
ಪಾಕಿಸ್ತಾನ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಬಾಂಗ್ಲಾ ಪಡೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಸಿಲ್ಹೆಟ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಮೊದಲ ಇನಿಂಗ್ಸ್ನಲ್ಲಿ 278 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಪಾಕಿಸ್ತಾನ್ 232 ರನ್ಗಳಿಗೆ ಆಲೌಟ್ ಆಗಿದ್ದರು.
ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಬಾಂಗ್ಲಾದೇಶ್ 390 ರನ್ ಗಳಿಸಿತು. ಅದರಂತೆ ದ್ವಿತೀಯ ಇನಿಂಗ್ಸ್ನಲ್ಲಿ 437 ರನ್ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು 358 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ತಂಡವು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 78 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಪಾಕಿಸ್ತಾನ್ ವಿರುದ್ಧದ ಈ ಭರ್ಜರಿ ಗೆಲುವಿನೊಂದಿಗೆ ಬಾಂಗ್ಲಾದೇ್ಶ ತಂಡವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಪಟ್ಟಿಯಲ್ಲಿ ಶೇಕಡಾ 58.33 ರಷ್ಟು ಗೆಲುವಿನ ಸರಾಸರಿಯೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ.
ಇದನ್ನೂ ಓದಿ: ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!
ಮತ್ತೊಂದೆಡೆ, ಈ ಸರಣಿ ಸೋಲಿನೊಂದಿಗೆ ಪಾಕಿಸ್ತಾನ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿರುವ ಪಾಕಿಸ್ತಾನ್ ತಂಡ ಈವರೆಗೆ ಪಡೆದಿರುವುದು ಕೇವಲ 4 ಅಂಕಗಳನ್ನು ಮಾತ್ರ. ಹೀಗಾಗಿ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರಬೇಕಿದ್ದರೆ ಇನ್ನುಳಿದ ಎಲ್ಲಾ ಮ್ಯಾಚ್ಗಳಲ್ಲೂ ಜಯ ಸಾಧಿಸಬೇಕಾಗುತ್ತದೆ.