ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ವಿಶ್ವದಾದ್ಯಂತ ಅಭಿಮಾನಿಗಳಿರುವುದು ಗೊತ್ತೇ ಇದೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿ ಪಾಕ್ ತಂಡದಲ್ಲೇ ಕೆಲ ಅಭಿಮಾನಿಗಳಿದ್ದಾರೆ. ಇನ್ನು ಕೊಹ್ಲಿಯ ಹವಾ ಪಾಕಿಸ್ತಾನದಲ್ಲೂ ಇರುವುದು ಕೂಡ ಗೊತ್ತೇ ಇದೆ. ಇವೆಲ್ಲದರ ನಡುವೆ ಭಾರತ – ಪಾಕಿಸ್ತಾನ್ ನಡುವಣ ಹೈವೊಲ್ಟೇಜ್ ಪಂದ್ಯದ ವೇಳೆ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಅಭಿಮಾನಿಯೊಬ್ಬರು ಕಾಣಿಸಿಕೊಂಡಿದ್ದಾರೆ.
ವಿಶೇಷ ಎಂದರೆ ಈ ಅಭಿಮಾನಿಯು ಪಾಕಿಸ್ತಾನ್ ತಂಡಕ್ಕೆ ಸಪೋರ್ಟ್ ಮಾಡಲು ಬಂದಿದ್ದರು. ಹೀಗಾಗಿಯೇ ಪಾಕಿಸ್ತಾನ್ ತಂಡದ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ಆದರೆ ಅತ್ತ ವಿರಾಟ್ ಕೊಹ್ಲಿಯ ಅಭಿಮಾನಿ ಕೂಡ ಆಗಿರುವ ಈ ಪಾಕ್ ಫ್ಯಾನ್ ತನ್ನ ಪಾಕಿಸ್ತಾನ್ ಜೆರ್ಸಿಗೆ ಕೊಹ್ಲಿಯ ಹೆಸರನ್ನು ಬರೆಸಿಕೊಂಡಿದ್ದರು. ಈ ಮೂಲಕ ಪಾಕ್ ತಂಡಕ್ಕೆ ಬೆಂಬಲ ಸೂಚಿಸುತ್ತಾ ವಿರಾಟ್ ಕೊಹ್ಲಿಯನ್ನು ಹುರಿದುಂಬಿಸುತ್ತಾ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು.
ಇದೀಗ ನಂಬರ್ 18 ಪಾಕಿಸ್ತಾನ್ ಜೆರ್ಸಿಯಲ್ಲಿದ್ದ ವಿರಾಟ್ ಕೊಹ್ಲಿ ಅಭಿಮಾನಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಈ ಫೋಟೋಗೆ ಭಾರತದ ಕಿಂಗ್ ಕೊಹ್ಲಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
A Pakistani fan with Virat Kohli’s Name Jersey in the stadium. pic.twitter.com/iGlmLh5LDw
— CricketMAN2 (@ImTanujSingh) August 28, 2022
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಟೀಮ್ ಇಂಡಿಯಾ ಬೌಲರ್ಗಳ ಕರಾರುವಾಕ್ ದಾಳಿ ಮುಂದೆ ರನ್ಗಳಿಸಲು ಪರದಾಡಿದ ಪಾಕ್ ಪಡೆಯು 19.5 ಓವರ್ಗಳಲ್ಲಿ 147 ರನ್ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಭುವನೇಶ್ವರ್ ಕುಮಾರ್ 4 ವಿಕೆಟ್ ಕಬಳಿಸಿದರೆ, ಹಾರ್ದಿಕ್ ಪಾಂಡ್ಯ 3 ವಿಕೆಟ್ ಪಡೆದು ಮಿಂಚಿದ್ದರು.