನೆ ಮಾಡಿರಲಿಲ್ಲ. ಇದರ ಹಿಂದಿನ ದಾಖಲೆ ಕೂಡ ಬಾಬರ್ ಅಜಾಮ್ (Babar Azam) ಪಡೆಯದ್ದೇ ಆಗಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದರ ಮೂಲಕ ಎದುರಾಳಿ ಪಾಕಿಸ್ತಾನ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನವನ್ನು ನೀಡಿತು. ಅದರಂತೆ ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 200 ರನ್ ಕಲೆ ಹಾಕುವುದರ ಮೂಲಕ ಕೆರಿಬಿಯನ್ನರಿಗೆ 201 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಮ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿದರು. ತಂಡದ ನಾಯಕ ಬಾಬರ್ ಅಜಮ್ ರನ್ ಖಾತೆ ತೆರೆಯದೇ ಶೂನ್ಯಕ್ಕೆ ಔಟ್ ಆಗುವ ಮೂಲಕ ಪೆವಿಲಿಯನ್ ಸೇರಿಕೊಂಡರೆ, ಮೊಹಮ್ಮದ್ ರಿಜ್ವಾನ್ 78 ರನ್ ಕಲೆಹಾಕಿದರು.

ಹೀಗೆ ಪಾಕ್ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಮೊಹಮ್ಮದ್ ರಿಜ್ವಾನ್ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ನಂತರ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಫಖರ್ ಜಮಾನ್ 10 ರನ್ ಗಳಿಸಿ ಔಟ್ ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಬಂದ ಹೈದರ್ ಅಲಿ 39 ಎಸೆತಗಳಿಗೆ 68 ರನ್ ಚಚ್ಚಿದರು. ನಂತರದ ಬ್ಯಾಟ್​ಗಳ ಪೈಕಿ ಯಾರು ದೊಡ್ಡ ಮೊತ್ತ ಕಲೆಹಾಕಲಿಲ್ಲ. ಆದರೆ, ಅಂತಿಮ ಹಂತದಲ್ಲಿ ಅಬ್ಬರಿಸಿದ ಮೊಹಮ್ಮದ್ ನವಾಜ್ 10 ಎಸೆತಗಳಲ್ಲಿ 30 ರನ್ ಬಾರಿಸಿ ತಂಡದ ಮೊತ್ತವನ್ನು 200ಕ್ಕೆ ತಂದಿಟ್ಟರು. ವಿಂಡೀಸ್ ಪರ ರೊಮಾರಿಯೊ ಶೆಫರ್ಡ್ 2 ವಿಕೆಟ್ ಹಾಗೂ ಅಕೀಲ್ ಹುಸೈನ್, ಒಶಾನೆ ಥಾಮಸ್, ಡೊಮಿನಿಕ್ ಡ್ರೇಕ್ಸ್ ಮತ್ತು ಓಡಿಯನ್ ಸ್ಮಿತ್ ತಲಾ 1 ವಿಕೆಟ್ ಪಡೆದರು.

ಇನ್ನು ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡದ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಶೈ ಹೋಪ್ 31 ರನ್ ಗಳಿಸಿದ್ದು ಬಿಟ್ಟರೆ ತಂಡದ ಬೇರೆ ಯಾವುದೇ ಆಟಗಾರ ಕೂಡ 30 ರನ್ ಗಡಿ ದಾಟಲೇ ಇಲ್ಲ. ವೆಸ್ಟ್ ಇಂಡೀಸ್ ತಂಡದ ಇತರೆ ಆಟಗಾರರಾದ ರೋವ್‌ಮ್ಯಾನ್ ಪೊವೆಲ್ 23, ರೊಮಾರಿಯೊ ಶೆಫರ್ಡ್ 21, ಓಡಿಯನ್ ಸ್ಮಿತ್ 24 ಮತ್ತು ನಾಯಕ ನಿಕೋಲಸ್ ಪೂರನ್ 18 ಗಳಿಸಿದ್ದನ್ನು ಹೊರತುಪಡಿಸಿದರೆ ತಂಡದ ಇನ್ಯಾವುದೇ ಆಟಗಾರ ಕೂಡ ಎರಡಂಕಿ ಮುಟ್ಟುವ ಸಾಹಸಕ್ಕೆ ಕೈ ಹಾಕಲಿಲ್ಲ.

ಈ ಮೂಲಕ 19 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡ ವೆಸ್ಟ್ ಇಂಡೀಸ್ 137 ರನ್ ಕಲೆಹಾಕಿ 63 ರನ್‌ಗಳ ಅಂತರದಲ್ಲಿ ಹೀನಾಯವಾಗಿ ಸೋತಿತು. ಈ ಮೂಲಕ ಪಾಕಿಸ್ತಾನ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿತು. ಪಾಕ್ ಪರ ಮೊಹಮ್ಮದ್ ವಾಸಿಂ 4 ವಿಕೆಟ್, ಶದಾಬ್ ಖಾನ್ 3 ವಿಕೆಟ್ ಹಾಗೂ ಶಾಹೀನ್ ಅಫ್ರಿದಿ, ಮೊಹಮ್ಮದ್ ನವಾಜ್ ಹಾಗೂ ಹ್ಯಾರಿಸ್ ರೌಫ್ ತಲಾ 1 ವಿಕೆಟ್ ಪಡೆದರು. ಹೈದರ್ ಅಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Virat Kohli: ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ: ಭಾರತಕ್ಕೆ ಮತ್ತೊಂದು ಬಿಗ್ ಶಾಕ್

Venkatesh Iyer: ಹಾರ್ದಿಕ್ ಪಾಂಡ್ಯ ಜಾಗಕ್ಕೆ ಈಗಾಗಲೇ ಹೊಸ ಆಟಗಾರನ ಎಂಟ್ರಿ ಆಗಿದೆಯಂತೆ

(Pakistan vs West Indies Pakistan to go past their own record of 17 wins in a calendar year World Record broken)

Follow us on

Related Stories

Most Read Stories

Click on your DTH Provider to Add TV9 Kannada