AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲು ಹೀನಾಯ ಸೋಲು… ಪಾಕಿಸ್ತಾನ್ ವೈಟ್ ವಾಶ್ಡ್​..!

Bangladesh vs Pakistan: ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿ ಮುಗಿದಿದೆ. ಮೊದಲ ಪಂದ್ಯದಲ್ಲಿ ಪಾಕ್ ಪಡೆಯನ್ನು 104 ರನ್​​ಗಳಿಂದ ಸೋಲಿಸಿದ್ದ ಬಾಂಗ್ಲಾದೇಶ್ ತಂಡ ಇದೀಗ ದ್ವಿತೀಯ ಟೆಸ್ಟ್​ನಲ್ಲಿ 78 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪಾಕ್ ವಿರುದ್ಧ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಸೋಲು ಹೀನಾಯ ಸೋಲು... ಪಾಕಿಸ್ತಾನ್ ವೈಟ್ ವಾಶ್ಡ್​..!
Pakistan
ಝಾಹಿರ್ ಯೂಸುಫ್
|

Updated on: May 20, 2026 | 12:38 PM

Share

ಪಾಕಿಸ್ತಾನ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಬಾಂಗ್ಲಾ ಪಡೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಸಿಲ್ಹೆಟ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಮೊದಲ ಇನಿಂಗ್ಸ್​ನಲ್ಲಿ 278 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಪಾಕಿಸ್ತಾನ್ 232 ರನ್​ಗಳಿಗೆ ಆಲೌಟ್ ಆಗಿದ್ದರು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಬಾಂಗ್ಲಾದೇಶ್ 390 ರನ್​ ಗಳಿಸಿತು. ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ 437 ರನ್​ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು 358 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ತಂಡವು ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಬರೋಬ್ಬರಿ 78 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಐತಿಹಾಸಿಕ ಸಾಧನೆ:

  • ಇದು ಬಾಂಗ್ಲಾದೇಶ್ ತಂಡವು ಪಾಕಿಸ್ತಾನ್ ವಿರುದ್ಧ ಸಾಧಿಸಿದ ಸತತ ಎರಡನೇ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಆಗಿದೆ. ಇದಕ್ಕೂ ಮುನ್ನ 2024ರ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದ ನೆಲದಲ್ಲೇ ಬಾಂಗ್ಲಾದೇಶ 2-0 ಸರಣಿ ಜಯಿಸಿ ಇತಿಹಾಸ ನಿರ್ಮಿಸಿತ್ತು. ಈಗ ತನ್ನದೇ ತಾಯ್ನಾಡಿನಲ್ಲಿ ಆ ಪ್ರಾಬಲ್ಯವನ್ನು ಮುಂದುವರಿಸಿದೆ.
  • ಹಾಗೆಯೇ ಬಾಂಗ್ಲಾದೇಶ್ ತಂಡವು ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಎರಡು ಸರಣಿಗಳಲ್ಲಿ ಸೋಲಿಸಿದೆ. ಅಂದರೆ ಈ ಟೆಸ್ಟ್​ ಸರಣಿಗೂ ಮುನ್ನ  ಪಾಕಿಸ್ತಾನ್ ವಿರುದ್ಧ 2-1 ಅಂತರದಿಂದ ಏಕದಿನ  ಸರಣಿ ಗೆದ್ದುಕೊಂಡಿತ್ತು. ಇದೀಗ 2-0 ಅಂತರದಿಂದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC)

ಪಾಕಿಸ್ತಾನ್ ವಿರುದ್ಧದ ಈ ಭರ್ಜರಿ ಗೆಲುವಿನೊಂದಿಗೆ ಬಾಂಗ್ಲಾದೇ್ಶ​ ತಂಡವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಪಟ್ಟಿಯಲ್ಲಿ ಶೇಕಡಾ 58.33 ರಷ್ಟು ಗೆಲುವಿನ ಸರಾಸರಿಯೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!

ಮತ್ತೊಂದೆಡೆ, ಈ ಸರಣಿ ಸೋಲಿನೊಂದಿಗೆ ಪಾಕಿಸ್ತಾನ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿರುವ ಪಾಕಿಸ್ತಾನ್ ತಂಡ ಈವರೆಗೆ ಪಡೆದಿರುವುದು ಕೇವಲ 4 ಅಂಕಗಳನ್ನು ಮಾತ್ರ. ಹೀಗಾಗಿ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಬೇಕಿದ್ದರೆ ಇನ್ನುಳಿದ ಎಲ್ಲಾ ಮ್ಯಾಚ್​ಗಳಲ್ಲೂ ಜಯ ಸಾಧಿಸಬೇಕಾಗುತ್ತದೆ.

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ