Pat Cummins: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸುರೇಶ್ ರೈನಾ ದಾಖಲೆ ಮುರಿದ ಪ್ಯಾಟ್ ಕಮಿನ್ಸ್

| Updated By: ಝಾಹಿರ್ ಯೂಸುಫ್

Updated on: Apr 07, 2022 | 5:39 PM

IPL 2022: ಮುಂಬೈ ಇಂಡಿಯನ್ಸ್ ವಿರುದ್ದ ಕಮಿನ್ಸ್ ಅಬ್ಬರಿಸುತ್ತಿರುವುದು ಇದು 3ನೇ ಬಾರಿ. ಈ ಹಿಂದೆ 2020ರಲ್ಲಿಯೂ ಕಮ್ಮಿನ್ಸ್ ಮುಂಬೈ ವಿರುದ್ಧ ಎರಡು ಸ್ಫೋಟಕ ಇನ್ನಿಂಗ್ಸ್ ಆಡಿದ್ದರು.

Pat Cummins: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸುರೇಶ್ ರೈನಾ ದಾಖಲೆ ಮುರಿದ ಪ್ಯಾಟ್ ಕಮಿನ್ಸ್
ರೈನಾ-ಕಮಿನ್ಸ್
Follow us on

ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಪ್ಯಾಟ್ ಕಮಿನ್ಸ್ ಇದೀಗ ಮನೆಮಾತಾಗಿದ್ದಾರೆ. ಮುಂಬೈ ಇಂಡಿಯನ್ಸ್​ ತಂಡವು ಕೇವಲ 11 ರನ್‌ಗಳಿಗೆ ಆಂಡ್ರೆ ರಸೆಲ್ ಅವರನ್ನು ಔಟ್ ಮಾಡಿ ಗೆಲುವನ್ನು ಖಚಿತ ಪಡಿಸಿಕೊಂಡಿದ್ದರು. ಆದರೆ ಐಪಿಎಲ್ 2022 ರಲ್ಲಿ ತನ್ನ ಮೊದಲ ಪಂದ್ಯವನ್ನು ಆಡುತ್ತಿರುವ ಪ್ಯಾಟ್ ಕಮಿನ್ಸ್ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಈ ಮೂಲಕ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಐಪಿಎಲ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ಕೆಎಲ್ ರಾಹುಲ್ ಅವರ ದಾಖಲೆಯನ್ನು ಸರಿಗಟ್ಟಿದ್ದರು. ಅಷ್ಟೇ ಅಲ್ಲದೆ ಐಪಿಎಲ್​ನ 8 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.

ಬುಧವಾರ ನಡೆದ ಈ ಪಂದ್ಯದಲ್ಲಿ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 15 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿದ್ದರು. ಈ ಇನ್ನಿಂಗ್ಸ್‌ನೊಂದಿಗೆ ಕಮ್ಮಿನ್ಸ್ ಸುರೇಶ್ ರೈನಾ ಅವರ 8 ವರ್ಷಗಳ ಹಳೆಯ ದಾಖಲೆಯನ್ನೂ ಮುರಿದ್ದಾರೆ. ಕಮ್ಮಿನ್ಸ್ ಕೇವಲ 15 ಎಸೆತಗಳಲ್ಲಿ 373.33 ಸ್ಟ್ರೈಕ್ ರೇಟ್‌ನಲ್ಲಿ ಔಟಾಗದೆ 56 ರನ್ ಗಳಿಸುವ ಮೂಲಕ ಹೊಸ ಇತಿಹಾಸ ಬರೆದರು. ಇದು ಐಪಿಎಲ್ ಇತಿಹಾಸದಲ್ಲಿ ಇನ್ನಿಂಗ್ಸ್‌ನಲ್ಲಿ ಅತ್ಯಂತ ಸ್ಫೋಟಕ ಸ್ಟ್ರೈಕ್ ರೇಟ್‌ನ ದಾಖಲೆಯಾಗಿದೆ.

ಕನಿಷ್ಠ 15 ಎಸೆತಗಳ ಇನ್ನಿಂಗ್ಸ್​ಗಳ ದಾಖಲೆಯ ಪಟ್ಟಿಯಲ್ಲಿ ಈ ಹಿಂದೆ ಈ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿತ್ತು. ಮಾಜಿ CSK ಆಟಗಾರ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 348 ಸ್ಟ್ರೈಕ್ ರೇಟ್‌ನೊಂದಿಗೆ ಕೇವಲ 25 ಎಸೆತಗಳಲ್ಲಿ 87 ರನ್‌ಗಳ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದರು. ಇದೀಗ ಈ ದಾಖಲೆಯನ್ನು ಪ್ಯಾಟ್ ಕಮಿನ್ಸ್ ಮುರಿದಿದ್ದಾರೆ. ಕೇವಲ 15 ಎಸೆತಗಳಲ್ಲಿ 373.33 ಸ್ಟ್ರೈಕ್ ರೇಟ್‌ನಲ್ಲಿ ಅಜೇಯ 56 ರನ್ ಗಳಿಸುವ ಮೂಲಕ ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

ಅಂದಹಾಗೆ ಮುಂಬೈ ಇಂಡಿಯನ್ಸ್ ವಿರುದ್ದ ಕಮಿನ್ಸ್ ಅಬ್ಬರಿಸುತ್ತಿರುವುದು ಇದು 3ನೇ ಬಾರಿ. ಈ ಹಿಂದೆ 2020ರಲ್ಲಿಯೂ ಕಮ್ಮಿನ್ಸ್ ಮುಂಬೈ ವಿರುದ್ಧ ಎರಡು ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಮೊದಲ ಪಂದ್ಯದಲ್ಲಿ ಕಮ್ಮಿನ್ಸ್ ಕೇವಲ 12 ಎಸೆತಗಳಲ್ಲಿ 275 ಸ್ಟ್ರೈಕ್ ರೇಟ್‌ನಲ್ಲಿ 33 ರನ್ (1 ಬೌಂಡರಿ, 4 ಸಿಕ್ಸರ್) ಬಾರಿಸಿದ್ದರು. ಮತ್ತೊಂದು ಪಂದ್ಯದಲ್ಲಿ 147 ಸ್ಟ್ರೈಕ್ ರೇಟ್‌ನಲ್ಲಿ 36 ಎಸೆತಗಳಲ್ಲಿ ಅಜೇಯ 53 ರನ್ (5 ಬೌಂಡರಿ, 2 ಸಿಕ್ಸರ್) ಬಾರಿಸಿ ಮಿಂಚಿದ್ದರು. ಇದೀಗ ಸರ್ವಶ್ರೇಷ್ಠ ಸ್ಟ್ರೈಕ್ ರೇಟ್​ನೊಂದಿಗೆ ಪ್ಯಾಟ್ ಕಮಿನ್ಸ್ ಹೊಸ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?