T20 World Cup 2024: ಪ್ಯಾಟ್ ಕಮ್ಮಿನ್ಸ್​ಗೆ ಹ್ಯಾಟ್ರಿಕ್ ವಿಕೆಟ್; ಭಾರತಕ್ಕೆ ಈ ಸಲ ಕಪ್! ಹೀಗೊಂದು ಕಾಕತಾಳೀಯ

T20 World Cup 2024: ಬಾಂಗ್ಲಾದೇಶದ ವಿರುದ್ಧ ಕಮ್ಮಿನ್ಸ್ 4 ಓವರ್‌ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದರು. 2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‌ನಲ್ಲಿ ಬ್ರೆಟ್ ಲೀ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಆ ವರ್ಷ ಭಾರತ ಟಿ20 ವಿಶ್ವಕಪ್ ಗೆದ್ದಿತ್ತು. ವಿಸ್ಮಯಕಾರಿ ಸಂಗತಿಯೆಂದರೆ ಬ್ರೆಟ್ ಲೀ ಕೂಡ ಬಾಂಗ್ಲಾದೇಶದ ವಿರುದ್ಧವೇ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

T20 World Cup 2024: ಪ್ಯಾಟ್ ಕಮ್ಮಿನ್ಸ್​ಗೆ ಹ್ಯಾಟ್ರಿಕ್ ವಿಕೆಟ್; ಭಾರತಕ್ಕೆ ಈ ಸಲ ಕಪ್! ಹೀಗೊಂದು ಕಾಕತಾಳೀಯ
ಟೀಂ ಇಂಡಿಯಾ, ಆಸ್ಟ್ರೇಲಿಯಾ
Follow us
ಪೃಥ್ವಿಶಂಕರ
|

Updated on:Jun 21, 2024 | 4:29 PM

ಆಸ್ಟ್ರೇಲಿಯಾದ ಬೌಲರ್ ಪ್ಯಾಟ್ ಕಮ್ಮಿನ್ಸ್ 2024 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2024) ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ (Pat Cummins) ತಮ್ಮ ಕೊನೆಯ ಎರಡು ಓವರ್‌ಗಳಲ್ಲಿ ಈ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಪ್ಯಾಟ್ ಕಮಿನ್ಸ್ ಅವರು ಬಾಂಗ್ಲಾ ತಂಡದ ಮಹಮ್ಮದುಲ್ಲಾ, ಮೆಹದಿ ಹಸನ್ ಮತ್ತು ತೌಹೀದ್ ಹೃದಯ್ ಅವರನ್ನು ಸತತ ಮೂರು ಎಸೆತಗಳಲ್ಲಿ ಔಟ್ ಮಾಡುವ ಮೂಲಕ ಟಿ20 ವಿಶ್ವಕಪ್‌ನಲ್ಲಿ ತಮ್ಮ ಮೊದಲ ಹ್ಯಾಟ್ರಿಕ್ ಪಡೆದರು. ಬಾಂಗ್ಲಾದೇಶದ ಇನಿಂಗ್ಸ್‌ನ 18ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಕಮ್ಮಿನ್ಸ್ ಮಹಮ್ಮದುಲ್ಲಾ ಮತ್ತು ಮೆಹದಿ ಹಸನ್ ಅವರ ವಿಕೆಟ್ ಉರುಳಿಸಿದ್ದರು. ಆ ಬಳಿಕ 20ನೇ ಓವರ್​ನ ಮೊದಲ ಎಸೆತದಲ್ಲಿ ತೌಹೀದ್ ಹೃದಯ್ ಅವರನ್ನು ಔಟ್ ಮಾಡುವ ಮೂಲಕ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ 7ನೇ ಹ್ಯಾಟ್ರಿಕ್ ಆಗಿದ್ದರೆ, ಇತ್ತ ಆಸೀಸ್ ಬೌಲರ್ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವುದರೊಂದಿಗೆ ಟೀಂ ಇಂಡಿಯಾ (Team India) ಈ ಬಾರಿಯ ಚಾಂಪಿಯನ್ ಆಗುವ ಬಯಕೆಗೆ ಮತ್ತಷ್ಟು ಬಲ ತುಂಬಿದ್ದಾರೆ.

ಹೀಗೊಂದು ಕಾಕತಾಳೀಯ

ಬಾಂಗ್ಲಾದೇಶದ ವಿರುದ್ಧ ಕಮ್ಮಿನ್ಸ್ 4 ಓವರ್‌ಗಳಲ್ಲಿ 29 ರನ್ ನೀಡಿ 3 ವಿಕೆಟ್ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿದರು. ಇದರೊಂದಿಗೆ ಬ್ರೆಟ್ ಲೀ ನಂತರ ಟಿ20 ವಿಶ್ವಕಪ್ ಪಿಚ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಆಸ್ಟ್ರೇಲಿಯಾದ ಎರಡನೇ ಬೌಲರ್ ಎನಿಸಿಕೊಂಡರು. 2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್‌ನಲ್ಲಿ ಬ್ರೆಟ್ ಲೀ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಆ ವರ್ಷ ಭಾರತ ಟಿ20 ವಿಶ್ವಕಪ್ ಗೆದ್ದಿತ್ತು. ವಿಸ್ಮಯಕಾರಿ ಸಂಗತಿಯೆಂದರೆ ಬ್ರೆಟ್ ಲೀ ಕೂಡ ಬಾಂಗ್ಲಾದೇಶದ ವಿರುದ್ಧವೇ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಈಗ, 2024 ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಆಸ್ಟ್ರೇಲಿಯಾದ ಮತ್ತೊಬ್ಬ ಬೌಲರ್ ಹ್ಯಾಟ್ರಿಕ್‌ ವಿಕೆಟ್ ಪಡೆಯುವುದರೊಂದಿಗೆ ಈ ಬಾರಿಯೂ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲುವ ಕಾಕತಾಳೀಯತೆಯ ಸಾಧ್ಯತೆಗಳು ಹೆಚ್ಚುತ್ತಿವೆ.

AUS vs BAN: ಬಾಂಗ್ಲ ವಿರುದ್ಧ ಗೆದ್ದು ಟೀಂ ಇಂಡಿಯಾಕ್ಕೂ ಆಘಾತ ನೀಡಿದ ಆಸ್ಟ್ರೇಲಿಯಾ..!

ಈ ಸಾಧನೆ ಮಾಡಿದ 7ನೇ ಬೌಲರ್

ಟಿ20 ವಿಶ್ವಕಪ್ ಇತಿಹಾಸದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವದ 7ನೇ ಬೌಲರ್ ಕಮ್ಮಿನ್ಸ್. ಬ್ರೆಟ್ ಲೀ ಈ ಸಾಧನೆ ಮಾಡಿದವರಲ್ಲಿ ಮೊದಲಿಗರು. ಅದರ ನಂತರ, 2021 ರ ಟಿ20 ವಿಶ್ವಕಪ್‌ನಲ್ಲಿ ಐರ್ಲೆಂಡ್‌ನ ಕರ್ಟಿಸ್ ಕ್ಯಾಂಫರ್. 2021 ರ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾದ ವನಿಂದು ಹಸರಂಗಾ ಮತ್ತು ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಕೂಡ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಯುಎಇಯ ಕಾರ್ತಿಕ್ ಮೆಯ್ಯಪನ್ ಮತ್ತು ಐರ್ಲೆಂಡ್‌ನ ಜೋಶ್ ಲಿಟಲ್ 2022 ರ ಟಿ20 ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್ ಪಡೆದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Fri, 21 June 24

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ