ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ

India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ.

ಟೀಮ್ ಇಂಡಿಯಾವನ್ನು ಸೋಲಿಸಿದರೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ
Team India-sehar shinwari
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 18, 2023 | 6:37 PM

ಏಕದಿನ ವಿಶ್ವಕಪ್​ನ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು ಭಾರತವನ್ನು ಸೋಲಿಸಿದರೆ ಬಾಂಗ್ಲಾ ಹುಡುಗನೊಂದಿಗೆ ಡೇಟಿಂಗ್ ಮಾಡುವುದಾಗಿ ಪಾಕ್ ನಟಿ ಸೆಹರ್ ಶಿನ್ವಾರಿ ಘೋಷಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ಸೆಹರ್ ಶಿನ್ವಾರಿ, ಇನ್ಶಾ ಅಲ್ಲಾಹ್…ನನ್ನ ಬಂಗಾಳಿ ಬಂಧು (ಬಾಂಗ್ಲಾದೇಶ್ ತಂಡ) ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ. ಬಾಂಗ್ಲಾ ತಂಡವು ಭಾರತವನ್ನು ಸೋಲಿಸಿದರೆ, ನಾನು ಢಾಕಾಗೆ ಹೋಗುತ್ತೇನೆ. ಅಲ್ಲದೆ ಬಾಂಗ್ಲಾ ಹುಡುಗನೊಂದಿಗೆ ಮೀನು ಭೋಜನವನ್ನು ಮಾಡುತ್ತೇನೆ” ಎಂದಿದ್ದಾರೆ.

ಈ ಮೂಲಕ ಸೆಹರ್ ಶಿನ್ವಾರಿ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ತಂಡವ ಗೆಲುವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಇಂತಹದೊಂದು ಡೇಟಿಂಗ್ ಆಫರ್ ನೀಡಲು ಮುಖ್ಯ ಕಾರಣ ಪಾಕಿಸ್ತಾನ್ ತಂಡ ಟೀಮ್ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿರುವುದು.

ಅಕ್ಟೋಬರ್ 14 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ್ ತಂಡವನ್ನು ಭಾರತ ಕೇವಲ 191 ರನ್​ಗಳಿಗೆ ಆಲೌಟ್ ಮಾಡಿತ್ತು.

ಅಲ್ಲದೆ 192 ರನ್​ಗಳ ಗುರಿಯನ್ನು ಕೇವಲ 30.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಹೀನಾಯ ಸೋಲಿನಿಂದ ಹತಾಶರಾಗಿರುವ ಪಾಕ್ ನಟಿ ಸೆಹರ್ ಶಿನ್ವಾರಿ ಇದೀಗ ಭಾರತದ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

ಇಂಡೊ-ಬಾಂಗ್ಲಾ ಪಂದ್ಯ ಯಾವಾಗ?

ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ