AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ನಿಲುವು ಸ್ಪಷ್ಟ, ಭಾರತದ ವಿರುದ್ಧ ಆಡುವುದಿಲ್ಲ: ಪಾಕ್ ಪ್ರಧಾನಿ

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್ ಫೆಬ್ರವರಿ 7 ರಿಂದ ಶುರುವಾಗಲಿದೆ. 20 ತಂಡಗಳ ನಡುವಣ ಈ ಕದನದಲ್ಲಿ ಭಾರತ ಮತ್ತು ಪಾಕಿಸ್ತಾನ್ ಒಂದೇ ಗ್ರೂಪ್​ನಲ್ಲಿದೆ. ಆದರೆ ಮೊದಲ ಸುತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ನಡೆಯುವುದು ಅನುಮಾನ. ಏಕೆಂದರೆ ಟೀಮ್ ಇಂಡಿಯಾ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಪ್ರಧಾನಿಯೇ ಘೋಷಿಸಿದ್ದಾರೆ.

ನಮ್ಮ ನಿಲುವು ಸ್ಪಷ್ಟ, ಭಾರತದ ವಿರುದ್ಧ ಆಡುವುದಿಲ್ಲ: ಪಾಕ್ ಪ್ರಧಾನಿ
Pak Pm Shehbaz Sharif
ಝಾಹಿರ್ ಯೂಸುಫ್
|

Updated on:Feb 05, 2026 | 9:18 AM

Share

2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ್ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಫೆಬ್ರವರಿ 15 ರಂದು ಇಂಡೊ–ಪಾಕ್ ನಡುವಣ ಕ್ರಿಕೆಟ್ ಪಂದ್ಯ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ.

ಫೆಬ್ರವರಿ 4, 2026 ರಂದು ಫೆಡರಲ್ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಝ್ ಷರೀಫ್, ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣಗಳನ್ನುಸಹ ಸ್ಪಷ್ಟಪಡಿಸಿದ್ದಾರೆ. ಆ ಕಾರಣಗಳೇನು ಎಂದು ನೋಡುವುದಾದರೆ…

  • ಬಾಂಗ್ಲಾದೇಶ್​ಗೆ ಬೆಂಬಲ: ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಮುಖ್ಯ ಕಾರಣ ಬಾಂಗ್ಲಾದೇಶ್​ಗೆ ಬೆಂಬಲ. ಅಂದರೆ ಐಸಿಸಿ ಟೂರ್ನಿಯಿಂದ ಬಾಂಗ್ಲಾದೇಶ್ ತಂಡವನ್ನು ಹೊರಗಿಟ್ಟಿರುವ ಕ್ರಮವನ್ನು ಖಂಡಿಸಿ ಪಾಕಿಸ್ತಾನ್ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದೆ.
  • ಬಿಸಿಬಿ ಜೊತೆ ಪಿಸಿಬಿ: ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಗಿಡಬಾರದು, ಅವರಿಗೆ ತಟಸ್ಥ ಸ್ಥಳದಲ್ಲಿ ಪಂದ್ಯವಾಡಲು ಅವಕಾಶ ನೀಡಬೇಕೆಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಗ್ರಹಿಸಿತ್ತು. ಇದಾಗ್ಯೂ ಐಸಿಸಿ ಅವಕಾಶ ನೀಡಿರಲಿಲ್ಲ.  ಇದೀಗ ಬಾಂಗ್ಲಾದೇಶ್ ನಿಲುವಿಗೆ ಬೆಂಬಲ ಸೂಚಿಸಲು ಪಾಕಿಸ್ತಾನ ಈ ನಿರ್ಧಾರ ಕೈಗೊಂಡಿದೆ.
  • ಕ್ರೀಡೆಯಲ್ಲಿ ರಾಜಕೀಯ ಬೇಡ: ಕ್ರೀಡಾ ಕ್ಷೇತ್ರದಲ್ಲಿ ರಾಜಕೀಯ ಇರಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಎಂದು ಶೆಹಬಾಝ್ ಷರೀಫ್ ತಿಳಿಸಿದ್ದಾರೆ.

“ಟಿ20 ವಿಶ್ವಕಪ್ ಬಗ್ಗೆ ನಾವು ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದೇವೆ. ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ. ಏಕೆಂದರೆ ಇದು ಕ್ರೀಡಾ ಕ್ಷೇತ್ರ, ರಾಜಕೀಯವಲ್ಲ. ಕ್ರೀಡಾ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಇರಬಾರದು. ನಾವು ಬಹಳ ಪರಿಗಣಿತ ನಿಲುವನ್ನು ತೆಗೆದುಕೊಂಡಿದ್ದೇವೆ. ಅಲ್ಲದೆ ನಾವು ಬಾಂಗ್ಲಾದೇಶದ ಪರವಾಗಿ ನಿಲ್ಲಬೇಕು. ಇದು ತುಂಬಾ ಸೂಕ್ತವಾದ ನಿರ್ಧಾರ ಎಂದು ನಾನು ಭಾವಿಸುತ್ತೇನೆ” ಎಂದು ಬುಧವಾರ ಪಾಕಿಸ್ತಾನದಲ್ಲಿ ನಡೆದ ಸಂಪುಟ ಸಭೆಯಲ್ಲಿ ಶೆಹಬಾಝ್ ಹೇಳಿದ್ದಾರೆ.

ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಕುರಿತು ಯಾವುದೇ ಔಪಚಾರಿಕ ಮೇಲ್ ಕಳುಹಿಸಿಲ್ಲ. ಆದರೆ ಇದೀಗ ಪಾಕಿಸ್ತಾನ್ ಪ್ರಧಾನಿಯೇ ಪಂದ್ಯವನ್ನು ಬಹಿಷ್ಕರಿಸುವುದನ್ನು ಘೋಷಿಸಿದ್ದಾರೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ ಪಂದ್ಯ ಜರುಗುವುದಿಲ್ಲ ಎಂಬುದು ದೃಢಪಟ್ಟಿದೆ.

ಇದನ್ನೂ ಓದಿ: ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್​ ಲೀಗ್​ಗೆ ಕೈಕೊಟ್ಟ ಮ್ಯಾಕ್ಸ್​ವೆಲ್

ಪಂದ್ಯ ಬಹಿಷ್ಕರಿಸಿದರೆ ಆಗುವ ಪರಿಣಾಮಗಳು:

  • ಅಂಕಗಳ ನಷ್ಟ: ಪಾಕಿಸ್ತಾನ್ ತಂಡ ಪಂದ್ಯಕ್ಕೆ ಹಾಜರಾಗದಿದ್ದರೆ, ಭಾರತಕ್ಕೆ 2 ಅಂಕಗಳನ್ನು (Walkover) ನೀಡಲಾಗುತ್ತದೆ.
  • ಐಸಿಸಿ ಎಚ್ಚರಿಕೆ: ಈ “ಆಯ್ದ ಭಾಗವಹಿಸುವಿಕೆ” ಕ್ರೀಡಾ ಸ್ಫೂರ್ತಿಗೆ ವಿರುದ್ಧವಾಗಿದೆ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಸಮಾಧಾನ ವ್ಯಕ್ತಪಡಿಸಿದೆ. ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಆರ್ಥಿಕ ದಂಡ ವಿಧಿಸುವ ಸಾಧ್ಯತೆಯಿದೆ.

Published On - 9:17 am, Thu, 5 February 26

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್