AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಇಲೆವೆನ್ ಹೆಸರಿಸಿದ ಬಾಬರ್ ಆಝಂ: ವಿರಾಟ್ ಕೊಹ್ಲಿಗೆ ಇಲ್ಲ ಸ್ಥಾನ

Babar Azam's World XI: ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್‌ಮನ್ ಬಾಬರ್ ಆಝಂ ಇತ್ತೀಚೆಗೆ ಪಾಡ್‌ಕ್ಯಾಸ್ಟ್​ವೊಂದರಲ್ಲಿ ವಿಶ್ವ ಟಿ20 ಇಲೆವೆನ್​ ಹೆಸರಿಸಿದ್ದಾರೆ. 11 ಆಟಗಾರರ ಪಟ್ಟಿಯಲ್ಲಿ ಇಬ್ಬರು ಭಾರತೀಯ ಬ್ಯಾಟರ್​ಗಳು ಕಾಣಿಸಿಕೊಂಡಿದ್ದಾರೆ. ಇದಾಗ್ಯೂ ವಿಶ್ವದ ಅತ್ಯುತ್ತಮ ಆಟಗಾರರು ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾಗೆ ಈ ಇಲೆವೆನ್​ನಲ್ಲಿ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.

ವಿಶ್ವ ಇಲೆವೆನ್ ಹೆಸರಿಸಿದ ಬಾಬರ್ ಆಝಂ: ವಿರಾಟ್ ಕೊಹ್ಲಿಗೆ ಇಲ್ಲ ಸ್ಥಾನ
Babar Azam
ಝಾಹಿರ್ ಯೂಸುಫ್
|

Updated on: May 17, 2025 | 8:30 AM

Share

ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ವಿಶ್ವ ಇಲೆವೆನ್ ಹೆಸರಿಸಿದ್ದಾರೆ. ಪ್ರಸ್ತುತ ಆಡುತ್ತಿರುವ ವಿಶ್ವದ ಅತ್ಯುತ್ತಮ ಟಿ20 ಆಟಗಾರರನ್ನು ಒಳಗೊಂಡಿರುವ ಈ ಇಲೆವೆನ್​ನಲ್ಲಿ ವಿರಾಟ್ ಕೊಹ್ಲಿಗೆ (Virat Kohli) ಸ್ಥಾನ ನೀಡಿಲ್ಲ ಎಂಬುದೇ ಅಚ್ಚರಿ. ಪಾಡ್​ ಕಾಸ್ಟ್​ವೊಂದರಲ್ಲಿ ಕಾಣಿಸಿಕೊಂಡ ಬಾಬರ್​ಗೆ ವರ್ಲ್ಡ್ ಟಿ20​ ಇಲೆವೆನ್ ಹೆಸರಿಸುವಂತೆ ಕೇಳಿಕೊಳ್ಳಲಾಗಿತ್ತು.

ಈ ವೇಳೆ ಇಬ್ಬರು ಭಾರತೀಯ ಆಟಗಾರರನ್ನು ಆಯ್ಕೆ ಮಾಡಿದರೂ, ಬಾಬರ್ ಆಝಂ ವಿಶ್ವದ ಶ್ರೇಷ್ಠ ಬ್ಯಾಟರ್ ವಿರಾಟ್ ಕೊಹ್ಲಿಯನ್ನು ಪ್ರಸ್ತಾಪಿಸದೇ ಇರುವುದು ಚರ್ಚೆಗೆ ಕಾರಣವಾಗಿದೆ.

ಬಾಬರ್ ಆಝಂ ತನ್ನ ವರ್ಲ್ಡ್ ಟಿ20​ ಇಲೆವೆನ್​ನಲ್ಲಿ ಆರಂಭಿಕರಾಗಿ ಭಾರತದ ರೋಹಿತ್ ಶರ್ಮಾ ಹಾಗೂ ಪಾಕಿಸ್ತಾನದ ಮೊಹಮ್ಮದ್ ರಿಝ್ವಾನ್ ಅವರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಮೂರನೇ ಕ್ರಮಾಂಕಕ್ಕೆ ಪಾಕಿಸ್ತಾನದ ಎಡಗೈ ದಾಂಡಿಗ ಫಖರ್ ಝಮಾನ್ ಅವರನ್ನು ಹೆಸರಿಸಿದ್ದಾರೆ.

ನಾಲ್ಕನೇ ಕ್ರಮಾಂಕಕ್ಕೆ ಭಾರತದ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿದರೆ, ಐದನೇ ಕ್ರಮಾಂಕದಲ್ಲಿ ಇಂಗ್ಲೆಂಡ್​ನ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಅವರನ್ನು ಹೆಸರಿಸಿದ್ದಾರೆ. ಇನ್ನು ಫಿನಿಶರ್ ಪಾತ್ರದಲ್ಲಿ ಆರನೇ ಕ್ರಮಾಂಕದಲ್ಲಿ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಅವರನ್ನು ಆಯ್ಕೆ ಮಾಡಿದ್ದಾರೆ.

ಆಲ್​ರೌಂಡರ್​ಗಳಾಗಿ ಸೌತ್ ಆಫ್ರಿಕಾ ಮಾರ್ಕೊ ಯಾನ್ಸೆನ್ ಹಾಗೂ ಅಫ್ಘಾನಿಸ್ತಾನದ ರಶೀದ್ ಖಾನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗೆಯೇ ವೇಗಿಗಳಾಗಿ ಇಂಗ್ಲೆಂಡ್​ನ ಮಾರ್ಕ್​ವುಡ್ ಹಾಗೂ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್​ ಮತ್ತು ಮಿಚೆಲ್ ಸ್ಟಾರ್ಕ್​ ಅವರನ್ನು ಹೆಸರಿಸಿದ್ದಾರೆ.

ಇತ್ತ ಭಾರತದ ಸೂರ್ಯಕುಮಾರ್ ಯಾದವ್ ಹಾಗೂ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿಕೊಂಡಿರುವ ಬಾಬರ್ ಆಝಂ, ವಿರಾಟ್ ಕೊಹ್ಲಿಯ ಹೆಸರನ್ನು ಪ್ರಸ್ತಾಪಿಸದೇ ಇರುವುದೇ ಈಗ ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಮೂರು ಸ್ವರೂಪಗಳಲ್ಲೂ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಾಗ್ಯೂ ಕಿಂಗ್ ಕೊಹ್ಲಿಯ ಹೆಸರು ಪ್ರಸ್ತಾಪಿಸದೇ ಬಾಬರ್, ಉಳಿದವರನ್ನು ಆಯ್ಕೆ ಮಾಡಿಕೊಂಡಿರುವುದು ಚರ್ಚೆ ಗ್ರಾಸವಾಗಿದೆ.

ಇದನ್ನೂ ಓದಿ: IPL 2025: RCB ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ CWI

ಬಾಬರ್ ಆಝಂ ವರ್ಲ್ಡ್ ಟಿ20​ ಇಲೆವೆನ್:

  • ರೋಹಿತ್ ಶರ್ಮಾ (ಭಾರತ)
  • ಮೊಹಮ್ಮದ್ ರಿಝ್ವಾನ್ (ಪಾಕಿಸ್ತಾನ್)
  • ಫಖರ್ ಝಮಾನ್ (ಪಾಕಿಸ್ತಾನ್)
  • ಸೂರ್ಯಕುಮಾರ್ ಯಾದವ್ (ಭಾರತ)
  • ಜೋಸ್ ಬಟ್ಲರ್ (ಇಂಗ್ಲೆಂಡ್)
  • ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ)
  • ಮಾರ್ಕೊ ಯಾನ್ಸೆನ್ (ಸೌತ್ ಆಫ್ರಿಕಾ)
  • ರಶೀದ್ ಖಾನ್ (ಅಫ್ಘಾನಿಸ್ತಾನ್)
  • ಪ್ಯಾಟ್ ಕಮಿನ್ಸ್ (ಆಸ್ಟ್ರೇಲಿಯಾ)
  • ಮಿಚೆಲ್ ಸ್ಟಾರ್ಕ್ (ಆಸ್ಟ್ರೇಲಿಯಾ)
  • ಮಾರ್ಕ್ ವುಡ್ (ಇಂಗ್ಲೆಂಡ್).