IND vs SA: ಕೆಎಲ್ ರಾಹುಲ್ ಆಯ್ಕೆಯ ಬಗ್ಗೆ ಚಕಾರವೆತ್ತಿದ ಪಾರ್ಥಿವ್ ಪಟೇಲ್

India vs South Africa: ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ನಾಳೆಯಿಂದ (ಡಿ.26) ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಸೆಂಚುರಿಯನ್​ನಲ್ಲಿ ನಡೆಯಲಿದೆ. ಇನ್ನು ದ್ವಿತೀಯ ಟೆಸ್ಟ್ ಪಂದ್ಯವು ಜನವರಿ 3 ರಿಂದ ಕೇಪ್​ಟೌನ್​ನಲ್ಲಿ ಶುರುವಾಗಲಿದೆ.

IND vs SA: ಕೆಎಲ್ ರಾಹುಲ್ ಆಯ್ಕೆಯ ಬಗ್ಗೆ ಚಕಾರವೆತ್ತಿದ ಪಾರ್ಥಿವ್ ಪಟೇಲ್
KL Rahul-Parthiv Patel
Follow us
| Updated By: ಝಾಹಿರ್ ಯೂಸುಫ್

Updated on: Dec 25, 2023 | 1:34 PM

ಡಿಸೆಂಬರ್ 26 ರಿಂದ ಭಾರತ-ಸೌತ್ ಆಫ್ರಿಕಾ (India vs South Africa) ನಡುವಣ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಸೆಂಚುರಿಯನ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ. ಭಾರತ ತಂಡದ ಮುಖ್ಯ ಕೋಚ್ ನಿರ್ಧಾರವನ್ನು ಇದೀಗ ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಪ್ರಶ್ನಿಸಿದ್ದಾರೆ.

ಭಾರತದ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವ ಆಟಗಾರ ರಣಜಿ ಟ್ರೋಫಿ ಅಥವಾ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ನಿಯಮಿತವಾಗಿ ಕೀಪಿಂಗ್ ಮಾಡುವವರಾಗಿರಬೇಕು. ಆದರೆ ಇದೀಗ ಏಕಾಏಕಿ ಕೆಎಲ್ ರಾಹುಲ್ ಅವರನ್ನು ಟೆಸ್ಟ್​ ತಂಡದ ವಿಕೆಟ್ ಕೀಪರ್ ಮಾಡಲಾಗಿದೆ. ನಿಜಕ್ಕೂ ಇದು ಅಚ್ಚರಿಯ ನಡೆ ಎಂದು ಪಾರ್ಥಿವ್ ಪಟೇಲ್ ಹೇಳಿದ್ದಾರೆ.

ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಆಗಿ ಕೆಎಸ್ ಭರತ್ ಇದ್ದಾರೆ. ಇದಾಗ್ಯೂ ಟೆಸ್ಟ್​ನಲ್ಲಿ ಕೀಪಿಂಗ್ ಮಾಡಿರದ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಎಂದು ದ್ರಾವಿಡ್ ಘೋಷಿಸಿರುವುದು ಆಶ್ಚರ್ಯವನ್ನುಂಟು ಮಾಡಿದೆ ಎಂದು ಪಾರ್ಥಿವ್ ಪಟೇಲ್ ತಿಳಿಸಿದ್ದಾರೆ.

ಈ ಹಿಂದೆ ಕೆಎಲ್ ರಾಹುಲ್ ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ವಿಕೆಟ್ ಕೀಪಿಂಗ್ ಮಾಡಿದ್ದರು. ಆದರೆ ಅವರು ಟೆಸ್ಟ್ ಕ್ರಿಕೆಟ್​ನಲ್ಲಿ ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 90 ಓವರ್​ಗಳ ಕಾಲ ವಿಕೆಟ್ ಕೀಪಿಂಗ್ ಮಾಡುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಕೋಚ್ ನಡೆಯನ್ನು ಪಾರ್ಥಿವ್ ಪಟೇಲ್ ಪ್ರಶ್ನಿಸಿದ್ದು, ತಂಡದಲ್ಲಿ ವಿಕೆಟ್ ಕೀಪರ್​ ಇದ್ದರೂ ಅವರನ್ನು ಬೆಂಚ್​ನಲ್ಲಿ ಕೂರಿಸಿ, ದೀರ್ಘಾವಧಿ ಕ್ರಿಕೆಟ್​ನಲ್ಲಿ ವಿಕೆಟ್ ಕೀಪಿಂಗ್ ಮಾಡದವರಿಗೆ ಕೀಪಿಂಗ್ ಗ್ಲೌಸ್ ತೊಡಿಸುವುದು ಸರಿಯಾದ ನಡೆಯಲ್ಲ ಎಂದು ಪಾರ್ಥಿವ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ-ಸೌತ್ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ:

ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿಯು ನಾಳೆಯಿಂದ (ಡಿ.26) ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಸೆಂಚುರಿಯನ್​ನಲ್ಲಿ ನಡೆಯಲಿದೆ. ಇನ್ನು ದ್ವಿತೀಯ ಟೆಸ್ಟ್ ಪಂದ್ಯವು ಜನವರಿ 3 ರಿಂದ ಕೇಪ್​ಟೌನ್​ನಲ್ಲಿ ಶುರುವಾಗಲಿದೆ.

  • ಡಿಸೆಂಬರ್ 26 ರಿಂದ- ಮೊದಲ ಟೆಸ್ಟ್ ಪಂದ್ಯ (ಸೆಂಚುರಿಯನ್)
  • ಜನವರಿ 3 ರಿಂದ- ಎರಡನೇ ಟೆಸ್ಟ್ ಪಂದ್ಯ (ಕೇಪ್​ಟೌನ್).

ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯಗಾಗಿ 100 ಕೋಟಿ ರೂ. ನೀಡಿದ ಮುಂಬೈ ಇಂಡಿಯನ್ಸ್..!

ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಅಭಿಮನ್ಯು ಈಶ್ವರನ್.

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ