AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಸೋಲಿನಿಂದ ನಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಅಳೆಯಬೇಡಿ!

IPL 2026 GT vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 168 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 14.5 ಓವರ್​ಗಳಲ್ಲಿ ಕೇವಲ 86 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡ 82 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಒಂದು ಸೋಲಿನಿಂದ ನಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಅಳೆಯಬೇಡಿ!
Pat Cummins
ಝಾಹಿರ್ ಯೂಸುಫ್
|

Updated on: May 13, 2026 | 11:10 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 168 ರನ್​ಗಳನ್ನು ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡ 14.5 ಓವರ್​ಗಳಲ್ಲಿ 86 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಎಸ್​ಆರ್​ಹೆಚ್ ತಂಡ ಬರೋಬ್ಬರಿ 82 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ಎಸ್​ಆರ್​ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್,  ಎರಡನೇ ಇನ್ನಿಂಗ್ಸ್‌ನಲ್ಲಿ ಪಿಚ್ ಬ್ಯಾಟಿಂಗ್ ಮಾಡಲು ಸಾಕಷ್ಟು ಕಷ್ಟಕರವಾಗಿತ್ತು. ವಿಶೇಷವಾಗಿ ಎದುರಾಳಿ ಬೌಲರ್‌ಗಳು ‘ಬ್ಯಾಕ್ ಆಫ್ ದಿ ಲೆಂತ್’  ಎಸೆತಗಳನ್ನು ನಿರಂತರವಾಗಿ ಹಾಕಿ ನಮಗೆ ರನ್ ಗಳಿಸಲು ಯಾವುದೇ ಅವಕಾಶ ನೀಡಲಿಲ್ಲ. ಇದು ಟಿ20 ಕ್ರಿಕೆಟ್‌ನಲ್ಲಿ ಕಂಡುಬಂದ ಅತ್ಯುತ್ತಮ ಬೌಲಿಂಗ್ ಪ್ರದರ್ಶನಗಳಲ್ಲಿ ಒಂದಾಗಿದೆ ಎಂದರು.

ಎದುರಾಳಿಗಳ ಬೌಲಿಂಗ್ ಶೈಲಿಯನ್ನು ಗಮನಿಸಿದಾಗ, ನಮ್ಮ ಬೌಲಿಂಗ್ ಅವಧಿಯಲ್ಲಿ ನಾವೂ ಕೂಡ ಲೈನ್ ಮತ್ತು ಲೆಂತ್ ಅನ್ನು ಇನ್ನು ಸ್ವಲ್ಪ ದೀರ್ಘಕಾಲ ಕಾಯ್ದುಕೊಳ್ಳಬೇಕಿತ್ತೇನೋ ಎನಿಸುತ್ತದೆ. ಈ ತಪ್ಪುಗಳಿಂದ ನಾವು ಪಾಠ ಕಲಿಯಲಿದ್ದೇವೆ ಎಂದು ಪ್ಯಾಟ್ ಕಮಿನ್ಸ್ ಹೇಳಿದ್ದಾರೆ.

ಈ ಸೋಲಿನ ಹೊರತಾಗಿಯೂ ನಮ್ಮ ಅಗ್ರ ಕ್ರಮಾಂಕದ ಬ್ಯಾಟಿಂಗ್ ಅತ್ಯುತ್ತಮವಾಗಿದೆ. ಅಗ್ರ ನಾಲ್ಕು ಬ್ಯಾಟರ್‌ಗಳಲ್ಲಿ ಪ್ರತಿಯೊಬ್ಬರೂ ಈಗಾಗಲೇ 400ಕ್ಕೂ ಹೆಚ್ಚು ರನ್‌ಗಳನ್ನು ಕಲೆಹಾಕಿದ್ದಾರೆ. ಆದ್ದರಿಂದ ಈ ಒಂದು ಪಂದ್ಯದ ಪ್ರದರ್ಶನವನ್ನು ಅತಿಯಾಗಿ ವಿಶ್ಲೇಷಿಸುವ ಅಗತ್ಯವಿಲ್ಲ. ಟಿ20 ಕ್ರಿಕೆಟ್‌ನಲ್ಲಿ ಇಂತಹ ಏರಿಳಿತಗಳು ಸಹಜ ಎಂದು ಕಮಿನ್ಸ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: IPL 2026: 4+2+6 ಸಂಯೋಜನೆಯಲ್ಲಿ ಕಣಕ್ಕಿಳಿಯಲಿದೆ RCB

ಇನ್ನು ಪ್ಲೇಆಫ್ ಹಾದಿ ಬಗ್ಗೆ ಮಾತನಾಡಿದ ಪ್ಯಾಟ್ ಕಮಿನ್ಸ್, ಕಳೆದ ಏಳು ಪಂದ್ಯಗಳಲ್ಲಿ ನಾವು 5 ಅಥವಾ 6 ಪಂದ್ಯಗಳನ್ನು ಗೆದ್ದಿರುವುದರಿಂದ ಸದ್ಯಕ್ಕೆ ನಮ್ಮ ತಂಡ ಸುಸ್ಥಿತಿಯಲ್ಲಿದೆ. ಪ್ಲೇಆಫ್ ತಲುಪಲು ಇನ್ನು ಎರಡು ಪಂದ್ಯಗಳು ಬಾಕಿ ಇವೆ. ನಮಗೆ ಪರಿಚಿತವಿರುವ ಕ್ರೀಡಾಂಗಣಗಳಲ್ಲಿ ಮುಂದಿನ ಪಂದ್ಯಗಳು ನಡೆಯಲಿದ್ದು, ಹಳೆಯ ಗೆಲುವಿನ ಸೂತ್ರಕ್ಕೆ ಮರಳಿ, ಈ ಸೋಲನ್ನು ಮರೆತು ಮುನ್ನಡೆಯಲಿದ್ದೇವೆ ಎಂದಿದ್ದಾರೆ.

ಈ ಮೂಲಕ ಮುಂಬರುವ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಪ್ಲೇಆಫ್​ಗೇರಲಿದೆ ಎಂದು ಪ್ಯಾಟ್ ಕಮಿನ್ಸ್​ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್