ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಪ್ಯಾಟ್ ಕಮಿನ್ಸ್ ಡೌಟ್

India vs Australia: ಏಕದಿನ ವಿಶ್ವಕಪ್​ಗೂ ಆರಂಭಕ್ಕೂ 2 ವಾರ ಮುಂಚಿತವಾಗಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ.

ಟೀಮ್ ಇಂಡಿಯಾ ವಿರುದ್ಧದ ಸರಣಿಗೆ ಪ್ಯಾಟ್ ಕಮಿನ್ಸ್ ಡೌಟ್
Pat Cummins
Follow us
| Updated By: ಝಾಹಿರ್ ಯೂಸುಫ್

Updated on: Aug 05, 2023 | 5:34 PM

ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಕಾಣಿಸಿಕೊಳ್ಳುವುದು ಅನುಮಾನ. ಇತ್ತೀಚೆಗೆ ಮುಕ್ತಾಯಗೊಂಡ ಆ್ಯಶಸ್ ಸರಣಿಯ ಐದನೇ ಟೆಸ್ಟ್ ಪಂದ್ಯದ ವೇಲೆ ಕಮಿನ್ಸ್ ಅವರ ಎಡ ಮಣಿಕಟ್ಟಿನ ಭಾಗಕ್ಕೆ ಗಾಯವಾಗಿತ್ತು. ಈ ಗಾಯದ ಹಿನ್ನೆಲೆಯಲ್ಲಿ ಆಸೀಸ್ ನಾಯಕ ಟೀಮ್ ಇಂಡಿಯಾ ವಿರುದ್ಧದ ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಭಾರತದ ವಿರುದ್ಧ ಆಸ್ಟ್ರೇಲಿಯಾದ ಏಕದಿನ ಸರಣಿ ಸೆಪ್ಟೆಂಬರ್ 22 ರಂದು ಶುರುವಾಗಲಿದೆ. ಈ ಸರಣಿಗೆ ಇನ್ನೂ ಕೂಡ ಸಮಯವಕಾಶವಿದೆ. ಆದರೆ ಮುಂಬರುವ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳದಿರಲು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಪ್ಯಾಟ್ ಕಮಿನ್ಸ್​ಗೆ ಸೂಚಿಸಿದೆ.

ಹೀಗಾಗಿ ಭಾರತದ ವಿರುದ್ಧದ ಏಕದಿನ ಸರಣಿಯಲ್ಲಿ ಕಮಿನ್ಸ್ ಬದಲು ಮತ್ತೋರ್ವ ಆಟಗಾರ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

ಮಿಚೆಲ್ ಮಾರ್ಷ್ ಅಥವಾ ಸ್ಟೀವ್ ಸ್ಮಿತ್ ನಾಯಕ? ಟೀಮ್ ಇಂಡಿಯಾ ವಿರುದ್ಧದ ಸರಣಿಯಿಂದ ಪ್ಯಾಟ್ ಕಮಿನ್ಸ್ ಹೊರಗುಳಿದರೆ ಸ್ಟೀವ್ ಸ್ಮಿತ್ ಅಥವಾ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸಬಹುದು. ಕಳೆದ ಬಾರಿ ಭಾರತದ ವಿರುದ್ಧದ ಏಕದಿನ ಸರಣಿಯಿಂದ ಕಮಿನ್ಸ್ ಹೊರಗುಳಿದಿದ್ದರು. ಈ ವೇಳೆ ಸ್ಮಿತ್ ತಂಡವನ್ನು ಮುನ್ನಡೆಸಿದ್ದ ಕಾರಣ, ಈ ಬಾರಿಯೂ ಅವರಿಗೆ ನಾಯಕತ್ವ ಒಲಿಯುವ ಸಾಧ್ಯತೆಯಿದೆ.

ವಿಶ್ವಕಪ್​ಗೆ ಪೂರ್ವಭಾವಿ ಪಂದ್ಯಗಳು:

ಏಕದಿನ ವಿಶ್ವಕಪ್​ಗೂ ಆರಂಭಕ್ಕೂ 2 ವಾರ ಮುಂಚಿತವಾಗಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದೆ. ಇದು ಒಂದಾರ್ಥದಲ್ಲಿ ಆಸೀಸ್ ತಂಡಕ್ಕೆ ಭಾರತದ ಪರಿಸ್ಥಿತಿಗೆ ಒಗ್ಗಿಕೊಳ್ಳಲು ಪೂರ್ವಭಾವಿ ಪಂದ್ಯವಾಗಿರಲಿದೆ. ಏಕದಿನ ವಿಶ್ವಕಪ್​ ಆರಂಭಕ್ಕೂ ಇಂತಹದೊಂದು ಸರಣಿ ಆಯೋಜಿಸಿರುವುದೇ ಅಚ್ಚರಿ. ಏಕೆಂದರೆ ಟೀಮ್ ಇಂಡಿಯಾ ಏಕದಿನ ವಿಶ್ವಕಪ್​ನಲ್ಲಿ ತನ್ನ ಮೊದಲ ಪಂದ್ಯವನ್ನು ಆಡಲಿರುವುದು ಆಸ್ಟ್ರೇಲಿಯಾ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ನಡೆಯಲಿರುವ ಆಸೀಸ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಅಂದರೆ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಬಳಿಕ ಟೀಮ್ ಇಂಡಿಯಾ ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದ್ದು, ಅಲ್ಲೂ ಕೂಡ ಆಸೀಸ್ ಪಡೆಯನ್ನೇ ತನ್ನ ಮೊದಲ ಪಂದ್ಯದಲ್ಲಿ ಎದುರಿಸಲಿದೆ. ಹೀಗಾಗಿಯೇ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯು ಟೀಮ್ ಇಂಡಿಯಾ ಮುಂದಿರುವ ದೊಡ್ಡ ಸವಾಲು. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸಮಸ್ಯೆಗಳು ಬಹಿರಂಗವಾದರೆ, ಎದುರಾಳಿ ತಂಡಗಳಿಗೆ ಪ್ಲ್ಯಾನ್ ರೂಪಿಸಲು ಮತ್ತಷ್ಟು ಅನುಕೂಲವಾಗುವುದರಲ್ಲಿ ಅನುಮಾನವೇ ಇಲ್ಲ.

ಇದನ್ನೂ ಓದಿ: Tilak Varma: ದಾಖಲೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ ತಿಲಕ್ ವರ್ಮಾ

ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ ಹೀಗಿದೆ:

  1. ಮೊದಲ ಏಕದಿನ ಪಂದ್ಯ (ಮೊಹಾಲಿ, ಸೆಪ್ಟೆಂಬರ್ 22, 2023)
  2. ಎರಡನೇ ಏಕದಿನ ಪಂದ್ಯ (ಇಂದೋರ್, ಸೆಪ್ಟೆಂಬರ್ 24, 2023)
  3. ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್, ಸೆಪ್ಟೆಂಬರ್ 27, 2023).
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು