Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಪಾಕ್ ತಂಡದ ಸ್ಟಾರ್ ವೇಗದ ಬೌಲರ್

Wahab Riaz: ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸುವ ನಿರ್ಧಾರ ಕೈಗೊಂಡಿದ್ದೇನೆ. ಆದರೆ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ

ಏಷ್ಯಾಕಪ್​ಗೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಪಾಕ್ ತಂಡದ ಸ್ಟಾರ್ ವೇಗದ ಬೌಲರ್
Follow us
ಪೃಥ್ವಿಶಂಕರ
|

Updated on: Aug 16, 2023 | 1:06 PM

ಪಾಕಿಸ್ತಾನ ಕ್ರಿಕೆಟ್ ತಂಡದ (Pakistan Cricket team) ವೇಗದ ಬೌಲರ್ ವಹಾಬ್ ರಿಯಾಜ್ (Wahab Riaz) ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ (Retirement) ಘೋಷಿಸಿದ್ದಾರೆ. ಆದಾಗ್ಯೂ, ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸುವುದಾಗಿ ರಿಯಾಜ್ ಹೇಳಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ 15 ವರ್ಷಗಳ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸುವ ನಿರ್ಧಾರ ಕೈಗೊಂಡಿದ್ದೇನೆ. ಆದರೆ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಹಾಬ್ ತನ್ನ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಪಾಕಿಸ್ತಾನ ಪರ 27 ಟೆಸ್ಟ್, 91 ಏಕದಿನ ಮತ್ತು 36 ಟಿ20 ಪಂದ್ಯಗಳನ್ನು ಆಡಿದ್ದಾರೆ. ತಂಡದ ಪರ 2020 ರಲ್ಲಿ ತಮ್ಮ ಕೊನೆಯ ಪಂದ್ಯವನ್ನಾಡಿದ್ದ ರಿಯಾಜ್, ಇತ್ತೀಚಿನ ಸಂದರ್ಶನವೊಂದರಲ್ಲಿ ವಿಶ್ವಕಪ್‌ನಲ್ಲಿ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇದೀಗ ನಿವೃತ್ತಿ ನಿರ್ಧಾರಕ್ಕೆ ಬಂದಿರುವ ರಿಯಾಜ್, 2023ರ ವಿಶ್ವಕಪ್ ಆಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ವಹಾಬ್ ಈ ಹಿಂದೆ 2011, 2015 ಮತ್ತು 2019ರ ವಿಶ್ವಕಪ್​ನಲ್ಲಿ ಪಾಕಿಸ್ತಾನ ಪರ ಆಡಿದ್ದರು.

ನಿಯಮ ಉಲ್ಲಂಘನೆ; ಪಾಕಿಸ್ತಾನದ 15 ಆಟಗಾರರಿಗೆ ಶೋಕಾಸ್ ನೋಟಿಸ್ ನೀಡಿದ ಪಿಸಿಬಿ

ಟ್ವೀಟ್ ಮೂಲಕ ಮಾಹಿತಿ

ಇನ್ನು ಪಾಕಿಸ್ತಾನ್ ಸೂಪರ್ ಲೀಗ್​​ನಲ್ಲಿ ಪೇಶಾವರ್ ಝಲ್ಮಿ ಪರ ಆಡುತ್ತಿರುವ ವಹಾಬ್, ಇತ್ತೀಚೆಗೆ ಪಾಕಿಸ್ತಾನದ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಈ ವರ್ಷದ ಜನವರಿಯಿಂದ ಪಂಜಾಬ್ ಪ್ರಾಂತ್ಯದ ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಈ ಎಡಗೈ ವೇಗದ ಬೌಲರ್ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಮಾಹಿತಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ವಹಾಬ್ ತಮ್ಮ ಟ್ವೀಟ್​ನಲ್ಲಿ, ನಾನು ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಪಿಸಿಬಿ, ನನ್ನ ಕುಟುಂಬ, ತರಬೇತುದಾರರು, ಮಾರ್ಗದರ್ಶಕರು, ತಂಡದ ಸಹ ಆಟಗಾರರು, ಅಭಿಮಾನಿಗಳು ಮತ್ತು ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ಆದರೆ ಫ್ರಾಂಚೈಸಿ ಕ್ರಿಕೆಟ್ ಆಡುವುದನ್ನು ಮುಂದುವರೆಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವಹಾಬ್ ಅಂತಾರಾಷ್ಟ್ರೀಯ ವೃತ್ತಿ ಜೀವನ

ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ಪರ ವಹಾಬ್ ರಿಯಾಜ್ 34.50 ಸರಾಸರಿಯಲ್ಲಿ 83 ವಿಕೆಟ್‌ಗಳನ್ನು ಪಡೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 34.30 ಸರಾಸರಿಯಲ್ಲಿ 120 ವಿಕೆಟ್‌ಗಳನ್ನು ಪಡೆದಿರುವ ವಹಾಬ್, ಟಿ20ಯಲ್ಲಿ 28.55ರ ಸರಾಸರಿಯಲ್ಲಿ 34 ವಿಕೆಟ್ ಪಡೆದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ