ಏಕದಿನ ವಿಶ್ವಕಪ್ನ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವು ಭಾರತವನ್ನು ಸೋಲಿಸಿದರೆ ಬಾಂಗ್ಲಾ ಹುಡುಗನೊಂದಿಗೆ ಡೇಟಿಂಗ್ ಮಾಡುವುದಾಗಿ ಪಾಕ್ ನಟಿ ಸೆಹರ್ ಶಿನ್ವಾರಿ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಬರೆದುಕೊಂಡಿರುವ ಸೆಹರ್ ಶಿನ್ವಾರಿ, ಇನ್ಶಾ ಅಲ್ಲಾಹ್…ನನ್ನ ಬಂಗಾಳಿ ಬಂಧು (ಬಾಂಗ್ಲಾದೇಶ್ ತಂಡ) ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿದ್ದಾರೆ. ಬಾಂಗ್ಲಾ ತಂಡವು ಭಾರತವನ್ನು ಸೋಲಿಸಿದರೆ, ನಾನು ಢಾಕಾಗೆ ಹೋಗುತ್ತೇನೆ. ಅಲ್ಲದೆ ಬಾಂಗ್ಲಾ ಹುಡುಗನೊಂದಿಗೆ ಮೀನು ಭೋಜನವನ್ನು ಮಾಡುತ್ತೇನೆ” ಎಂದಿದ್ದಾರೆ.
InshAllah my Bangali Bandu will avenge us in the next match. I will go to dhaka and have a fish dinner date with Bangali boy if their team managed to beat India ✌️❤️ 🇧🇩
— Sehar Shinwari (@SeharShinwari) October 15, 2023
ಈ ಮೂಲಕ ಸೆಹರ್ ಶಿನ್ವಾರಿ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ತಂಡವ ಗೆಲುವನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. ಇಂತಹದೊಂದು ಡೇಟಿಂಗ್ ಆಫರ್ ನೀಡಲು ಮುಖ್ಯ ಕಾರಣ ಪಾಕಿಸ್ತಾನ್ ತಂಡ ಟೀಮ್ ಇಂಡಿಯಾ ವಿರುದ್ಧ ಹೀನಾಯವಾಗಿ ಸೋತಿರುವುದು.
ಅಕ್ಟೋಬರ್ 14 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ್ ತಂಡವನ್ನು ಭಾರತ ಕೇವಲ 191 ರನ್ಗಳಿಗೆ ಆಲೌಟ್ ಮಾಡಿತ್ತು.
ಅಲ್ಲದೆ 192 ರನ್ಗಳ ಗುರಿಯನ್ನು ಕೇವಲ 30.3 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಹೀನಾಯ ಸೋಲಿನಿಂದ ಹತಾಶರಾಗಿರುವ ಪಾಕ್ ನಟಿ ಸೆಹರ್ ಶಿನ್ವಾರಿ ಇದೀಗ ಭಾರತದ ವಿರುದ್ಧ ಬಾಂಗ್ಲಾದೇಶ್ ತಂಡದ ಗೆಲುವನ್ನು ಎದುರು ನೋಡುತ್ತಿದ್ದಾರೆ.
ಇದನ್ನೂ ಓದಿ: ಚೇಸ್ ಮಾಸ್ಟರ್…ಸಚಿನ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ
ಭಾರತ-ಬಾಂಗ್ಲಾದೇಶ್ ನಡುವಣ ಪಂದ್ಯವು ಅಕ್ಟೋಬರ್ 19 ರಂದು ನಡೆಯಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಸಂಖ್ಯೆಯನ್ನು ನಾಲ್ಕಕ್ಕೇರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಅತ್ತ ಆಡಿರುವ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಬಾಂಗ್ಲಾದೇಶ್ ತಂಡವು ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ.