AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗೆ 15 ಸದಸ್ಯರ ಪಾಕ್ ತಂಡ ಪ್ರಕಟ; ಸ್ಟಾರ್ ವೇಗಿ ಅಲಭ್ಯ..!

ODI World Cup 2023: ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್‌ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಶುಕ್ರವಾರ ತನ್ನ ತಂಡವನ್ನು ಪ್ರಕಟಿಸಿದೆ. ಏಷ್ಯಾಕಪ್​​ನಲ್ಲಿ ಆಡಿದ ಭಾಗಶಃ ತಂಡವೇ ವಿಶ್ವಕಪ್​ಗೆ ಆಯ್ಕೆಯಾಗಿದೆ. ಆದರೆ ಏಷ್ಯಾಕಪ್‌ನಲ್ಲಿ ಆಡಿದ್ದ ಇಬ್ಬರು ಆಟಗಾರರನ್ನು ಈ ತಂಡದಿಂದ ಕೈಬಿಡಲಾಗಿದೆ.

ಏಕದಿನ ವಿಶ್ವಕಪ್​ಗೆ 15 ಸದಸ್ಯರ ಪಾಕ್ ತಂಡ ಪ್ರಕಟ; ಸ್ಟಾರ್ ವೇಗಿ ಅಲಭ್ಯ..!
ಪಾಕಿಸ್ತಾನ ತಂಡ
ಪೃಥ್ವಿಶಂಕರ
|

Updated on:Sep 22, 2023 | 4:56 PM

Share

ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಏಕದಿನ ವಿಶ್ವಕಪ್‌ಗೆ (ODI World Cup 2023) ಪಾಕಿಸ್ತಾನ ಕ್ರಿಕೆಟ್ ಮಂಡಳಿ ಶುಕ್ರವಾರ ತನ್ನ ತಂಡವನ್ನು (Pakistan Cricket team) ಪ್ರಕಟಿಸಿದೆ. ಏಷ್ಯಾಕಪ್​​ನಲ್ಲಿ ಆಡಿದ ಭಾಗಶಃ ತಂಡವೇ ವಿಶ್ವಕಪ್​ಗೆ ಆಯ್ಕೆಯಾಗಿದೆ. ಆದರೆ ಏಷ್ಯಾಕಪ್‌ನಲ್ಲಿ ಆಡಿದ್ದ ಇಬ್ಬರು ಆಟಗಾರರನ್ನು ಈ ತಂಡದಿಂದ ಕೈಬಿಡಲಾಗಿದೆ. ನಸೀಮ್ ಶಾ (Naseem Shah) ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರೆ ಅವರ ಜಾಗಕ್ಕೆ ಹಸನ್ ಅಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೇಗದ ಬೌಲರ್ ಫಹೀಮ್ ಅಶ್ರಫ್ ಬದಲಿಗೆ ಲೆಗ್ ಸ್ಪಿನ್ನರ್ ಉಸಾಮಾ ಮಿರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ ಭಾರತದ ವಿರುದ್ಧದ ಏಷ್ಯಾಕಪ್‌ ಪಂದ್ಯದಲ್ಲಿ ಗಾಯಗೊಂಡಿದ್ದ ಹ್ಯಾರಿಸ್ ರೌಫ್, ಫಿಟ್ ಆಗಿ ತಂಡ ಸೇರಿಕೊಂಡಿದ್ದಾರೆ.

ಭಾರತದಲ್ಲಿನ ಪಿಚ್‌ಗಳು ಸ್ಪಿನ್ನರ್‌ಗಳಿಗೆ ಸಹಾಯಕವಾಗಿವೆ. ಹೀಗಾಗಿ ಇದನ್ನು ಗಮನದಲ್ಲಿಟ್ಟುಕೊಂಡು ಮುಖ್ಯ ಆಯ್ಕೆಗಾರ ಇಂಜಮಾಮ್ ಉಲ್ ಹಕ್ ಫಹೀಮ್ ಅಶ್ರಫ್ ಬದಲಿಗೆ ಲೆಗ್ ಸ್ಪಿನ್ನರ್ ಮಿರ್ ಅವರನ್ನು ಆಯ್ಕೆ ಮಾಡಿದ್ದಾರೆ. ನಸೀಮ್ ಶಾ ಅನುಪಸ್ಥಿತಿಯು ತಂಡಕ್ಕೆ ದೊಡ್ಡ ಹೊಡೆತವಾಗಿದ್ದು, ಅವರ ಜಾಗದಲ್ಲಿ ಆಯ್ಕೆಯಾಗಿರುವ ಹಸನ್ ಅಲಿ, ನಸೀಮ್ ಅನುಪಸ್ಥಿತಿಯನ್ನು ಯಾವ ರೀತಿಯಾಗಿ ಸರಿದೂಗಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಅಫ್ರಿದಿ ಮದುವೆಯಲ್ಲಿ ಭಾಗಿಯಾಗಿ ವದಂತಿಗಳಿಗೆ ಬ್ರೇಕ್ ಹಾಕಿದ ಪಾಕ್ ನಾಯಕ ಬಾಬರ್; ವಿಡಿಯೋ ನೋಡಿ

ಬಲಿಷ್ಠ ಬೌಲಿಂಗ್ ವಿಭಾಗ

ನಸೀಮ್ ಶಾ ಅನುಪಸ್ಥಿತಿಯ ಹೊರತಾಗಿಯೂ, ಪಾಕಿಸ್ತಾನದ ಬೌಲಿಂಗ್ ವಿಭಾಗ ತುಂಬಾ ಪ್ರಬಲವಾಗಿದೆ. ತಂಡದಲ್ಲಿ ಶಾಹೀನ್ ಶಾ ಆಫ್ರಿದಿ, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ ಜೂನಿಯರ್, ಹಸನ್ ಅಲಿ ಮುಂತಾದ ಬೌಲರ್‌ಗಳಿದ್ದಾರೆ. ನಾವು ಸ್ಪಿನ್ನರ್‌ಗಳ ಬಗ್ಗೆ ಮಾತನಾಡುವುದಾದರೆ, ಶಾದಾಬ್ ಖಾನ್ ತಂಡದ ಪ್ರಮುಖ ಸ್ಪಿನ್ನರ್ ಆಗಿದ್ದರೆ ಇವರಲ್ಲದೆ ತಂಡದಲ್ಲಿ ಮೊಹಮ್ಮದ್ ನವಾಜ್ ಮತ್ತು ಮಿರ್ ಕೂಡ ಇದ್ದಾರೆ. ಈ ಮೂವರೂ ಆಲ್ ರೌಂಡರ್​ಗಳಾಗಿದ್ದು ತಂಡದ ಬ್ಯಾಟಿಂಗ್ ಬಲವನ್ನೂ ಹೆಚ್ಚಿಸಿದ್ದಾರೆ.

ಬ್ಯಾಟಿಂಗ್ ಕೊರತೆ?

ಆದಾಗ್ಯೂ, ಪಾಕಿಸ್ತಾನದ ಬ್ಯಾಟಿಂಗ್ ವಿಭಾಗ ದುರ್ಬಲವಾಗಿ ಕಾಣುತ್ತಿದೆ. ನಾಯಕ ಬಾಬರ್ ಆಝಂ ಮತ್ತು ಮೊಹಮ್ಮದ್ ರಿಜ್ವಾನ್ ತಂಡದ ಪ್ರಮುಖ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. ಇವರಿಬ್ಬರು ವಿಕೆಟ್‌ನಲ್ಲಿರುವವರೆಗೂ ಪಾಕಿಸ್ತಾನದ ಬ್ಯಾಟಿಂಗ್ ಬಲಿಷ್ಠವಾಗಿರಲಿದೆ. ಆದರೆ ಈ ಇಬ್ಬರು ಪೆವಿಲಿಯನ್‌ಗೆ ಮರಳುತ್ತಿದ್ದಂತೆಯೇ ತಂಡಕ್ಕೆ ಸಂಕಷ್ಟ ಎದುರಾಗಿದೆ. ಫಖರ್ ಜಮಾನ್ ಮತ್ತು ಇಮಾಮ್ ಉಲ್ ಹಕ್ ಪಾಕಿಸ್ತಾನದ ಆರಂಭಿಕ ಜೋಡಿಯಾಗಿದ್ದರೆ, ಮಧ್ಯಮ ಕ್ರಮಾಂಕದಲ್ಲಿ ಇಫ್ತಿಕರ್ ಅಹಮ್, ರಿಜ್ವಾನ್ ಮತ್ತು ಸಲ್ಮಾನ್ ಅಲಿ ಅಘಾ ಇದ್ದಾರೆ. ಆದರೆ ಬಲಿಷ್ಠ ಬೌಲಿಂಗ್ ಮುಂದೆ ಮಧ್ಯಮ ಕ್ರಮಾಂಕ ಮಂಕಾಗಿರುವುದನ್ನು ಈ ಹಿಂದಿನ ಪಂದ್ಯಗಳಲ್ಲಿ ಗಮನಿಸಬಹುದಾಗಿದೆ.

ಪಾಕಿಸ್ತಾನದ ವಿಶ್ವಕಪ್ ತಂಡ: ಬಾಬರ್ ಆಝಂ, ಫಖರ್ ಜಮಾನ್, ಇಮಾಮ್ ಉಲ್ ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಉಸಾಮಾ ಮಿರ್, ಶಾಹೀನ್ ಶಾ ಆಫ್ರಿದಿ, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಮ್ ಮತ್ತು ಹಸನ್ ಅಲಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Fri, 22 September 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ