PAK vs ENG: ಇಂಗ್ಲೆಂಡ್ ತಂಡವನ್ನು ಮಕಾಡೆ ಮಲಗಿಸಿ ಸರಣಿ ಗೆದ್ದ ಪಾಕಿಸ್ತಾನ್

Pakistan vs England: ಪಾಕಿಸ್ತಾನ್ ವಿರುದದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ ಇನಿಂಗ್ಸ್ ಹಾಗೂ 47 ರನ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಟೆಸ್ಟ್​​ನಲ್ಲಿ 152 ರನ್​ಗಳ ಭರ್ಜರಿ ಜಯ ಸಾಧಿಸಿದ್ದ ಪಾಕಿಸ್ತಾನ್ ಇದೀಗ ಮೂರನೇ ಪಂದ್ಯದಲ್ಲೂ ಆಂಗ್ಲರನ್ನು ಬಗ್ಗು ಬಡಿದಿದೆ.

PAK vs ENG: ಇಂಗ್ಲೆಂಡ್ ತಂಡವನ್ನು ಮಕಾಡೆ ಮಲಗಿಸಿ ಸರಣಿ ಗೆದ್ದ ಪಾಕಿಸ್ತಾನ್
PAK vs ENG
Follow us
ಝಾಹಿರ್ ಯೂಸುಫ್
|

Updated on: Oct 26, 2024 | 12:28 PM

ರಾವಲ್ಪಿಂಡಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಪಾಕಿಸ್ತಾನ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಶಾನ್ ಮಸೂದ್ ನೇತೃತ್ವದ ಪಾಕ್ ಪಡೆ 8 ವರ್ಷಗಳ ಬಳಿಕ ಆಂಗ್ಲರ ವಿರುದ್ಧ ಸರಣಿ ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 267 ರನ್​ಗಳಿಸಿ ಆಲೌಟ್ ಆಯಿತು. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಪಾಕಿಸ್ತಾನ್ ಪರ ಸೌದ್ ಶಕೀಲ್ (134) ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನಿಂದ ಪಾಕ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 344 ರನ್​ ಕಲೆಹಾಕಿತು.

77 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವನ್ನು ಪಾಕ್ ಸ್ಪಿನ್ನರ್​ಗಳಾದ ನೊಮಾನ್ ಅಲಿ ಹಾಗೂ ಸಾಜಿದ್ ಖಾನ್ ಅಲ್ಪ ಮೊತ್ತಕ್ಕೆ ಕಟ್ಟಿ ಹಾಕಿದರು. ಪರಿಣಾಮ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 112 ರನ್​ಗಳು.

ಪಾಕ್ ಪರ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಪಡೆದಿದ್ದ ಸಾಜಿದ್ ಖಾನ್ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದರು. ಹಾಗೆಯೇ ಪ್ರಥಮ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿದ್ದ ನೊಮಾನ್ ಅಲಿ 2ನೇ ಇನಿಂಗ್ಸ್​ನಲ್ಲಿ 6 ವಿಕೆಟ್ ಉರುಳಿಸಿದರು.

ಕೇವಲ 36 ರನ್​ಗಳ ಗುರಿ:

ಮೊದಲ ಇನಿಂಗ್ಸ್​ನಲ್ಲಿ 77 ರನ್​ಗಳ ಮುನ್ನಡೆ ಪಡೆದಿದ್ದ ಪಾಕಿಸ್ತಾನ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 36 ರನ್​ಗಳ ಗುರಿ ಪಡೆಯಿತು. ಈ ಗುರಿಯನ್ನು ಕೇವಲ 3.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಪಾಕಿಸ್ತಾನ್ ತಂಡವು 9 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ.

ಪಾಕಿಸ್ತಾನ್ ಪ್ಲೇಯಿಂಗ್ 11: ಸೈಮ್ ಅಯೂಬ್ , ಅಬ್ದುಲ್ಲಾ ಶಫೀಕ್ , ಶಾನ್ ಮಸೂದ್ (ನಾಯಕ) , ಕಮ್ರಾನ್ ಗುಲಾಮ್ , ಸೌದ್ ಶಕೀಲ್ , ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್) , ಅಘಾ ಸಲ್ಮಾನ್ , ಅಮೀರ್ ಜಮಾಲ್ , ನೊಮಾನ್ ಅಲಿ , ಸಾಜಿದ್ ಖಾನ್ , ಝಾಹಿದ್ ಮಹಮೂದ್.

ಇದನ್ನೂ ಓದಿ: ಝಿಂಬಾಬ್ವೆ ಅಬ್ಬರಕ್ಕೆ ಟೀಮ್ ಇಂಡಿಯಾದ ವಿಶ್ವ ದಾಖಲೆ ಉಡೀಸ್

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ , ಬೆನ್ ಡಕೆಟ್ , ಒಲೀ ಪೋಪ್ , ಜೋ ರೂಟ್ , ಹ್ಯಾರಿ ಬ್ರೂಕ್ , ಬೆನ್ ಸ್ಟೋಕ್ಸ್ (ನಾಯಕ) , ಜಾಮಿ ಸ್ಮಿತ್ (ವಿಕೆಟ್ ಕೀಪರ್) , ಗಸ್ ಅಟ್ಕಿನ್ಸನ್ , ರೆಹಾನ್ ಅಹ್ಮದ್ , ಜ್ಯಾಕ್ ಲೀಚ್ , ಶೋಯೆಬ್ ಬಶೀರ್

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ