ಪಾಕಿಸ್ತಾನ್ ಟಿ20 ತಂಡ ಪ್ರಕಟ: ನಿವೃತ್ತಿ ನೀಡಿದ್ದ ಇಬ್ಬರು ಆಟಗಾರರು ಕಂಬ್ಯಾಕ್..!

Pakistan T20 Squad: ಏಪ್ರಿಲ್ 18 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಘೋಷಿಸಲಾಗಿದೆ. 17 ಸದಸ್ಯರ ಈ ತಂಡದಿಂದ ಪ್ರಮುಖ ವೇಗಿ ಹ್ಯಾರಿಸ್ ರೌಫ್ ಅವರನ್ನು ಕೈ ಬಿಡಲಾಗಿದೆ. ಇನ್ನು 4 ವರ್ಷಗಳಿಂದ ತಂಡದಿಂದ ಹೊರಗುಳಿದಿದ್ದ ಎಡಗೈ ವೇಗಿಯನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಪಾಕಿಸ್ತಾನ್ ಟಿ20 ತಂಡ ಪ್ರಕಟ: ನಿವೃತ್ತಿ ನೀಡಿದ್ದ ಇಬ್ಬರು ಆಟಗಾರರು ಕಂಬ್ಯಾಕ್..!
Pakistan Team
Follow us
TV9 Web
| Updated By: ಝಾಹಿರ್ ಯೂಸುಫ್

Updated on:Apr 09, 2024 | 5:56 PM

ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗಾಗಿ ಪಾಕಿಸ್ತಾನ್ (Pakistan) ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ವಿಶೇಷ ಎಂದರೆ ಈ ಸರಣಿಯೊಂದಿಗೆ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಆಲ್​ರೌಂಡರ್ ಇಮಾದ್ ವಾಸಿಂ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಅಂದರೆ ಅಮೀರ್ 4 ವರ್ಷಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಹಾಗೆಯೇ ಇಮಾದ್ ವಾಸಿಂ ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು.

ಇದೀಗ ಈ ಇಬ್ಬರು ಆಟಗಾರರು ಪಾಕಿಸ್ತಾನ್ ತಂಡದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಈ ಸರಣಿಯಲ್ಲಿ ಮಿಂಚಿದರೆ ಮುಂಬರುವ ಟಿ20 ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆಯಲಿದ್ದಾರೆ.

ಇನ್ನು ಅಮೀರ್, ಇಮಾದ್ ಆಗಮನದೊಂದಿಗೆ ಪಾಕ್ ವೇಗಿ ಹ್ಯಾರಿಸ್ ರೌಫ್ ಹಾಗೂ ಆಲ್​ರೌಂಡರ್ ಶಾದಾಬ್ ಖಾನ್ ತಂಡದಿಂದ ಹೊರಬಿದ್ದಿದ್ದಾರೆ. ಇದಾಗ್ಯೂ ಮಾಜಿ ನಾಯಕನಾಗಿ ಶಾಹೀನ್ ಶಾ ಅಫ್ರಿದಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಗೆಯೇ ಹೊಸ ಆಟಗಾರರಾಗಿ ಉಸ್ಮಾನ್ ಖಾನ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಮುಹಮ್ಮದ್ ಇರ್ಫಾನ್ ಖಾನ್ ಪಾಕ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಪಾಕಿಸ್ತಾನ್ ನೂತನ ಟಿ20 ತಂಡ ಈ ಕೆಳಗಿನಂತಿದೆ…

ಪಾಕಿಸ್ತಾನ್ ಟಿ20 ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ರಿಝ್ವಾನ್, ಮೊಹಮ್ಮದ್ ಅಮೀರ್, ಮುಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಸೈಮ್ ಅಯ್ಯುಬ್, ಶಾಹೀನ್ ಶಾ ಅಫ್ರಿದಿ, ಉಸಾಮಾ ಮಿರ್, ಉಸ್ಮಾನ್ ಖಾನ್, ಝಮಾನ್ ಖಾನ್.

ಇದನ್ನೂ ಓದಿ: Virat Kohli: ಟಿ20 ವಿಶ್ವಕಪ್​ನಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿಯುವುದು ಕನ್ಫರ್ಮ್​

ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ಸರಣಿ ವೇಳಾಪಟ್ಟಿ:

ಪಾಕಿಸ್ತಾನದಲ್ಲಿ ನಡೆಯಲಿರುವ 5 ಪಂದ್ಯಗಳ ಈ ಸರಣಿಯು ಏಪ್ರಿಲ್ 18 ರಿಂದ ಶುರುವಾಗಲಿದೆ. ಅಲ್ಲದೆ ಈ ಸರಣಿಯ ಕೊನೆಯ ಪಂದ್ಯವು ಏಪ್ರಿಲ್ 27 ರಂದು ಲಾಹೋರ್​ನಲ್ಲಿ ನಡೆಯಲಿದೆ.

  • 18 ಏಪ್ರಿಲ್: ಮೊದಲ ಟಿ20 ಪಂದ್ಯ (ರಾವಲ್ಪಿಂಡಿ)
  • 20 ಏಪ್ರಿಲ್: ಎರಡನೇ ಟಿ20 ಪಂದ್ಯ (ರಾವಲ್ಪಿಂಡಿ)
  • 21 ಏಪ್ರಿಲ್: ಮೂರನೇ ಟಿ20 ಪಂದ್ಯ (ರಾವಲ್ಪಿಂಡಿ)
  • 25 ಏಪ್ರಿಲ್: ನಾಲ್ಕನೇ ಟಿ20 ಪಂದ್ಯ (ಲಾಹೋರ್)
  • 27 ಏಪ್ರಿಲ್: ಐದನೇ ಟಿ20 ಪಂದ್ಯ (ಲಾಹೋರ್)

Published On - 5:55 pm, Tue, 9 April 24

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ