AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಸೋತರೆ… ಅಮೀರ್ ಗೆ ಸವಾಲಾಕಿದ ಪಾಕ್ ಕ್ರಿಕೆಟಿಗ

T20 World Cup 2026: ಟಿ20 ವಿಶ್ವಕಪ್ ಸೆಮಿಫೈನಲ್ ಸುತ್ತಿಗೆ ಭಾರತ, ಇಂಗ್ಲೆಂಡ್, ನ್ಯೂಝಿಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳು ತಲುಪಿದೆ. ಈ ನಾಲ್ಕು ತಂಡಗಳ ನಡುವೆ ಸೆಮಿಫೈನಲ್ ಮುಖಾಮುಖಿ ನಡೆಯಲಿದ್ದು, ಮೊದಲ ಸೆಮೀಸ್​ನಲ್ಲಿ ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಸೆಣಸಲಿದೆ. ಇನ್ನು ದ್ವಿತೀಯ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಇಂಗ್ಕೆಂಡ್ ನಡುವೆ ನಡೆಯಲಿದೆ.

ಇಂಡಿಯಾ ಸೋತರೆ... ಅಮೀರ್ ಗೆ ಸವಾಲಾಕಿದ ಪಾಕ್ ಕ್ರಿಕೆಟಿಗ
Ahmed Shehzad And Mohammad Amir
ಝಾಹಿರ್ ಯೂಸುಫ್
|

Updated on: Mar 03, 2026 | 9:26 AM

Share

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ಗೆ ವೇದಿಕೆ ಸಿದ್ಧವಾಗಿದೆ. ಈ ಸೆಮಿಫೈನಲ್​ ಸುತ್ತಿಗೂ ಮುನ್ನ ಸೂಪರ್-8 ಲೀಗ್​ನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್​ಗೇರಲು ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯಕ್ಕೂ ಮುನ್ನ ಪಾಕಿಸ್ತಾನ್ ಕ್ರಿಕೆಟಿಗರಾದ ಅಹ್ಮದ್ ಶೆಹಝಾದ್ ಹಾಗೂ ಮೊಹಮ್ಮದ್ ಅಮೀರ್ ಬಹಿರಂಗವಾಗಿಯೇ ಪಂಥ ಕಟ್ಟಿದ್ದರು. ಅದು ಸಹ ಶೋ ತ್ಯಜಿಸುತ್ತೇನೆ ಎನ್ನುವ ಮೂಲಕ ಎಂಬುದು ವಿಶೇಷ.

ಪಾಕಿಸ್ತಾನದ ಜಿಯೋ ಚಾನೆಲ್​ನಲ್ಲಿ ಪ್ರಸಾರವಾಗುವ ಹಸ್ನಾ ಮನಾ ಹೈ ಕ್ರಿಕೆಟ್ ಕಾರ್ಯಕ್ರಮದಲ್ಲಿ ಮಾಜಿ ಕ್ರಿಕೆಟಿಗರಾದ ಮೊಹಮ್ಮದ್ ಅಮೀರ್, ಅಹ್ಮದ್ ಶೆಹಝಾದ್ ಹಾಗೂ ರಶೀದ್ ಲತೀಫ್ ವಿಶ್ಲೇಷಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ನಿರ್ಣಾಯಕ ಪಂದ್ಯದ ವಿಶ್ಲೇಷಣೆ ವೇಳೆ ಮೊಹಮ್ಮದ್ ಅಮೀರ್ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲ್ಲ ಎಂದಿದ್ದರು.

ಇದೇ ವೇಳೆ ಅಹ್ಮದ್ ಶೆಹಝಾದ್ ಭಾರತ ತಂಡ ಸೆಮಿಫೈನಲ್​ನಲ್ಲಿ ಸ್ಥಾನ ಪಡೆಯುವುದು ಖಚಿತ ತಿರುಗೇಟು ನೀಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲ್ಲುವ ಸಾಧ್ಯತೆಯೇ ಇಲ್ಲ. ಟೀಮ್ ಇಂಡಿಯಾ ಸೋಲಲಿದೆ ಎಂದು ಅಮೀರ್ ಪುನರುಚ್ಚರಿಸಿದರು.

ಈ ವೇಳೆ “ಭಾರತ ಸೋತರೆ ನಾನು ಶೋ ಬಿಡುತ್ತೇನೆ” ಎಂದು ಅಹ್ಮದ್ ಶೆಹಝಾದ್ ಸವಾಲು ಹಾಕಿದ್ದಾರೆ. ಈ ಪಂಥಹ್ವಾನವನ್ನು ಮೊಹಮ್ಮದ್ ಅಮೀರ್ ಸ್ವೀಕರಿಸಿದ್ದಾರೆ.

ಇದೀಗ ವೆಸ್ಟ್ ಇಂಡೀಸ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಸೆಮಿಫೈನಲ್​ಗೇರಿದೆ. ಭಾರತ ತಂಡದ ಈ ಗೆಲುವಿನೊಂದಿಗೆ ಅಹ್ಮದ್ ಶೆಹಝಾದ್ ಅಮೀರ್​ ಜೊತೆಗಿನ ಪಂಥಹ್ವಾನದಲ್ಲಿ ಗೆದ್ದಿದ್ದಾರೆ. ಹೀಗಾಗಿ ಅವರು ಶೋ ಬಿಡುವ ಅಗತ್ಯವಿಲ್ಲ.

ಅತ್ತ ಮೊದಲಿಂದಲೂ ಭಾರತ ತಂಡ ಈ ಬಾರಿ ಸೆಮಿಫೈನಲ್​ಗೆ ತಲುಪಲ್ಲ ಎಂದೇಳುತ್ತಾ ಬಂದಿರುವ ಮೊಹಮ್ಮದ್ ಅಮೀರ್ ಇದೀಗ ಮುಖಭಂಗ ಅನುಭವಿಸಿದ್ದಾರೆ. ಅದರಲ್ಲೂ ಶೆಹಝಾದ್ ಜೊತೆ ಪಂಥ ಕಟ್ಟಿ ಇದೀಗ ಸೋತಿದ್ದಾರೆ. ಹೀಗಾಗಿಯೇ ಭಾರತೀಯ ಕ್ರಿಕೆಟ್ ಪ್ರೇಮಿಗಳು ಮೊಹಮ್ಮದ್ ಅಮೀರ್​ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: T20 World Cup 2026: ಸೆಮಿಫೈನಲ್​ನಲ್ಲಿ 10 ಓವರ್​ಗಳ ನಿಯಮ ಜಾರಿ

ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸೆಮಿಫೈನಲ್​ಗೆ ಪ್ರವೇಶಿಸಿರುವ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ಗೇರಲಿದೆ.

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ