
2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ್ ಬಹಿಷ್ಕರಿಸಲಿದೆ ಎಂದು ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಅಧಿಕೃತವಾಗಿ ಘೋಷಿಸಿದ್ದಾರೆ. ಇದರೊಂದಿಗೆ ಫೆಬ್ರವರಿ 15 ರಂದು ಇಂಡೊ–ಪಾಕ್ ನಡುವಣ ಕ್ರಿಕೆಟ್ ಪಂದ್ಯ ನಡೆಯುವುದಿಲ್ಲ ಎಂಬುದು ಖಚಿತವಾಗಿದೆ.
ಫೆಬ್ರವರಿ 4, 2026 ರಂದು ಫೆಡರಲ್ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಶೆಹಬಾಝ್ ಷರೀಫ್, ಈ ನಿರ್ಧಾರದ ಹಿಂದಿನ ಪ್ರಮುಖ ಕಾರಣಗಳನ್ನುಸಹ ಸ್ಪಷ್ಟಪಡಿಸಿದ್ದಾರೆ. ಆ ಕಾರಣಗಳೇನು ಎಂದು ನೋಡುವುದಾದರೆ…
“ಟಿ20 ವಿಶ್ವಕಪ್ ಬಗ್ಗೆ ನಾವು ಸ್ಪಷ್ಟವಾದ ನಿಲುವನ್ನು ತೆಗೆದುಕೊಂಡಿದ್ದೇವೆ. ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ. ಏಕೆಂದರೆ ಇದು ಕ್ರೀಡಾ ಕ್ಷೇತ್ರ, ರಾಜಕೀಯವಲ್ಲ. ಕ್ರೀಡಾ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಇರಬಾರದು. ನಾವು ಬಹಳ ಪರಿಗಣಿತ ನಿಲುವನ್ನು ತೆಗೆದುಕೊಂಡಿದ್ದೇವೆ. ಅಲ್ಲದೆ ನಾವು ಬಾಂಗ್ಲಾದೇಶದ ಪರವಾಗಿ ನಿಲ್ಲಬೇಕು. ಇದು ತುಂಬಾ ಸೂಕ್ತವಾದ ನಿರ್ಧಾರ ಎಂದು ನಾನು ಭಾವಿಸುತ್ತೇನೆ” ಎಂದು ಬುಧವಾರ ಪಾಕಿಸ್ತಾನದಲ್ಲಿ ನಡೆದ ಸಂಪುಟ ಸಭೆಯಲ್ಲಿ ಶೆಹಬಾಝ್ ಹೇಳಿದ್ದಾರೆ.
ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವ ಕುರಿತು ಯಾವುದೇ ಔಪಚಾರಿಕ ಮೇಲ್ ಕಳುಹಿಸಿಲ್ಲ. ಆದರೆ ಇದೀಗ ಪಾಕಿಸ್ತಾನ್ ಪ್ರಧಾನಿಯೇ ಪಂದ್ಯವನ್ನು ಬಹಿಷ್ಕರಿಸುವುದನ್ನು ಘೋಷಿಸಿದ್ದಾರೆ. ಹೀಗಾಗಿ ಭಾರತ ಮತ್ತು ಪಾಕಿಸ್ತಾನ್ ನಡುವಣ ಟಿ20 ವಿಶ್ವಕಪ್ ಪಂದ್ಯ ಜರುಗುವುದಿಲ್ಲ ಎಂಬುದು ದೃಢಪಟ್ಟಿದೆ.
ಇದನ್ನೂ ಓದಿ: ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್ ಲೀಗ್ಗೆ ಕೈಕೊಟ್ಟ ಮ್ಯಾಕ್ಸ್ವೆಲ್
Published On - 9:17 am, Thu, 5 February 26